ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ಭೇಟಿ ಬಗ್ಗೆ ಮನಬಿಚ್ಚಿ ಮಾತನಾಡಿದ ಯೋಗೇಶ್ವರ್!

|
Google Oneindia Kannada News

ಬೆಂಗಳೂರು, ಮೇ 27; ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಪ್ರವಾಸೋದ್ಯಮ ಸಚಿವ ಸಿ. ಪಿ. ಯೋಗೇಶ್ವರ್ ದೆಹಲಿ ಭೇಟಿ ಬಗ್ಗೆ ಬಿಜೆಪಿ ವಲಯದಲ್ಲಿಯೇ ಮಾತುಕತೆಗಳು ನಡೆಯುತ್ತಿವೆ.

ಗುರುವಾರ ವಿಧಾನ ಪರಿಷತ್ ಸದಸ್ಯ, ಸಚಿವ ಸಿ. ಪಿ. ಯೋಗೇಶ್ವರ್ ಮಾಧ್ಯಮಗಳ ಜೊತೆ ಮಾತನಾಡಿದರು. ದೆಹಲಿಗೆ ಭೇಟಿ ನೀಡಿದ್ದು ನಿಜ ಎಂದು ಅವರು ಹೇಳಿದ್ದಾರೆ. "ಸಿಎಂ ಬದಲಾವಣೆ ನನ್ನ ಉದ್ದೇಶವಲ್ಲ. ಆ ಶಕ್ತಿಯೂ ನನಗಿಲ್ಲ" ಎಂದು ಸಚಿವರು ಹೇಳಿದರು.

ಸಿಎಂ ಯಡಿಯೂರಪ್ಪ ಬದಲಾವಣೆ, ಕನಸಿನ ಮಾತು: ಶಾಸಕ ಪ್ರೀತಂಗೌಡ ಸಿಎಂ ಯಡಿಯೂರಪ್ಪ ಬದಲಾವಣೆ, ಕನಸಿನ ಮಾತು: ಶಾಸಕ ಪ್ರೀತಂಗೌಡ

"ದೆಹಲಿಗೆ ನನ್ನ ವೈಯಕ್ತಿಕ ವಿಚಾರಕ್ಕೆ ಆಗಾಗ ಹೋಗುತ್ತಿರುತ್ತೇನೆ. ಪಕ್ಷದ ಚೌಕಟ್ಟಿನಲ್ಲಿ ನಾನು ವರಿಷ್ಠರ ಜೊತೆ ಚರ್ಚಿಸಿದ್ದೇನೆ" ಎಂದು ಸಿ. ಪಿ. ಯೋಗೇಶ್ವರ್ ಸ್ಪಷ್ಟಪಡಿಸಿದರು.

ಯಡಿಯೂರಪ್ಪ ಸೂಚಿಸಿದ ವ್ಯಕ್ತಿಯೇ ರಾಜ್ಯದ ಮುಂದಿನ ಸಿಎಂ? ಯಡಿಯೂರಪ್ಪ ಸೂಚಿಸಿದ ವ್ಯಕ್ತಿಯೇ ರಾಜ್ಯದ ಮುಂದಿನ ಸಿಎಂ?

"ನನಗೆ ಅಸಮಾಧಾನವಿದೆ. ಕೆಲವೊಂದು ನೋವುಗಳಿವೆ. ಹೀಗಾಗಿ ದೆಹಲಿಗೆ ಹೋಗಿದ್ದೇನೆ. ದೆಹಲಿಗೆ ಹೋಗುವುದಲ್ಲಿ ತಪ್ಪೇನಿದೆ?, ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ" ಎಂದರು.

ಮೈಸೂರು ಜಿಲ್ಲಾ ಉಸ್ತುವಾರಿ ಮೇಲೆ ಸಿ. ಪಿ. ಯೋಗೇಶ್ವರ್ ಕಣ್ಣು?ಮೈಸೂರು ಜಿಲ್ಲಾ ಉಸ್ತುವಾರಿ ಮೇಲೆ ಸಿ. ಪಿ. ಯೋಗೇಶ್ವರ್ ಕಣ್ಣು?

