• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಂಚಮಸಾಲಿ ಸಮುದಾಯಕ್ಕೆ ಸಿಎಂ ಯಡಿಯೂರಪ್ಪ ಮಹತ್ವದ ಭರವಸೆ!

|

ಬೆಂಗಳೂರು, ನ. 26: ರಾಜ್ಯ ಸರ್ಕಾರದ ಎದುರು ಹಲವು ಬೇಡಿಕೆಗಳನ್ನು ಇಟ್ಟಿರುವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಭರವಸೆ ಕೊಟ್ಟಿದ್ದಾರೆ. ಇಂದು (ನ. 26) ತಮ್ಮನ್ನು ಭೇಟಿ ಮಾಡಿದ ಪಂಚಮಸಾಲಿ ಸಮುದಾಯದ ನಿಯೋಗಕ್ಕೆ ಶೀಘ್ರ ಒಳ್ಳೆಯ ಸುದ್ದಿ ಕೊಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದ 2 ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಒತ್ತಾಯಕ್ಕೆ ಸಂಬಂಧಿಸಿದಂತೆ ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ಅವರು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡ ಮೀಸಲಾತಿ ಪರಮರ್ಶೆಗೆ ಕ್ಯಾಬಿನೆಟ್‌ ಉಪ ಸಮಿತಿ ರಚನೆ

ಪಂಚಮಸಾಲಿ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಜಗದ್ಗುರುಗಳವರು ಆಕ್ಟೊಬರ್ 28ರಂದು ಬೆಳಗಾವಿಯ ಸುವರ್ಣವಿಧಾನಸೌಧದ ಮುಂಭಾಗದಲ್ಲಿ ಐತಿಹಾಸಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳು ಫೋನ್ ಮೂಲಕ ಉಪವಾಸ ಕೈಬಿಡುವಂತೆ ಸಂಪರ್ಕಿಸಿದಾಗ ಕಳೆದ ನವಂಬರ್ 28ರ ಒಳಗಾಗಿ ಸರ್ಕಾರ ಸ್ಪಂದಿಸಬೇಕು ಎಂಬ ಷರತ್ತಿನೊಂದಿಗೆ ಪಂಚಮಸಾಲಿ ಶ್ರೀಗಳು ಸತ್ಯಾಗ್ರಹವನ್ನು ಹಿಂದಕ್ಕೆ ಪಡೆದಿದ್ದರು.

   ಯಡಿಯೂರಪ್ಪಗೆ ತಲೆ ಕೆಟ್ಟಿದೆ!! | Oneindia Kannada

   ಅದೇ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾಗ ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂದರ್ಭದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ರಾಜ್ಯ ಯುವ ಘಟಕದ ಅಧ್ಯಕ್ಷರಾದ ಸೋಮಶೇಖರ್ ಹಲ್ಯಾಲ್ ಉಪಸ್ಥಿತರಿದ್ದರು.

   English summary
   Chief Minister BS Yeddyurappa said he would give good news to the Panchamsali community delegation who visited him today (Nov. 26). Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X