ಅಧಿವೇಶನ ಮೊಟಕು: ಬಿಎಸ್‌ವೈ, ಸಿದ್ದರಾಮಯ್ಯ, ಎಚ್‌ಡಿಕೆ ಪ್ರತಿಕ್ರಿಯೆ

ಬೆಂಗಳೂರು, ಸೆ. 21: ವಿಧಾನ ಮಂಡಲ ಮಳೆಗಾಲದ ಅಧಿವೇಶನವನ್ನು ಮೂರೇ ದಿನಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅಧಿವೇಶನವನ್ನು ಬೇಗ ಮುಗಿಸುವ ಬಗ್ಗೆ ವಿಪಕ್ಷಗಳ ಸಹಕಾರವನ್ನು ಕೋರುತ್ತೇನೆ. ಯಾಕೆಂದರೆ 50 ರಿಂದ 60 ಜನರು ಕೋವಿಡ್ ನಿಂದಾಗಿ ಸದನಕ್ಕೆ ಬರುತ್ತಿಲ್ಲ. ಅವನ್ನೆಲ್ಲ ಹೊರಗಿಟ್ಟು ಸದನ ನಡೆಸುವುದೂ ಸಾಧ್ಯವಿಲ್ಲ. ಹೀಗಾಗಿ ಬೇಗ ಮುಗಿಸಲು ವಿಪಕ್ಷ ನಾಯಕರ ಸಹಕಾರ ಕೇಳುತ್ತೇನೆ. ಅವರು ಯಾವ ರೀತಿ ಸಹಕಾರ ಕೊಡುತ್ತಾರೆ ಎಂಬುದನ್ನು ನೋಡೋಣ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ಕೊಟ್ಟಿದ್ದಾರೆ.

ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆ. ಸಭೆಯಲ್ಲಿ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ವೈರಸ್ ಸೋಂಕು ತಗುಲಿರುವುದರಿಂದ ಐವರು ಸಚಿವರು, 13 ಶಾಸಕರು ಸದನಕ್ಕೆ ಹಾಜರಾಗುತ್ತಿಲ್ಲ. ಜೊತೆಗೆ ವಯಸ್ಸಿನ ಕಾರಣದಿಂದ ಹಿರಿಯ ಶಾಸಕರೂ ಕೂಡ ಸದನಕ್ಕೆ ಗೈರಾಗುತ್ತಿದ್ದಾರೆ. ಹೀಗಾಗಿ ಅಧಿವೇಶನ ಮೊಟಕುಗೊಳಿಸಬೇಕಾಗಿದೆ ಎಂದು ಸಿಎಂ ಹೇಳಿದ್ದಾರೆ. ಸರ್ಕಾರದ ಈ ತೀರ್ಮಾನಕ್ಕೆ ವಿರೋಧ ಪಕ್ಷಗಳ ನಾಯಕು ವಿಧಾನಸೌಧದಲ್ಲಿ ಏನು ಹೇಳಿದ್ದಾರೆ? ಎಂಬುದು ಮುಂದಿದೆ.

ಅದು ನಿಮ್ಮಿಂದ ಜಾಸ್ತಿ ಆಗ್ತಾ ಇದೆ ಎಂದೆ

ಅದು ನಿಮ್ಮಿಂದ ಜಾಸ್ತಿ ಆಗ್ತಾ ಇದೆ ಎಂದೆ

ಸರ್ಕಾರದ ತೀರ್ಮಾನವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿರೋಧಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿರುವ ಅವರು ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳಿಗ್ಗೆ ನನ್ನೊಂದಿಗೆ ಮಾತನಾಡಿದರು. ಕೊರೊನಾ ವೈರಸ್ ಜಾಸ್ತಿ ಆಗ್ತಾ ಇದೆ ನಿಜ. ಅದು ನಿಮ್ಮಿಂದಲೇ ಜಾಸ್ತಿ ಆಗ್ತಾ ಇದೆ ಎಂದು ಅವರಿಗೆ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ಅಧಿವೇಶನ ಮೊಟಕುಗೊಳಿಸಲು ಒಪ್ಪುವ ಮಾತೇ ಇಲ್ಲ. ಅಧಿವೇಶನವನ್ನು ಇನ್ನೂ ಮೂರು ವಾರಗಳ ಕಾಲ ವಿಸ್ತರಿಸಿ ಎಂದು ಯಡಿಯೂರಪ್ಪ ಅವರಿಗೆ ಹೇಳಿದ್ದೇನೆ.