ನನ್ನ ಉದ್ದೇಶ ಸಿಎಂ ಬದಲಾವಣೆ ಅಲ್ಲ

ನನ್ನ ಉದ್ದೇಶ ಸಿಎಂ ಬದಲಾವಣೆ ಅಲ್ಲ

ಪ್ರವಾಸೋದ್ಯಮ ಸಚಿವ ಸಿ. ಪಿ. ಯೋಗೇಶ್ವರ್, "ಮುಖ್ಯಮಂತ್ರಿಗಳ ಬದಲಾವಣೆ ನನ್ನ ಉದ್ದೇಶವಲ್ಲ. ಆ ಶಕ್ತಿ ಸಹ ನನಗೆ ಇಲ್ಲ" ಎಂದು ಸ್ಪಷ್ಟಪಡಿಸಿದರು.

ವಿಜಯೇಂದ್ರ ವಿರುದ್ಧ ಅಸಮಾಧಾನ

ವಿಜಯೇಂದ್ರ ವಿರುದ್ಧ ಅಸಮಾಧಾನ

"ವರಿಷ್ಠರ ಮುಂದೆ ಹೇಳಬೇಕಾಗಿದ್ದನ್ನು ಹೇಳಿದ್ದೇನೆ. ನನಗೆ ಕೆಲವೊಂದು ವಿಚಾರದಲ್ಲಿ ಅಸಮಾಧಾನವಿದೆ. ನನ್ನ ಖಾತೆಯನ್ನು ನನ್ನ ಮಗ ನಿರ್ವಹಣೆ ಮಾಡಬಾರದು" ಎಂದು ಹೇಳುವ ಮೂಲಕ ಬಿ. ವೈ. ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಯಡಿಯೂರಪ್ಪ ಆಪ್ತರಿಗೆ ಟಾಂಗ್

ಯಡಿಯೂರಪ್ಪ ಆಪ್ತರಿಗೆ ಟಾಂಗ್

"ಜವಾಬ್ದಾರಿ ಕೊಡದಿದ್ದರೂ ನನಗೆ ಬೇಸರವಿಲ್ಲ. ಆದರೆ ಹಸ್ತಕ್ಷೇಪವನ್ನು ಸಹಿಸಲ್ಲ. ನನ್ನ ವಿರುದ್ಧ ಮಾತನಾಡುವವರಿಗೆ ನಾನು ಉತ್ತರ ಕೊಡುತ್ತೇನೆ" ಎಂದು ಶಾಸಕ ಎಂ. ಪಿ. ರೇಣುಕಾಚಾರ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

Recommended Video

B S Yediyurappa ನವರನ್ನು ಸದ್ಯದಲ್ಲೇ ಕುರ್ಚಿಯಿಂದ ಇಳಿಸಿದ್ದಾರಾ | Oneindia Kannada
ಯಡಿಯೂರಪ್ಪ ಹೇಳುವುದೇನು?

ಯಡಿಯೂರಪ್ಪ ಹೇಳುವುದೇನು?

ನಾಯಕತ್ವ ಬದಲಾವಣೆ ಬಗ್ಗೆ ಗುರುವಾರ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ದೆಹಲಿಗೆ ಹೋದವರಿಗೆ ವರಿಷ್ಠರು ತಕ್ಕ ಉತ್ತರ ಕೊಟ್ಟು ಕಳಿಸಿದ್ದಾರೆ. ನನ್ನ ಗಮನ ಕೋವಿಡ್ ನಿರ್ವಹಣೆ ವಿಚಾರದ ಮೇಲಿದೆ" ಎಂದು ಸ್ಪಷ್ಟಪಡಿಸಿದರು.

English summary
Talk about leadership change in Karnataka. Tourism minister of Karnataka C. P. Yogeshwar clarification on Delhi visit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X