ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಸೋಂಕು; ಬಿ. ಎಸ್. ಯಡಿಯೂರಪ್ಪ ಹೆಲ್ತ್ ಬುಲೆಟಿನ್

|
Google Oneindia Kannada News

ಬೆಂಗಳೂರು, ಆಗಸ್ಟ್ 06: ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಹೇಳಿದೆ. ಭಾನುವಾರ ರಾತ್ರಿ ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಡ್ ಸೋಂಕಿತರಾಗಿರುವ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ ಗುರುವಾರದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದೆ. 'ತಮ್ಮ ಕೊಠಡಿಯಿಂದಲೇ ಅವರು ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ' ಎಂದು ಆಸ್ಪತ್ರೆ ಹೇಳಿದೆ.

ಕಳೆದೆರಡು ದಿನಗಳಿಂದ ಯಡಿಯೂರಪ್ಪ ಏನು ಮಾಡುತ್ತಿದ್ದಾರೆ?ಕಳೆದೆರಡು ದಿನಗಳಿಂದ ಯಡಿಯೂರಪ್ಪ ಏನು ಮಾಡುತ್ತಿದ್ದಾರೆ?

Yediyurappa Responding Well To Treatment

ಮಣಿಪಾಲ್ ಆಸ್ಪತ್ರೆಯ ತಜ್ಞವೈದ್ಯರ ತಂಡ ಯಡಿಯೂರಪ್ಪ ಅವರ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಿದೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ಆಸ್ಪತ್ರೆ ತಿಳಿಸಿದೆ. ಯಡಿಯೂರಪ್ಪ ಅವರು 10 ದಿನ ಆಸ್ಪತ್ರೆಯಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ರಾಜ್ಯಾದ್ಯಂತ ಮಳೆ; ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕೊಟ್ಟ ಸಿಎಂ ರಾಜ್ಯಾದ್ಯಂತ ಮಳೆ; ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕೊಟ್ಟ ಸಿಎಂ

ಯಡಿಯೂರಪ್ಪ ಅವರು ಆಸ್ಪತ್ರೆಯಲ್ಲಿದ್ದರೂ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಹಿಂದಿನ‌ ರೀತಿಯೇ ಪರಿಹಾರ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಶಿವಮೊಗ್ಗದಲ್ಲಿನ ಮಳೆ ಪ್ರಮಾಣ; ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟ...ಶಿವಮೊಗ್ಗದಲ್ಲಿನ ಮಳೆ ಪ್ರಮಾಣ; ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟ...

ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ., ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ರೂ. ಪರಿಹಾರವನ್ನು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ಕೊಟ್ಟಿದ್ದಾರೆ.

English summary
Karnataka chief minister B. S. Yediyurappa continues to be clinically stable and is responding well to treatment Manipal hospitals said in health bulletin.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X