ಬಿಜೆಪಿ ಹೈಕಮಾಂಡ್ ವಿರುದ್ಧ ಯಡಿಯೂರಪ್ಪ ಬೆಂಬಲಿಗರ ಆಕ್ರೋಶ

ಬೆಂಗಳೂರು, ಆಗಸ್ಟ್ 26: ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸುತ್ತಿರುವ ಬಿಜೆಪಿ ಹೈಕಮಾಂಡ್ ವಿರುದ್ಧ ಯಡಿಯೂರಪ್ಪ ಬೆಂಬಲಿಗರು ತೀವ್ರ ಆಕ್ರೋಶಗೊಂಡಿದ್ದಾರೆ.

ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಅಲಕ್ಷಿಸುತ್ತಿರುವುದು, ಅವರಿಗೆ ಆಯ್ಕೆಯ ಸ್ವಾತಂತ್ರ್ಯ ನೀಡದಿರುವುದು, ಯಡಿಯೂರಪ್ಪ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳದೇ ಇರುವುದು ಯಡಿಯೂರಪ್ಪ ಬೆಂಬಲಿಗರನ್ನು ಸಿಟ್ಟಿಗೆಬ್ಬಿಸಿದೆ.

ರಾಜ್ಯ ರಾಜಾರಕರಣದ ಎಲ್ಲ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತಿದ್ದು, ಯಡಿಯೂರಪ್ಪ ಅವರ ಯಾವ ಮಾತೂ ನಡೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಸ್ವತಃ ಯಡಿಯೂರಪ್ಪ ಅವರಿಗೆ ತೀವ್ರ ಬೇಸರ ತಂದಿದೆ. ಅಂತೆಯೇ ಅವರ ಅಭಿಮಾನಿಗಳಿಗೂ ಬೇಸರ ತರಿಸಿದೆ.

Yediyurappa followers upset with BJP high command

'ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿದ್ದು ಯಡಿಯೂರಪ್ಪ ಅವರೇ ಹೊರತು, ಮೋದಿ, ಅಮಿತ್ ಶಾ ಅಲ್ಲ' ಎಂದು ಕೆಲವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ವೀರಶೈವ ಲಿಂಗಾಯತ ಮಹಾಸಭವು ಈ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದು, ಯಡಿಯೂರಪ್ಪ ಅವರಿಗೆ ಅವಮಾನವಾದರೆ ಸುಮ್ಮನೆ ಕೂರುವುದಿಲ್ಲ ಎಂದು ಕೆಲವರು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಅಬ್ಬರಿಸಿದ್ದಾರೆ.

ವಿಪಕ್ಷಗಳ ಕೆಲ ಸದಸ್ಯರೂ ಸಹ ಯಡಿಯೂರಪ್ಪ ಅವರನ್ನು ಹೈಕಮಾಂಡ್ ನಡೆಸಿಕೊಳ್ಳುತ್ತಿರುವ ರೀತಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರು ತಮ್ಮ ಸ್ವಾಭಿಮಾನವನ್ನೆಲ್ಲಾ ಕಳೆದುಕೊಂಡಿದ್ದಾರೆ. ರಾಜ್ಯದ ದೊಡ್ಡ ನಾಯಕ ಹೈಕಮಾಂಡ್ ಮಂದೆ ಕೈಕಟ್ಟಿ ನಿಲ್ಲುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+