ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡ್ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಖಚಿತ!

|
Google Oneindia Kannada News

ಬೆಂಗಳೂರು, ನ. 19: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ದಿನೇದಿನೇ ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿಯೇ ಹೈಕಮಾಂಡ್ ಭೇಟಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ತೆರಳಿದ್ದರು. ಯಡಿಯೂರಪ್ಪ ಅವರು ಬರಿಗೈಲಿ ವಾಪಾಸ್ಸಾಗಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಮಹತ್ವದ ಹೇಳಿಕೆಯನ್ನು ಸಂಪುಟ ವಿಸ್ತರಣೆ ಕುರಿತಂತೆ ಅವರು ಕೊಟ್ಟಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ಹೇಳಿಕೆಯನ್ನು ಗಮನಿಸಿದರೆ ಇನ್ನು ಎರಡ್ಮೂರು ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ. ಈ ಬಗ್ಗೆ ಸ್ವತಃ ಯಡಿಯೂರಪ್ಪ ಅವರೆ ಮಾತನಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರು ಮಾತನಾಡಿದ್ದು, ಸಂಪುಟ ಪುನರ್ ರಚನೆ ಆಗಲಿದೆ ಎಂಬ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಸಂಪುಟ ವಿಸ್ತರಣೆಗೆ ಸಿಗದ ಒಪ್ಪಿಗೆ: ಬಿಎಸ್‌ವೈ ಆಸೆಗೆ ತಣ್ಣೀರು, ಬರಿಗೈಲಿ ವಾಪಸ್ಸಂಪುಟ ವಿಸ್ತರಣೆಗೆ ಸಿಗದ ಒಪ್ಪಿಗೆ: ಬಿಎಸ್‌ವೈ ಆಸೆಗೆ ತಣ್ಣೀರು, ಬರಿಗೈಲಿ ವಾಪಸ್

ನಾನು ದೆಹಲಿಗೆ ಹೋಗಿ ಚರ್ಚೆ ಮಾಡಿ ಬಂದಿದ್ದೇನೆ. ಆಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕೊಟ್ಟು ಬಂದಿದ್ದೇನೆ. ಎರಡ್ಮೂರು ದಿನಗಳಲ್ಲಿ ಪಟ್ಟಿ ಬರುತ್ತದೆ. ಆ ನಂತರ ತೀರ್ಮಾನ ಮಾಡುತ್ತೇನೆ. ಸಂಪುಟ ವಿಸ್ತರಣೆ ಆಗುತ್ತದೆಯೊ? ಪುನಾರಚನೆ ಆಗುತ್ದೆಯೊ? ಎಂಬುದನ್ನು ನೋಡಬೇಕು. ದೆಹಲಿಯವರು ಏನು ಹೇಳುತ್ತಾರೊ ಹಾಗೆ ತೀರ್ಮಾನ ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಹೇಳಿಕೆ ನೀಡಿದ್ದಾರೆ.

Yediyurappa said that list of aspirants in ministry has been given to High Command

Recommended Video

KL Rahulಗೆ Australiaದಲ್ಲಿ ಸಿಗಲಿದೆ ಚಿನ್ನದಂತಹ ಅವಕಾಶ | Oneindia Kannada

ಗೃಹ ಕಚೇರಿ ಕೃಷ್ಣ ಬಳಿ ಹೊಯ್ಸಳ ಇ-ಟ್ಯಾಕ್ಸಿ ಸೇವೆಗೆ ಚಾಲನೆ ಲೋಕಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಕುರಿತು ಮಾಹಿತಿ ನೀಡಿದ್ದಾರೆ. ಇದೀಗ ಸಂಪುಟ ಪುನಾರಚನೆ ಆಗುವುದು ಬಹುತೇಕ ಖಚಿತವಾಗಿದ್ದು, ಕಳಪೆ ಸಾಧನೆ ಮಾಡಿರುವ ಮಂತ್ರಿಗಳಲ್ಲಿ ಆತಂಕ ಶುರುವಾಗಿದೆ.

English summary
Chief Minister BS Yediyurappa has said that the list of aspirants in the ministry has been given to the High Command and the cabinet will be expand or reshuffle within three days. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X