• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಪ ಚುನಾವಣೆ ಪ್ರಚಾರಕ್ಕೆ ಹೋಗುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

|

ಬೆಂಗಳೂರು, ಅ. 25: ಉಪ ಚುನಾವಣೆಯಲ್ಲಿ ನಾನೂ ಎಲ್ಲಿಯೂ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ನಾನು ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಆದರೆ ಇದೇ ಅ. 30 ರಂದು ಶಿರಾದಲ್ಲಿ ಒಂದು ಪ್ರಚಾರ ಮಾಡಿ ಬರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದರು. ಶಿವಮೊಗ್ಗಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಎಲ್ಲರ ಬಾಳಲ್ಲಿ ಸುಖ ಶಾಂತಿ ನೆಲಿಸಲಿ. ಕೊರೊನಾ ಮಹಾಮಾರಿ ಕಡಿಮೆ ಆಗಲಿ ಎಂದು ಆ ತಾಯಿ ಚಾಮುಂಡೇಶ್ವರಿಯಲ್ಲಿ ಮನವಿ ಮಾಡೋಣ,

ಕೊರೊನಾ ನಿಯಮ ಪಾಲಿಸಿ ದಸರಾ ಹಬ್ಬ ಆಚರಿಸಿ ಎಂದು ಜನತೆಯಲ್ಲಿ ಮನವಿ ಮಾಡಿದರು.

   Vatal Nagaraj : ನನಿಗೆ ನಿಮ್ Support ಬೇಕು! | Oneindia Kannada

   ನಿನ್ನೆ ಸಿಎಂ ಯಡಿಯೂರಪ್ಪ ಮಳೆಹಾನಿ ಪರಿಶೀಲನೆ ಬಳಿಕ ಅಧಿಕಾರಿಗಳು ನಾಪತ್ತೆಯಾದರು ಎನ್ನುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಎಲ್ಲ ಅಧಿಕಾರಿಗಳೂ ನಿನ್ನೆ ಇದ್ದರು, ಈಗಾಗಲೇ ನಿನ್ನೆ ಸಂಜೆಯಿಂದ ಮಳೆ ಸಂತ್ರಸ್ತರಿಗೆ ಅಧಿಕಾರಿಗಳು ಚೆಕ್ ಕೊಡುತ್ತಿದ್ದಾರೆ. ದಯವಿಟ್ಟು ಇನ್ನೊಮ್ಮೆ ನೀವೆ ಚೆಕ್ ಮಾಡಿಕೊಳ್ಳಿ ಎಂದರು.

   English summary
   Chief Minister BS Yediyurappa has said in Bengaluru that I will not campaign for the by-election. Know more,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X