• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನನ್ನ ವಿರುದ್ಧ ಹೈಕಮಾಂಡ್‌ಗೆ ದೂರು ಕೊಡಿ: ಯಡಿಯೂರಪ್ಪ ಖಡಕ್ ಮಾತು!

|

ಬೆಂಗಳೂರು, ಜ. 14: ಸಂಪುಟ ವಿಸ್ತರಣೆ ಬೆನ್ನಲ್ಲಿಯೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟವಾಗಿದೆ. ಸಂಪುಟ ವಿಸ್ತರಣೆ ಕಾರ್ಯಕ್ರಮದ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ್ದ ರಾಜ್ಯ ಬಿಜೆಪಿ ಉಸ್ತವಾರಿ ಅರುಣ್ ಸಿಂಗ್ ಅವರು, ಸಚಿವರ ಆಯ್ಕೆಯಲ್ಲಿ ಹೈಕಮಾಂಡ್ ಹಸ್ತಕ್ಷೇಪ ಮಾಡಿಲ್ಲ. ಎಲ್ಲವೂ ಸಿಎಂ ಯಡಿಯೂರಪ್ಪ ಅವರ ತೀರ್ಮಾನದಂತೆ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಅರುಣ್ ಸಿಂಗ್ ಹೇಳಿಕೆ ಬಳಿಕ ಸಿಎಂ ಯಡಿಯೂರಪ್ಪ ಅವರ ಮೇಲೆ ಡಜನ್‌ಗೂ ಹೆಚ್ಚು ಶಾಸಕರು ಮುಗಿಬಿದ್ದಿದ್ದಾರೆ. ಜೊತೆಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಯಡಿಯೂರಪ್ಪ ಅತ್ಯಾಪ್ತ ಶಾಸಕ ರೇಣುಕಾಚಾರ್ಯ ಅವರು ಅಸಮಾಧಾನ ವ್ಯಕ್ತಪಡಿಸಿ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದಾರೆ.

ಸಿಎಂ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಾಸಕರಾದ ಅರವಿಂದ್ ಬೆಲ್ಲದ್, ಎಚ್. ವಿಶ್ವನಾಥ್ ಸೇರಿದಂತೆ ಹಲವರು ಯಡಿಯೂರಪ್ಪ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಂತೂ 'ಸಿಡಿ' ಭಯದಿಂದ ಯಡಿಯೂರಪ್ಪ ಕೆಲವರಿಗೆ ಮಂತ್ರಿ ಪದವಿ ಕೊಟ್ಟಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರು ನೇರವಾಗಿ ಯಡಿಯೂರಪ್ಪ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿರುವವರಿಗೆ, ತಮ್ಮ ಮೇಲೆವಾಗ್ದಾಳಿ ನಡೆಸುತ್ತಿರುವವರಿಗೆ ಸಿಎಂ ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಯಡಿಯೂರಪ್ಪ ಅವರು ಕೊಟ್ಟಿರುವ ಎಚ್ಚರಿಕೆ ಏನು? ಇಲ್ಲಿದೆ ಮಾಹಿತಿ!

ಪೂರ್ಣ ಪ್ರಮಾಣದ ಸಂಪುಟ

ಪೂರ್ಣ ಪ್ರಮಾಣದ ಸಂಪುಟ

ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮೊದಲ ಬಾರಿ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದೆ. ಸಿಎಂ ಸೇರಿದಂತೆ ಎಲ್ಲ 34 ಸಚಿವರು ಸಂಪುಟದಲ್ಲಿದ್ದಾರೆ. ಅಬಕಾರಿ ಸಚಿವ ಎಚ್. ನಾಗೇಶ್ ಅವರಿಗೆ ರಾಜೀನಾಮೆ ಕೊಡುವಂತೆ ಯಡಿಯೂರಪ್ಪ ಅವರು ಸೂಚಿಸಿದ್ದು, ಇಂದು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರೆ. ಹಾಗಾದಲ್ಲಿ ಒಂದು ಸ್ಥಾನ ಖಾಲಿ ಉಳಿಯಲಿದೆ. ಆದರೂ ಕೂಡ ಪೂರ್ಣ ಪ್ರಮಾಣದ ಸಂಪುಟ ರಚನೆಗೊಂಡಂತಾಗುತ್ತದೆ.