ಸುಮಾರು 30 ರಿಂದ 40 ವಿಧೇಯಕಗಳನ್ನು ತಂದಿದ್ದಾರೆ. ಅವನ್ನೆಲ್ಲಾ ವಾಪಸ್ ತೆಗೆದುಕೊಳ್ಳಲಿ. ವಾಪಾಸ್ ಪಡೆದುಕೊಂಡರೆ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ನೋಡೋಣ ಎಂದು ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಯಾವುದೇ ಕಾರಣಕ್ಕೂ ಮೊಟಕು ಬೇಡ

ಯಾವುದೇ ಕಾರಣಕ್ಕೂ ಮೊಟಕು ಬೇಡ

ಕೊರೊನಾ ವೈರಸ್ ಆತಂಕದ ಮಧ್ಯೆ ಜನ ಜೀವನ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿರುವ ಅವರು, ಸಾಕಷ್ಟು ವಿಚಾರಗಳ ಬಗ್ಗೆ ಉಭಯ ಸದನಗಳಲ್ಲಿ ಚರ್ಚೆಯಾಗಬೇಕಿದೆ. ಹೀಗಾಗಿ ಅಧಿವೇಶನ ಯಾವುದೇ ಕಾರಣಕ್ಕೂ ಮೊಟಕುಗೊಳಿಸಬಾರದು. ಅಧಿವೇಶನ ಮುಂದುವರೆಯಬೇಕು. ಅಧಿವೇಶನ ಮುಂದುವರೆಯಬೇಕು ಎಂಬುದು ಜೆಡಿಎಸ್ ಪಕ್ಷದ ನಿಲುವು ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮೊಟಕು ಮಾಡುವ ಬಗ್ಗೆ ಚರ್ಚೆಯಾಗಿದೆ

ಮೊಟಕು ಮಾಡುವ ಬಗ್ಗೆ ಚರ್ಚೆಯಾಗಿದೆ

ಇನ್ನು ಅಧಿವೇಶನ ಮೊಟಕುಗೊಳಿಸುವ ಬಗ್ಗೆ ಚರ್ಚೆಯಾಗಿದೆ ಎಂದು ವಿಧಾನಸೌಧದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಹೇಳಿದ್ದಾರೆ. ಕೊರೊನಾ ವೈರಸ್‌ನಿಂದ ಸಾಕಷ್ಟು ಬಳಲುತ್ತಿದ್ದಾರೆ. ಹಣಕಾಸು ವಿಧೇಯಕಕ್ಕೆ ಒಪ್ಪಿಗೆ ತೆಗೆದುಕೊಳ್ಳಬೇಕು. ಹೀಗಾಗಿ ಅಧಿವೇಶನ ನಡೆಸಿ ವಿಧೇಯಕಗಳಿಗೆ ಅಂಗೀಕಾರ ಪಡೆದುಕೊಳ್ಳಬೇಕು. ಎಷ್ಟು ದಿನ ಅಧಿವೇಶನ ನಡೆಸಬೇಕು ಎಂಬುದನ್ನು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ತೆಗದುಕೊಳ್ಳುತ್ತೇವೆ ಎಂದಿದ್ದಾರೆ.

Recommended Video

    8 ಜನ ರಾಜ್ಯಸಭಾ ಸದಸ್ಯರು ಅಮಾನತು !! | Oneindia Kannada
    18 ಶಾಸಕರಿಗೆ ಕೊರೊನಾ ಸೋಂಕು

    18 ಶಾಸಕರಿಗೆ ಕೊರೊನಾ ಸೋಂಕು

    ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ಹಾಗೂ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದೆ. ಜೊತೆಗೆ 13 ಶಾಸಕರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಶಾಸಕರಾದ ಎನ್.ಎ. ಹ್ಯಾರಿಸ್, ಎಚ್.ಪಿ. ಮಂಜುನಾಥ, ಕೆ. ಮಹಾದೇವ, ಬಿ. ನಾರಾಯಣ ರಾವ್, ಡಿ.ಎಸ್. ಹುಲಗೇರಿ, ಬಸನಗೌಡ ದದ್ದಲ್, ವೆಂಕಟರಾವ್ ನಾಡಗೌಡ, ಪ್ರಿಯಾಂಕ್ ಖರ್ಗೆ, ಉಮಾನಾಥ್ ಕೊಟ್ಯಾನ್, ಡಿ.ಸಿ. ಗೌರಿಶಂಕರ, ಎಂ.ಪಿ. ಕುಮಾರಸ್ವಾಮಿ, ಕುಸುಮಾ ಶಿವಳ್ಳಿ ಹಾಗೂ ಬಿ.ಕೆ. ಸಂಗಮೇಶ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಗೈರಯ ಹಾಜರಾಗುತ್ತಿದ್ದಾರೆ.

    ಕೊರೊನಾ ವೈರಸ್ ಸೋಂಕು ಪಾಸಿಟಿವ್ ಆಗಿರುವವರು ಅಧಿವೇಶನದಲ್ಲಿ ಭಾಗವಹಿಸಲು ಅವಕಾಶವಿಲ್ಲ ಎಂದು ಈಗಾಗಲೇ ವಿಧಾನಸಭೆ ಸಚಿವಾಲಯ ಸೂಚಿಸಿದೆ. ಹೀಗಾಗಿ ಪ್ರಮುಖ ವಿಧೇಯಕಗಳನ್ನು ಮತಕ್ಕೆ ಹಾಕುವ ಸಂದರ್ಭ ಬಂದಲ್ಲಿ ಏನು ಮಾಡಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ. ಇದೇ ವಿಚಾರವನ್ನಿಟ್ಟುಕೊಂಡು ವಿಧಾನ ಮಂಡಲ ಅಧಿವೇಶನ ಮೊಟಕು ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+