ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟಕ್ಕೆ ಹೈಕಮಾಂಡ್ 'ಗ್ರೀನ್‌ ಸಿಗ್ನಲ್': ಯಡಿಯೂರಪ್ಪ 'ಯೂಟರ್ನ್'!

|
Google Oneindia Kannada News

ಬೆಂಗಳೂರು, ನ. 27: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆಯುತ್ತಿರುವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಡಿಸೆಂಬರ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯಲು ಹೈಕಮಾಂಡ್ ಸೂಚಿಸಿದೆ ಎಂಬ ಊಹಾಪೋಹದ ಸುದ್ದಿಗಳು ಬಿಜೆಪಿಯಲ್ಲಿ ಹರಿದಾಡುತ್ತಿದ್ದವು. ಅದಕ್ಕೆ ಪೂರಕ ಎಂಬಂತೆ ಯಡಿಯೂರಪ್ಪ ಅವರೂ ಒಂದಾದ ಮೇಲೊಂದರಂತೆ ದಿಢೀರ್ ನಿರ್ಧಾರಗಳನ್ನು ಕೈಗೊಂಡಿದ್ದು ಕುತೂಹಲ ಮೂಡಿಸಿತ್ತು.

ನಿಗಮ-ಮಂಡಳಿಗಳಿಗೆ ನೇಮಕ, ಆರ್ಥಿಕ ಇಲಾಖೆಗೆ ಸೂಚನೆ, ಸಾಲು ಸಾಲು ನಿಗಮಗಳ ರಚನೆ ಮಾಡುವ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆಯುವ ಪ್ರಯತ್ನ ಮಾಡಿದ್ದರು. ದಿಢೀರ್ ಎಂದು ಹೈಕಮಾಂಡ್‌ನಿಂದ ದೂರವಾಣಿ ಕರೆಯೊಂದು ಯಡಿಯೂರಪ್ಪ ಅವರಿಗೆ ಬಂದಿದೆ. ಹೀಗಾಗಿ ಯಡಿಯೂರಪ್ಪ ನಡೆಸಲು ಉದ್ದೇಶಿಸಲಾಗಿದ್ದ ಮಹತ್ವದ ತುರ್ತು ಸುದ್ದಿಗೋಷ್ಠಿ ರದ್ದು ಮಾಡಿದ್ದಾರೆ. ಜೊತೆಗೆ ಸಂಪುಟ ಸಭೆಯಲ್ಲಿಯೂ ಆ ಒಂದು ಮಹತ್ವದ ನಿರ್ಣಯ ಕೈಗೊಂಡಿಲ್ಲ.

ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ

ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ

ಇಂದು ಬೆಳಗ್ಗೆ (ನ.27) ವಿಧಾನಸೌಧದಲ್ಲಿ ನಡೆದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಗೂ ಮುನ್ನ ಮಾತನಾಡಿದ್ದ ಸಿಎಂ ಯಡಿಯೂರಪ್ಪ ಅವರು, ಈಗಷ್ಟೇ ಕೇಂದ್ರ ಅಮಿತ್ ಷಾ ಅವರೊಂದಿಗೆ ಮಾತನಾಡಿದ್ದೇನೆ. ಇನ್ನು ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಪಟ್ಟಿ ಕಳುಹಿಸಿಕೊಡುವುದಾಗಿ ಅವರು ಹೇಳಿದ್ದಾರೆ. ಸಚಿವ ಸಂಪುಟದ ವಿಷಯ ಪರಿಹಾರ ಆಗುತ್ತದೆ ಎಂದು ಹೇಳಿಕೆ ನೀಡಿದ್ದರು.

ಓಬಿಸಿ ಪಟ್ಟಿಗೆ ಸೇರಿಸುವುದಿಲ್ಲ

ಓಬಿಸಿ ಪಟ್ಟಿಗೆ ಸೇರಿಸುವುದಿಲ್ಲ

ಅದರೊಂದಿಗೆ ವೀರಶೈವ ಲಿಂಗಾಯಿತ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಮಾಡುವುದಿಲ್ಲ ಎಂದು ಯಡಿಯೂರಪ್ಪ ಅವರು ಹೇಳಿಕೆಯಲ್ಲಿ ತಿಳಿಸಿದ್ದರು.

ಮಹತ್ವದ ಕಾರಣಕ್ಕೆ ಲಿಂಗಾಯಿತರನ್ನು ಬಗ್ಗೆ ಓಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ಧರಿಸಿದ್ದೆವು. ಆದರೆ, ದೆಹಲಿಗೆ ಹೋಗಿ ಚರ್ಚಿಸಿದ ಬಳಿಕ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಯಾವುದೇ ಆತುರದ ತೀರ್ಮಾನ ಕೈಗೊಳ್ಳದಂತೆ ಸಂಪುಟ ಸಹೋದ್ಯೋಗಿಗಳು ಸಲಹೆ ಮಾಡಿದ್ದಾರೆ. ಹೀಗಾಗಿ ದೆಹಲಿಗೆ ಹೋಗಿ ಬಂದ ಬಳಿಕವಷ್ಟೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಎಂದು ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಹೇಳಿಕೆ ನೀಡಿದ್ದರು.

