ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋಡಿಹಳ್ಳಿ ಚಂದ್ರಶೇಖರ್ ಕುರಿತು ಯಡಿಯೂರಪ್ಪ ಮಹತ್ವದ ಹೇಳಿಕೆ!

|
Google Oneindia Kannada News

ಬೆಂಗಳೂರು, ಡಿ. 14: ಇನ್ನೇನೂ ಸಾರಿಗೆ ನೌಕರರ ಮುಷ್ಕರ ಅಂತ್ಯವಾಯ್ತು ಎನ್ನುತ್ತಿರುವಾಗಲೇ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಸರ್ಕಾರದ ಪ್ರಯತ್ನಗಳ ಹೊರತಾಗಿಯೂ ನಾಲ್ಕೂ ನಿಗಮಗಳ ಸಿಬ್ಬಂದಿ ಮುಷ್ಕರ ವಾಪಾಸ್ ಪಡೆದಿಲ್ಲ. ಇದೇ ಸಂದರ್ಭದಲ್ಲಿ ಮುಷ್ಕರ ನಿರತ ರಾಜ್ಯ ಸಾರಿಗೆ ಸಂಸ್ಥೆ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

Recommended Video

Bangalore: ಕೋಡಿಹಳ್ಳಿ ನೇತೃತ್ವದಲ್ಲೇ ನಮ್ಮ ಹೋರಾಟ..! | Oneindia Kannada

ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಚರ್ಚೆಯಲ್ಲಿ ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆನ್ನುವ ಬೇಡಿಕೆಯನ್ನು ಹೊರತುಪಡಿಸಿ ವೇತನ ತಾರತಮ್ಯ, ಕೋವಿಡ್ 19 ರಿಂದ ಮೃತರಾದ ಸಾರಿಗೆ ನೌಕರರ ಕುಟುಂಬಗಳಿಗೆ 30 ಲಕ್ಷ ರೂ. ಗಳ ಪರಿಹಾರ, ಮೇಲಾಧಿಕಾರಿಗಳ ಕಿರುಕುಳ ತಪ್ಪಿಸಲು ಕ್ರಮ ಮುಂತಾದ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು.

ಸಾರಿಗೆ ನೌಕರರೊಂದಿಗೆ ಸರ್ಕಾರದ ಸಂಧಾನ ಸಫಲ: ರಾತ್ರಿಯಿಂದಲೇ ಬಸ್ ಸಂಚಾರಸಾರಿಗೆ ನೌಕರರೊಂದಿಗೆ ಸರ್ಕಾರದ ಸಂಧಾನ ಸಫಲ: ರಾತ್ರಿಯಿಂದಲೇ ಬಸ್ ಸಂಚಾರ

ಇವುಗಳಿಗೆ ಸಭೆಯಲ್ಲಿ ಒಪ್ಪಿಕೊಂಡು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರಕಟಿಸುವುದಾಗಿ ಹೇಳಿದ ಸಾರಿಗೆ ನೌಕಕರ ಸಂಘದ ಮುಖಂಡರು, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ.

Yediyurappa says that Kodihalli Chandrashekar is unnecessarily misleading KSRTC employees

ಕೋಡಿಹಳ್ಳಿ ಚಂದ್ರಶೇಖರ್ ಕುರಿತು ಯಡಿಯೂರಪ್ಪ ಹೇಳಿಕೆ: ಕೋಡಿಹಳ್ಳಿ ಚಂದ್ರಶೇಖರ್ ಅವರು ಅನಗತ್ಯವಾಗಿ ನೌಕರರ ದಾರಿತಪ್ಪಿಸುತ್ತಿರುವುದು ಸರಿಯಲ್ಲ. ಅವರ ದುರುದ್ದೇಶಪೂರಿತ ನಡೆ ಖಂಡನೀಯ ಎಂದಿರುವ ಮುಖ್ಯಮಂತ್ರಿಗಳು ಮುಷ್ಕರದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ, ಸಾರಿಗೆ ಸಂಸ್ಥೆಗೆ ನಷ್ಟ ಹಾಗೂ ಸಾರಿಗೆ ಸಂಸ್ಥೆಯ ನೌಕರರಿಗೂ ತೊಂದರೆಯಾಗುತ್ತದೆ. ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.

English summary
Kodihalli Chandrashekar is unnecessarily misleading employees says chief minister B.S. Yediyurappa. Chief Minister B.S. yediyurappa has called for the employees to call off the strike and attend duty. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X