ಪೂರ್ಣ ಪ್ರಮಾಣದ ಸಂಪುಟ ರಚನೆ ಆಗಿರುವುದು ಸಚಿವಸ್ಥಾನದ ಆಕಾಂಕ್ಷಿಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ತಮ್ಮ ವಿರುದ್ಧ ಮಾತನಾಡುತ್ತಿರುವವರಿಗೆ ಸಿಎಂ ಯಡಿಯೂರಪ್ಪ ಅವರು ಗಂಭೀರ ಎಚ್ಚರಿಕೆಯನ್ನು ಕೊಟ್ಟಿದ್ದಾರೆ

ಅತೃಪ್ತರಿಗೆ ಸಿಎಂ ಗಂಭೀರ ಎಚ್ಚರಿಕೆ

ಅತೃಪ್ತರಿಗೆ ಸಿಎಂ ಗಂಭೀರ ಎಚ್ಚರಿಕೆ

ಸಂಪುಟ ವಿಸ್ತರಣೆಯಿಂದ ಅಸಮಧಾನಗೊಂಡಿರುವ ಶಾಸಕರು ಹಗುರವಾಗಿ ಮಾತನಾಡುವುದು ಬೇಡ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಅಸಮಾಧಾನ ಇದ್ದವರು ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಿ. ಅದಕ್ಕೆ ನನ್ನ ಅಭ್ಯಂತರ ಏನೂ ಇಲ್ಲ. ಶಾಸಕರು ಏನೇ ಮಾಹಿತಿ ಇದ್ದರೂ ದೆಹಲಿಗೆ ಹೋಗಿ ದೂರು ಕೊಡಲಿ. ಶಾಸಕರು ದೆಹಲಿಗೆ ಹೋಗಲು ನಮ್ಮ ಅಭ್ಯಂತರ ಇಲ್ಲ. ವರಿಷ್ಠರು ಸರಿ ತಪ್ಪು ಯಾವುದು? ಅಂತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

ಈ ರೀತಿಯ ಹೇಳಿಕೆ ಮೂಲಕ ಹೈಕಮಾಂಡ್ ತಮ್ಮ ಜೊತೆಗಿದೆ ಎಂಬುದನ್ನು ಸಿಎಂ ಯಡಿಯೂರಪ್ಪ ಅವರು ಸೂಚ್ಯವಾಗಿ ತಿಳಿಸಿದ್ದಾರೆ. ಈಗ ಯಡಿಯೂರಪ್ಪ ಅವರು ಕೊಟ್ಟಿರುವ ಎಚ್ಚರಿಕೆಯಿಂದ ಮತ್ತಷ್ಟು ಅಸಮಾಧಾನ ಸ್ಪೋಟವಾಗುವ ಸಾಧ್ಯತೆಯಿದೆ.

ಹೈಕಮಾಂಡ್ ಆದೇಶದಂತೆ

ಹೈಕಮಾಂಡ್ ಆದೇಶದಂತೆ

ಹೈಕಮಾಂಡ್ ಆದೇಶದಂತೆ ಸಂಪುಟ ವಿಸ್ತರಣೆ ಮಾಡಲಾಗಿದೆ. ಅವರು ಹೇಳಿದಂತೆ ಒಂದು ಸ್ಥಾನ ಉಳಿಸಿಕೊಂಡಿದ್ದೇನೆ. ಹೀಗಾಗಿ ಇಲ್ಲಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಬೇಡಿ. ಹೈಕಮಾಂಡ್ ಆಶೀರ್ವಾದಿಂದಲೇ ನನ್ನ ಸರ್ಕಾರ ನಡೆದಯುತ್ತಿದೆ. 10-12 ಶಾಸಕರು ಮಂತ್ರಿಸ್ಥಾನ ಸಿಕ್ಕಿಲ್ಲ ಎಂದು ಮಾತನಾಡುತ್ತಿದ್ದಾರೆ. ನನ್ನ ಇತಿಮಿತಿಯೊಳಗೆ ಸಂಪುಟ ವಿಸ್ತರಣೆ ಮಾಡಿದ್ದೇನೆ. ಅಭ್ಯಂತರ ಇದ್ದವರು ಹೈಕಮಾಂಡ್ ಬಳಿ ತೆರಳಿ ದೂರು ಕೊಡಿ ಎಂದು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

ಮಾರ್ಚ್‌ನಲ್ಲಿ ಬಜೆಟ್ ಮಂಡನೆ

ಮಾರ್ಚ್‌ನಲ್ಲಿ ಬಜೆಟ್ ಮಂಡನೆ

ಸಂಪುಟ ವಿಸ್ತರಣೆ ಸುಸೂತ್ರವಾಗಿ ನಡೆದಿದ್ದು, ಬರುವ ಮಾರ್ಚ್‌ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ರೈತ ಪರವಾದ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೈಕಮಾಂಡ್‌ಗೆ ದೂರು ಕೊಡಿ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಡಜನ್‌ಗೂ ಹೆಚ್ಚಿರುವ ಅತೃಪ್ತ ಶಾಸಕರು ಮುಂದೆನು ಮಾಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಒಟ್ಟಾರೆ ಸಂಪುಟ ಸಂಟಕ ಸದ್ಯ ಕಡಿಮೆಯಾಗುವಂತೆ ಕಾಣುತ್ತಿಲ್ಲ.

English summary
Chief Minister BS Yediyurappa has issued a warning to MLAs who are upset after the expansion of the cabinet. Yediyurappa has advised the dissatisfied MLAs to file a complaint with the High Command against himself only. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X