ಸಿಎಂ ಯೂಟರ್ನ್ ಹೊಡೆದಿದ್ಯಾಕೆ?

ಸಿಎಂ ಯೂಟರ್ನ್ ಹೊಡೆದಿದ್ಯಾಕೆ?

ವೀರಶೈವ ಲಿಂಗಾಯತರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲು ಯಡಿಯೂರಪ್ಪ ನಿರ್ಧಾರ ಮಾಡಿದ್ದರು. ಅದರಂತೆ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲು ಶಿಫಾರಸು ಮಾಡುವ ಕುರಿತು ಕ್ಯಾಬಿನೆಟ್ ಅಜೆಂಡಾದ 27ನೇ ವಿಷಯವಾಗಿ ಸೇರಿಸಲಾಗುತ್ತು.

ಆದರೆ ಕೊನೆ ಘಳಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಆ ವಿಷಯವನ್ನು ಸಂಪುಟದಲ್ಲಿ ಚರ್ಚೆ ಮಾಡದೇ ತಡೆಹಿಡಿಯಲಾಗಿದೆ. ಇದಕ್ಕೆ ಕಾರಣವಾಗಿದ್ದು ಅಮಿತ್ ಶಾ ಅವರ ದೂರವಾಣಿ ಕರೆ ಎನ್ನಲಾಗಿದೆ.

Recommended Video

ಯಡಿಯೂರಪ್ಪಗೆ ತಲೆ ಕೆಟ್ಟಿದೆ!! | Oneindia Kannada
ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಸಂಪುಟ ಸಭೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ ಸಂಪುಟದ ಕುರಿತು ಇನ್ನೆರಡು ದಿನಗಳಲ್ಲಿ ಪಟ್ಟಿ ಕಳುಹಿಸುತ್ತೇವೆ. ಅಲ್ಲಿಯ ವರೆಗೂ ಲಿಂಗಾಯತರನ್ನು ಓಬಿಸಿ ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಪ್ರಸ್ತಾವನೆ ಕಳುಹಿಸಬೇಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೆ ಯಡಿಯೂರಪ್ಪ ಅವರು ಸಂಪುಟ ಸಭೆಯಲ್ಲಿ ಲಿಂಗಾಯತರಿಗೆ ಮೀಸಲಾತಿ ಶಿಫಾರಸು ಮಾಡುವ ವಿಷಯವನ್ನು ತಡೆಹಿಡಿದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಲಿಂಗಾಯತ ಸಮುದಾಯಕ್ಕೆ ಸೇರಿರುವ ಸಿಎಂ ಯಡಿಯೂರಪ್ಪ ಅವರು ಸ್ವಂತ ಸಮುದಾಯವನ್ನು ಓಬಿಸಿ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲು ಪ್ರಸ್ತಾವನೆ ಕಳುಹಿಸಿದರೆ ಅದನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳ ಬೇಕಿತ್ತು. ಒಪ್ಪಿಕೊಳ್ಳದಿದ್ದರೆ ಪ್ರಬಲ ಸಮುದಾಯದ ಬೆಂಬಲ ಕಳೆದುಕೊಳ್ಳುವ ಸಾಧ್ಯತೆ ಇತ್ತು. ಅದರ ಬದಲು ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಕೊಡುವ ಮೂಲಕ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.

ಹೀಗಾಗಿಯೇ ಸಿಎಂ ಯಡಿಯೂರಪ್ಪ ಅವರು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುವುದು ಹಾಗೂ ಬಳಿಕ ಸುದ್ದಿಗೋಷ್ಠಿಯಲ್ಲಿ ಅದನ್ನು ಪ್ರಕಟಿಸುವುದನ್ನು ಕೈಬಿಟ್ಟಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ರಾಜಕೀಯ ಜಾಣ್ಮೆಯನ್ನು ಯಡಿಯೂರಪ್ಪ ಅವರು ಮೆರೆದಿದ್ದಾರೆಂದೆ ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದೆ. ಇದು ಎಲ್ಲಿಯವರೆಗೆ? ಎಂಬುದನ್ನು ಕಾಯ್ದು ನೋಡಬೇಕಿದೆ.
==========================

English summary
Chief minister B.S. Yediyurappa has taken you turn after bjp high commond agreed to expansion of cabinet. After Amit Sha's Phone call CM Yediyurappa has canceled a major news conference intended to be held in Vidhanasoudha. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X