• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ಸಿಎಂ ಯಡಿಯೂರಪ್ಪ ಏನಂದ್ರು ಗೊತ್ತಾ?

|

ಬೆಂಗಳೂರು, ಅ. 21: ಇನ್ನೇನು ಹೆಚ್ಚು ದಿನ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಲ್ಲಿಯೇ ಕಿಡಿ ಹಚ್ಚಿದ್ದಾರೆ. ಕಳೆದ ಎರಡು ದಿನಗಳಿಂದ ಬಿಜೆಪಿ ನಾಯಕರಲ್ಲಿಯೇ ಯತ್ನಾಳ್ ಹೇಳಿಕೆ ಪರ-ವಿರೋಧವಾಗಿ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ವಿಜಯಪುರ ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಆರ್‌ಎಸ್‌ಎಸ್‌ ಸೂಚನೆಯಂತೆ ಮಾತನಾಡಿದ್ದಾರೆ ಎಂದೂ ವಿಶ್ಲೇಷಣೆ ಮಾಡಲಾಗುತ್ತಿದೆ. ಅವರ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ತಮ್ಮದೇ ವಿಶ್ಲೇಷಣೆ ಮಾಡಿದ್ದಾರೆ.

ಈ ಮಧ್ಯೆ ತಮ್ಮ ಹೇಳಿಕೆಗೆ ಬದ್ಧವಿರುವುದಾಗಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪುನರುಚ್ಚರಿಸಿದ್ದಾರೆ. ಎರಡೆರಡು ಬಾರಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿಕೆ ಕೊಟ್ಟ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾಧ್ಯಮಗಳೂ ಈ ಪ್ರಶ್ನೆಯನ್ನು ಕೇಳಿವೆ. ಅದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಏನಂದ್ರು? ಮುಂದೆ ಓದಿ!

ಆಂತರಿಕವಾಗಿ ಅವರಿಗೆ ಗೊತ್ತಿರುವ ವಿಚಾರ

ಆಂತರಿಕವಾಗಿ ಅವರಿಗೆ ಗೊತ್ತಿರುವ ವಿಚಾರ

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಪ್ರತಿಕ್ರಿಯೆ ಕೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ಹಿರಿಯ ನಾಯಕರು. ಆಂತರಿಕವಾಗಿ ಅವರಿಗೆ ತಿಳಿದಿರುವ ವಿಚಾರವನ್ನು ಹೇಳಿದ್ದಾರೆ.

ಕಾಲು ಹಿಡಿದು, ತಲೆಹಿಡಿಯುವ ಕೆಲಸ ಮಾಡಿಲ್ಲ: ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ಮತ್ತೆ ಕಿಡಿ

ಬಿಜೆಪಿ ಶಾಸಕ ಯತ್ನಾಳ್ ಅವರು ಕೇಂದ್ರದಲ್ಲಿ ಸಚಿವರಾಗಿದ್ದವರು. ಅವರ ಪಕ್ಷದ ವಿಚಾರವನ್ನು ತಿಳಿಸಿದ್ದಾರೆ. ಅವರಿಗೆ ಅನುಭವವಿದೆ ಎನ್ನುವ ಮೂಲಕ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ನಡೆದಿರುವುದು ಸತ್ಯ ಎಂದು ಪರೋಕ್ಷವಾಗಿ ಡಿಕೆಶಿ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಶಿರಾದಲ್ಲಿ ಅವರು ಮಾತನಾಡಿದ್ದಾರೆ.

ಯತ್ನಾಳ್ ಮಾತಿಗೆ ಯಡಿಯೂರಪ್ಪ ಪ್ರತಿಕ್ರಿಯೆ

ಯತ್ನಾಳ್ ಮಾತಿಗೆ ಯಡಿಯೂರಪ್ಪ ಪ್ರತಿಕ್ರಿಯೆ

ಇನ್ನು ಬಿಜೆಪಿ ಹಿರಿಯ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನ ಸೆಳೆಯಲಾಯ್ತು. ಬೆಂಗಳೂರಿನಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿದ ಬಳಿಕ ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ ವೈಮಾನಿಕ ಸಮೀಕ್ಷೆಗೆ ತೆರಳುವುದನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಇದೇ ಸಂದರ್ಭದಲ್ಲಿ ಮಾಧ್ಯಮದವರು, ನಿಮ್ಮ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ನಿಮ್ಮ ಪ್ರತಿಕ್ರಿಯೆ ಏನು? ಯತ್ನಾಳ್ ಅವರನ್ನು ಕರೆದು ಮಾತನಾಡುತ್ತೀರಾ ಎಂದು ಪ್ರಶ್ನಿಸಿದರು. ಆದರೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.

ಯಡಿಯೂರಪ್ಪ ಇನ್ನೇನು ಹೆಚ್ಚು ದಿನ ಸಿಎಂ ಆಗಿರೊಲ್ಲ

ಯಡಿಯೂರಪ್ಪ ಇನ್ನೇನು ಹೆಚ್ಚು ದಿನ ಸಿಎಂ ಆಗಿರೊಲ್ಲ

ಬಿಜೆಪಿ ಹೈಕಮಾಂಡ್‌ಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಂಭಾಳಿಸಿ ಸಾಕಾಗಿ ಹೋಗಿದೆ. ಹೀಗಾಗಿ ಹೈಕಮಾಂಡ್‌ಗೂ ಸಿಎಂ ಯಡಿಯೂರಪ್ಪ ಸಾಕಾಗಿ ಹೋಗಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಇನ್ನೇನು ಬಹಳ ದಿನ ಕರ್ನಾಟಕದ ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಹಿರಂಗವಾಗಿಯೇ ವಿಜಯಪುರದಲ್ಲಿ ಹೇಳಿಕೆ ಕೊಟ್ಟಿದ್ದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

ಯತ್ನಾಳ್‌ಗೆ ತಿರುಗೇಟು ಕೊಟ್ಟಿದ್ದ ಅಶೊಕ್, ರೇಣುಕಾಚಾರ್ಯ

ಯತ್ನಾಳ್‌ಗೆ ತಿರುಗೇಟು ಕೊಟ್ಟಿದ್ದ ಅಶೊಕ್, ರೇಣುಕಾಚಾರ್ಯ

ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮುಖ್ಯಮಂತ್ರಿ ಬದಲಾವಣೆ ಬಹಿರಂಗ ಹೇಳಿಕೆ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಮರ್ಥಿಸಿಕೊಂಡು ಸಚಿವ ಆರ್. ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಯತ್ನಾಳ್ ಅವರ ಮೇಲೆ ಮುಗಿಬಿದ್ದಿದ್ದಾರೆ.

ಇಷ್ಟೆಲ್ಲದ ಬಳಿಕವೂ ತಮ್ಮ ಹೇಳಿಕೆ ಸರಿಯಾಗಿದ್ದು, ಹೇಳಿಕೆಗೆ ಬದ್ಧವಿರುವುದಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕೊಟ್ಟಿದ್ದಾರೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಲ್ಮಟ್ಟಿಯಲ್ಲಿ ಪ್ರವಾಹ ಪೀಡಿತ ವಿಜಯಪುರ ಜಿಲ್ಲೆ ಕುರಿತು ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ವಿಜಯಪುರ ಶಾಸಕ ಯತ್ನಾಳ್ ಭಾಗವಹಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

   Modi ಭಾಷಣ ಹೇಗಿತ್ತು ಗೊತ್ತಾ?? | Oneindia Kannada

   English summary
   Chief Minister BS Yediyurappa's response to the BJP Senior MLA Basanagouda Patil Yatnal's public statement on Chief Minister's change in Karnataka. Know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X