ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪದವಿ ತರಗತಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸೂಚನೆ!

|
Google Oneindia Kannada News

ಬೆಂಗಳೂರು, ಅ. 23: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ 7 ತಿಂಗಳುಗಳಿಂದ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಂಡಿವೆ. ಕೊರೊನಾ ಆತಂಕದ ಮಧ್ಯೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಆದರೆ ತರಗತಿಗಳನ್ನು ನಡೆಸಲು ಸರ್ಕಾರ ಮುಂದಾಗಿರಲಿಲ್ಲ. ಇದೀಗ ಕಾಲೇಜು ತರಗತಿಗಳನ್ನು ನಡೆಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಕಾಲೇಜು ಆರಂಭಿಸುವ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಸೂಚನೆಗಳನ್ನು ಕೊಟ್ಟಿದ್ದಾರೆ. ಡಿಜಿಟಲ್ ಕಲಿಕೆಕ ಕುರಿತು ಮಹತ್ವದ ತೀರ್ಮಾನವನ್ನು ಯಡಿಯೂರಪ್ಪ ಅವರು ತೆಗೆದುಕೊಂಡಿದ್ದು, ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವಂತೆ ಟ್ಯಾಬ್ಲೆಟ್‌ಗಳನ್ನು ಖರೀದಿಸಲು ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ಅಭಿವೃದ್ದಿ ಇಲಾಖೆಗಳಿಂದ ನೆರವು ಪಡೆಯಲು ಸೂಚಿಸಿದ್ದಾರೆ.

ಆಪ್‌ಲೈನ್ ತರಗತಿ ಆರಂಭಿಸಲು ಇದು ಸಕಾಲ

ಆಪ್‌ಲೈನ್ ತರಗತಿ ಆರಂಭಿಸಲು ಇದು ಸಕಾಲ

ಕಾಲೇಜುಗಳನ್ನು ತೆರೆಯುವ ಕುರಿತು ಸಿಎಂ ಯಡಿಯೂರಪ್ಪ ಅವರು ಸಭೆಯಲ್ಲಿ ತಜ್ಞರ ಮಾಹಿತಿ ಹೇಳಿದರು. ಆಗ ಮಾತನಾಡಿದ ಶಿಕ್ಷಣ ತಜ್ಞ ಪ್ರೊ. ದೊರೈಸ್ವಾಮಿ ಅವರು ಆಫ್‌ಲೈನ್ ಹಾಗೂ ಆನ್‌ಲೈನ್‌ ಕಲಿಕೆಗಳ ಬಗ್ಗೆ ತಮ್ಮ ವಿಚಾರಗಳನ್ನು ಮಂಡಿಸಿದರು. ಜೊತೆಗೆ ಕಾಲೇಜುಗಳನ್ನು ತೆರೆದು ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅವಕಾಶ ಮಾಡಿಕೊಡಲು ಇದು ಸಕಾಲ ಎಂದು ಸಿಎಂ ಯಡಿಯೂರಪ್ಪ ಅವರಿಗೆ ವಿವರಿಸಿದರು.

ಕಡ್ಡಾಯ ಹಾಜರಾತಿಯಿಂದ ವಿನಾಯತಿ

ಕಡ್ಡಾಯ ಹಾಜರಾತಿಯಿಂದ ವಿನಾಯತಿ

ಆದರೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವ ತೀರ್ಮಾನವನ್ನು ಅವರಿಗೆ ಬಿಡಿ ಎಂದು ಸೂಚಿಸಿದರು. ಅದಕ್ಕೆ ಸಭೆಯಲ್ಲಿ ಸಹಮತ ವ್ಯಕ್ತವಾಯಿತು. ಹೀಗಾಗಿ ಕೊರೊನಾ ವೈರಸ್ ಸಂಪೂರ್ಣವಾಗಿ ತೊಲಗುವವರೆಗೆ, ವಿದ್ಯಾರ್ಥಿಗಳು ಕಡ್ಡಾಯವಾಗಿ ತರಗತಿಗಳಿಗೆ ಕಡ್ಡಾಯವಲ್ಲ, ಕಾಲೇಜಿಗೆ ಬಂದು ಕಲಿಯಲು ಬಯಸುವ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲು ಸಿಎಂ ಯಡಿಯೂರಪ್ಪ ಸೂಚಿಸಿದರು.

ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ

ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ

ಜೊತೆಗೆ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಸಿದ್ಧಪಡಿಸಿದ್ದ ಮಾರ್ಗಸೂಚಿ (SOP)ಯ ಬಗ್ಗೆ ಮಾಹಿತಿ ಪಡೆದರು. ವಿದ್ಯಾಗಮ ಯೋಜನೆಯಂತೆ ಸರ್ಕಾರದ ಮೇಲೆ ಯಾವುದೇ ಒತ್ತಡ ಬರಬಾರದು. ಹಾಗೆ ಉನ್ನತ ಶಿಕ್ಷಣ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಸಭೆಯಲ್ಲಿ ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.

Recommended Video

Robbery in Filmy Style | ಇಂಥಾ ಕಳ್ಳರನ್ನ ಎಲ್ಲು ನೋಡಿಲ್ಲಾ!! | Oneindia Kannada
ವಿದ್ಯಾರ್ಥಿಗಳಿಂದಲೇ ಬೇಡಿಕೆ

ವಿದ್ಯಾರ್ಥಿಗಳಿಂದಲೇ ಬೇಡಿಕೆ

ಕಾಲೇಜು ತರಗತಿಗಳನ್ನು ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವರಿಸಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಅವರು, ಕಾಲೇಜು ತೆರೆಯುವಿಕೆಯ ಬಗ್ಗೆ ವಿದ್ಯಾರ್ಥಿಗಳಿಂದಲೇ ಬೇಡಿಕೆ ಬಂದಿದ್ದು, ಕ್ಯಾಂಪಸ್‍ ಇಂಟರ್‍ವ್ಯೂ, ಪ್ಲೇಸ್‍ಮೆಂಟ್‍ಗಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಇವರೆಲ್ಲರಿಗೂ ಸೂಕ್ತ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸಲು ಇಲಾಖೆ ಸಜ್ಜಾಗಿದೆ. ಹೀಗಾಗಿ ಕಾಲೇಜು ತೆರೆಯಲು ಅನುಮತಿ ಬೇಕು ಎಂದರು. ಜೊತೆಗೆ ಆನ್‌ಲೈನ್ ಶಿಕ್ಷಣವೂ ಮುಂದುವರಿಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರ ಅಭಿಪ್ರಾಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

English summary
Chief Minister BS Yediyurappa has given important suggestions to the higher education department regarding colleges openinig in Karnataka, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X