ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹ ಪರಿಸ್ಥಿತಿ : ಬಿಜೆಪಿ ಸರ್ಕಾರಕ್ಕೆ ಪ್ರತಿಪಕ್ಷಗಳ ಪಂಚ್!

|
Google Oneindia Kannada News

ಬೆಂಗಳೂರು, ಆಗಸ್ಟ್ 08 : ಕರ್ನಾಟಕದಲ್ಲಿನ ಪ್ರವಾಹ ಪರಿಸ್ಥಿತಿ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ. ಬಿಜೆಪಿ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಸರಿಯಾದ ವ್ಯವಸ್ಥೆ ಮಾಡಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪ ಮಾಡಿವೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಟ್ವಿಟರ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಮತ್ತೊಂದು ಕಡೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ; ಬಿಎಸ್‌ವೈಗೆ ಜೆಡಿಎಸ್ ಪ್ರಶ್ನೆಇದೇನಾ ನಿಮ್ಮ ಜನಮೆಚ್ಚಿನ ಆಡಳಿತ; ಬಿಎಸ್‌ವೈಗೆ ಜೆಡಿಎಸ್ ಪ್ರಶ್ನೆ

ಜುಲೈ 26ರಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ, ಇದುವರೆಗೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಯಡಿಯೂರಪ್ಪ ಏಕಾಂಗಿಯಾಗಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆ ಬಿಜೆಪಿ 4 ತಂಡಗಳನ್ನು ರಚನೆ ಮಾಡಿದೆ.

ಹೈಕಮಾಂಡ್‌ ಸೂಚನೆ: ತುರ್ತಾಗಿ ಯಡಿಯೂರಪ್ಪ ರಾಜ್ಯಕ್ಕೆ ವಾಪಸ್ಹೈಕಮಾಂಡ್‌ ಸೂಚನೆ: ತುರ್ತಾಗಿ ಯಡಿಯೂರಪ್ಪ ರಾಜ್ಯಕ್ಕೆ ವಾಪಸ್

"ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ" ಎಂದು ಜೆಡಿಎಸ್ ಸರ್ಕಾರದ ನಡೆಯನ್ನು ಖಂಡಿಸಿದೆ.

ಕರಾವಳಿಯಲ್ಲಿ ಭಾರೀ ಮಳೆ, ತುಂಬಿಹೋಗುತ್ತಿವೆ ತಗ್ಗು ಪ್ರದೇಶಗಳುಕರಾವಳಿಯಲ್ಲಿ ಭಾರೀ ಮಳೆ, ತುಂಬಿಹೋಗುತ್ತಿವೆ ತಗ್ಗು ಪ್ರದೇಶಗಳು

ಪರಮೇಶ್ವರ ಟ್ವೀಟ್

ಪರಮೇಶ್ವರ ಟ್ವೀಟ್

"ಇವರ ಅಧಿಕಾರ ಹಾಗೂ ರಾಜಕೀಯದ ಆಟದ ಮಧ್ಯದಲ್ಲಿ ನರಳುತ್ತಿರುವುದು ಪ್ರವಾಹಕ್ಕೆ ತುತ್ತಾಗಿರುವ ನಮ್ಮ ರಾಜ್ಯ. ಈ ಕೂಡಲೇ ಪ್ರವಾಹ ಪರಿಸ್ಥಿತಿಯತ್ತ ಗಮನ ನೀಡಿ ಜನರ ರಕ್ಷಣೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸುತ್ತೇನೆ" ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಟ್ವೀಟ್ ಮಾಡಿದ್ದಾರೆ.

ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ

ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ

"ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ. ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ" ಎಂದು ಜೆಡಿಎಸ್ ಆರೋಪಿಸಿದೆ.

ಸಿದ್ದರಾಮಯ್ಯ ಟ್ವೀಟ್

ಸಿದ್ದರಾಮಯ್ಯ ಟ್ವೀಟ್

ಉತ್ತರ ಕರ್ನಾಟಕದ ಪ್ರವಾಹ ಸ್ಥಿತಿಗೆ ಕೊಯ್ನಾ ಜಲಾಶಯದಿಂದ ಬಿಡುಗಡೆಯಾಗುತ್ತಿರುವ ಭಾರೀ ಪ್ರಮಾಣದ ನೆರೆ ನೀರು ಕಾರಣ. ಯಡಿಯೂರಪ್ಪ ಅವರು ತಕ್ಷಣ ಕಾರ್ಯಪ್ರವರ್ತರಾಗಿ ಕೊಯ್ನಾ ಜಲಾಶಯದ ನೀರಿನ ಬಿಡುಗಡೆಯನ್ನು ನಿಯಂತ್ರಿಸುವಂತೆ ಮಹಾರಾಷ್ಟ್ರ ಸರ್ಕಾರದ ಮೇಲೆ ಕೇಂದ್ರ ಸರ್ಕಾರದ ಮೂಲಕ‌ ಒತ್ತಡ ಹೇರಬೇಕು" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈಶ್ವರ ಖಂಡ್ರೆ ಟ್ವೀಟ್

ಈಶ್ವರ ಖಂಡ್ರೆ ಟ್ವೀಟ್

"ರಾಜ್ಯದಲ್ಲಿ ಹತ್ತಾರು ಜಿಲ್ಲೆಗಳಲ್ಲಿ ನೆರೆಹಾವಳಿ ಹೆಚ್ಚಾಗಿದೆ,ಮಹಾರಾಷ್ಟ್ರ ದಲ್ಲಿ ಮಳೆ ಹೆಚ್ಚಾಗಿದೆ,ಅಲ್ಲಿಯ ಡ್ಯಾಂಗಳಿಂಡದ ನೀರು ಹೆಚ್ಚು ಬಿಟ್ಟಿದ್ದತಿಂದ ರಾಜ್ಯದಲ್ಲಿ ಅತಿವೃಷ್ಟಿ ಉಂಟಗಿದೆ.ಸೇತುವೆಗಳು ಜನ ಜಾನುವಾರುಗಳು ಸುಸ್ಥಿತಿಗೆ ಬಂದ್ದಿದೆ. ಸರ್ಕಾರದಿಂದ ಏನೂ ಮಾಡುತ್ತಿಲ್ಲ,ಇಂತಹ ಸಂದರ್ಭಗಳಲ್ಲಿ ಯುದ್ಧೋಪಾದಿಯಾಲಿ ಕೆಲಸ ಆಗಬೇಕಿತ್ತು" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದಾರೆ.

English summary
Karnataka Chief Minister B.S.Yediyurappa neglecting flood situation of state alleged Opposition party's of state JD(S) and Congress. Yediyurappa yet to expand his cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X