ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ರಾಜೀನಾಮೆ

|
Google Oneindia Kannada News

ಬೆಂಗಳೂರು, ನವೆಂಬರ್ 19 : ಹಿರಿಯ ಪತ್ರಕರ್ತ ಮತ್ತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಗುರುವಾರ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದಾರೆ. ಇಂಥಹದೊಂದು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಪ್ರೆಂಟಿಸ್ ತರಬೇತಿ; ಅರ್ಜಿ ಹಾಕಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಪ್ರೆಂಟಿಸ್ ತರಬೇತಿ; ಅರ್ಜಿ ಹಾಕಿ

ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಎಂ. ಬಿ. ಮರಂಕಲ್ ಅವರನ್ನು ಆ ಹುದ್ದೆಯಿಂದ ಕೆಲವು ದಿನಗಳ ಹಿಂದೆ ತೆರವುಗೊಳಿಸಲಾಗಿತ್ತು. ಈಗ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

ಪತ್ರಕರ್ತರ ಮೇಲಿನ ಕಿರುಕುಳ ನಿಲ್ಲಿಸಿ: ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳಿಂದ ಮೋದಿಗೆ ಪತ್ರಪತ್ರಕರ್ತರ ಮೇಲಿನ ಕಿರುಕುಳ ನಿಲ್ಲಿಸಿ: ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳಿಂದ ಮೋದಿಗೆ ಪತ್ರ

Yediyurappa Media Advisor Mahadev Prakash Resigns

"ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ಕಳೆದ ಒಂದು ವರ್ಷದಿಂದ ಕಾರ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯಪೂರ್ವಕ ಧನ್ಯವಾದಗಳು" ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಹಾಂಕಾಂಗ್‌ ಮಾಧ್ಯಮ ದಿಗ್ಗಜ ಜಿಮ್ಮಿ ಬಂಧನ ಹಾಂಕಾಂಗ್‌ ಮಾಧ್ಯಮ ದಿಗ್ಗಜ ಜಿಮ್ಮಿ ಬಂಧನ

Recommended Video

Corona ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕಠಿಣ ನಿರ್ಧಾರ | Oneindia Kannada

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ಮಹಾದೇವ ಪ್ರಕಾಶ್ ಅವರನ್ನು ಮಾಧ್ಯಮ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. 'ಭಾನುವಾರ' ಎಂಬ ಮಾಸಿಕ ಪತ್ರಿಕೆಯನ್ನು ಮಹದಾದೇವ ಪ್ರಕಾಶ್ ನಡೆಸುತ್ತಿದ್ದು, ಸುದ್ದಿ ಮಾಧ್ಯಮದ ಚರ್ಚೆಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದರು.

English summary
Karnataka chief minister B. S. Yediyurappa media advisor Mahadev Prakash resigned from his official post. Yediyurappa sacked his aide & political advisor former journalist M. B. Maramkal few days ago.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X