ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಚಾರ ನಿಯಮ ಉಲ್ಲಂಘನೆ: ದಂಡ ಮೊತ್ತ ಕಡಿತಕ್ಕೆ ಯಡಿಯೂರಪ್ಪ ಸೂಚನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 11: ಸಂಚಾರ ನಿಯಮ ಉಲ್ಲಂಘನೆ ದಂಡ ಮೊತ್ತ ಕಡಿತಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ ದುಬಾರಿ ಮೊತ್ತದ ದಂಡ ವಿಧಿಸುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಕೂಡಲೇ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಬ್ರೇಕಿಂಗ್ ನ್ಯೂಸ್: ಸಂಚಾರಿ ನಿಯಮ ಉಲ್ಲಂಘನೆ ದಂಡ ಮೊತ್ತ ಕಡಿತಬ್ರೇಕಿಂಗ್ ನ್ಯೂಸ್: ಸಂಚಾರಿ ನಿಯಮ ಉಲ್ಲಂಘನೆ ದಂಡ ಮೊತ್ತ ಕಡಿತ

ಸಂಚಾರಿ ನಿಯಮ ಉಲ್ಲಂಘನೆಗೆ ಭಾರಿ ಮೊತ್ತದ ದಂಡ ವಿಧಿಸುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ಸೆಪ್ಟೆಂಬರ್ 1 ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹವಾಗಿದೆ.

Yediyurappa Give Instruction For Traffic Fine Reduction

ಗುಜರಾತ್‌ನಲ್ಲಿ ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಇರುವ ದಂಡವನ್ನು 2000 ದಿಂದ 500ಕ್ಕೆ, ಡಿಎಲ್ ಇಲ್ಲದ ಪ್ರಯಾಣಕ್ಕೆ 5000 ರಿಂದ 2 ಸಾವಿರಕ್ಕೆ ಇಳಿಸುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಕರ್ನಾಟಕದಲ್ಲೂ ಯಡಿಯೂರಪ್ಪ ಸೂಚನೆ ಮೇರೆಗೆ ದಂಡ ಮೊತ್ತ ಕಡಿಮೆ ಮಾಡುವ ಕುರಿತು ಶೀಘ್ರವೇ ನಿರ್ಧಾರ ಪ್ರಕಟಿಸಿಲಿದ್ದಾರೆ.

English summary
Chief Minister BS Yediyurappa has given instruction to Transport department to Reduce Traffic Violition Fine amount.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X