ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಂದ್: ಮನವಿ ರೂಪದ ಎಚ್ಚರಿಕೆ ನೀಡಿದ ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಡಿ. 04: ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ರಚನೆ ಮಾಡಿರುವ ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ನಾಳೆ (ಡಿ. 05) ಕರ್ನಾಟಕ ಬಂದ್‌ಗೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಕರೆ ಕೊಟ್ಟಿದೆ. ಒಕ್ಕೂಟದ ಬಂದ್ ಕರೆಗೆ ಇದೀಗ ಬೆಂಬಲ ವ್ಯಕ್ತವಾಗುತ್ತಿದೆ. ಕರ್ನಾಟಕ ಬಂದ್ ಕುರಿತು ಹಗುರವಾಗಿ ಮಾತನಾಡಿದ್ದ ಬಿಜೆಪಿ ನಾಯಕರು ಇದೀಗ ಬಂದ್‌ಗೆ ಬೆಂಬಲ ವ್ಯಕ್ತವಾಗುತ್ತಿರುವುದನ್ನು ಮನಗೊಂಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಂದ್ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನಾನು ಎಲ್ಲ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದೇನೆ. ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಅದರ ಅಗತ್ಯತೆಯೂ ಇಲ್ಲ. ಕನ್ನಡಕ್ಕೆ ಏನೇನೋ ಆದ್ಯತೆ ಕೊಡಬೇಕೋ, ಇನ್ನೂ ಹೆಚ್ಚಿನದಾಗಿ ಏನೇನು ಕೊಡಬೇಕೋ ಅದನ್ನು ಕೊಡಲು ನಾನು ಸಿದ್ದನಿದ್ದೇನೆ.

 yediyurappa has appealed that karnataka bandh is not allowed any where in state

ಕನ್ನಡ ಪರ ಮುಖಂಡರು ಏನು ಹೇಳುತ್ತಾರೊ ಅದನ್ನು ನಾನು ಮಾಡಲು ಸಿದ್ಧನಿದ್ದೇನೆ. ದಯಮಾಡಿ ಬಂದ್‌ಗೆ ಎಲ್ಲಿಯೂ ಕೂಡ ಅವಕಾಶ ಇಲ್ಲ. ಯಾರು ಕೂಡ ಬಂದ್ ಮಾಡಬೇಡಿ. ದಯವಿಟ್ಟು ಇದಕ್ಕೆ ಎಲ್ಲರೂ ಸಹಕರಿಸಿಬೇಕು ಎಂದು ಮನವಿ ರೂಪದಲ್ಲಿ ಎಚ್ಚರಿಕೆ ನೀಡಿದ್ದಾರೆ.

Recommended Video

ನಾಳೆ ಬಂದ್ ಮಾಡುವವರಿಗೆ ಕಿವಿ ಮಾತು ಹೇಳಿದ ಮುಖ್ಯಮಂತ್ರಿಗಳು | Oneindia Kannada

ಇಂದು ಬೆಳಗಾವಿಗೆ ಹೋಗುತ್ತಿದ್ದೇನೆ. ನಾಳೆ (ಡಿ. 05) ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಇದೆ. ಅದು ಮುಗಿಸಿ ನಾಳೆ ಸಂಜೆ ವಾಪಸ್ ಬರುತ್ತೇನೆ. ಅಲ್ಲಿಂದ ಬಂದ ನಂತರ ಉಳಿದ ವಿಷಯಗಳ ಬಗ್ಗೆ ತಿಳಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

English summary
Chief Minister B.S. Yediyurappa has appealed that Karnataka bandh is not allowed any where in the state, Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X