ಹೋಂ ಕ್ವಾರಂಟೈನ್ ನಲ್ಲಿರುವ ಬಿಎಸ್ವೆಗೆ ಕುಮಾರಸ್ವಾಮಿ ದೂರವಾಣಿ ಕರೆ
ಬೆಂಗಳೂರು, ಜುಲೈ 11: ಕಚೇರಿಯ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿದ ನಂತರ ಸ್ವಯಂ ಹೋಂ ಕ್ವಾರಂಟೈನ್ ಗೆ ಒಳಗಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದೂರವಾಣಿ ಮೂಲಕ ಮಾತನಾಡಿದ್ದಾರೆ.
Recommended Video
ಇಂದು (ಜು 11) ಮಧ್ಯಾಹ್ನ ಕುಮಾರಸ್ವಾಮಿ ಅವರು ಸಿಎಂ ಯಡಿಯೂರಪ್ಪನವರಿಗೆ ಕರೆ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು, ಜಾಗ್ರತೆ ವಹಿಸುವಂತೆ ಸಲಹೆ ನೀಡಿದರು.
ಈ ವೇಳೆ ಯಡಿಯೂರಪ್ಪನವರೂ ಕೂಡ ಕುಮಾರಸ್ವಾಮಿಯವರಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು ಎಂದು ತಿಳಿದುಬಂದಿದೆ.

"ವಿರೋಧ ಪಕ್ಷದ ನಾಯಕರು ಮತ್ತು ಹಲವು ಕಾಂಗ್ರೆಸ್ ಮುಖಂಡರು ಸರಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ. ಆದರೆ, ಇದು ರಾಜಕೀಯ ಮಾಡುವ ಸಮಯವಲ್ಲ. ಜನರ ಜೀವ ಮುಖ್ಯ"ಎಂದು ಪರೋಕ್ಷವಾಗಿ ಎಚ್ಡಿಕೆ, ಸಿದ್ದರಾಮಯ್ಯನವರಿಗೆ ಕಿವಿಮಾತು ಹೇಳಿದ್ದರು.
"ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ಮೂಲಕ ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ"ಎಂದು ಬಿಎಸ್ವೈ ಟ್ವೀಟ್ ಮಾಡಿದ್ದರು.
"ಸಿಎಂ ವಾಹನದ ಹೆಚ್ಚುವರಿ ಚಾಲಕ ಮತ್ತು ಹೆಚ್ಚುವರಿ ಎಸ್ಕಾರ್ಟ್ ವಾಹನದ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸಿಎಂ ಜೊತೆ ನಿತ್ಯ ಕೆಲಸ ಮಾಡುವ ಯಾವ ವ್ಯಕ್ತಿಗೆ ಯಾರಿಗೂ ಸೋಂಕು ಕಂಡು ಬಂದಿಲ್ಲ. ಮುಖ್ಯಮಂತ್ರಿಗಳು ಎಂದಿನಂತೆ ಲವಲವಕೆಯಿಂದ ಅರೋಗ್ಯವಾಗಿದ್ದಾರೆ" ಎಂದು ಬಿಎಸ್ವೈ, ಭೇಟಿ ಮಾಡಿದ ನಂತರ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದರು.












Click it and Unblock the Notifications