ಆಸ್ಪತ್ರೆಯಲ್ಲೂ ಕಡತ ಪರಿಶೀಲನೆ ಮಾಡುತ್ತಿರುವ ಯಡಿಯೂರಪ್ಪ!

ಬೆಂಗಳೂರು, ಆಗಸ್ಟ್ 04: ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ಆಸ್ಪತ್ರೆಯಿಂದಲೇ ಅವರು ಕೆಲಸ ಮಾಡುತ್ತಿದ್ದಾರೆ.

Recommended Video

      ಸರ್ಕಾರಿ ಆಸ್ಪತ್ರೆಗಳ ಮೇಲೆ ಸಿದ್ದರಾಮಯ್ಯ, ಯಡಿಯೂರಪ್ಪ ಇಬ್ಬರಿಗೂ ನಂಬಿಕೆ ಇಲ್ಲ | Oneindia Kannada

      ಮಂಗಳವಾರ ಮಣಿಪಾಲ್ ಆಸ್ಪತ್ರೆಯಲ್ಲಿ ಯಡಿಯೂರಪ್ಪ ಕಡತ ಪರಿಶೀಲನೆ ಮಾಡುತ್ತಿರುವ ಫೋಟೋವನ್ನು ಮುಖ್ಯಮಂತ್ರಿಗಳ ಕಚೇರಿ ಬಿಡುಗಡೆ ಮಾಡಿದೆ. ಯಡಿಯೂರಪ್ಪ ಅವರು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

      'ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ತಜ್ಞ ವೈದ್ಯರ ತಂಡ ನಿರಂತರ ನಿಗಾವಹಿಸಿದೆ' ಎಂದು ಆಸ್ಪತ್ರೆಯ ವೈದ್ಯರು ಮಂಗಳವಾರ ತಿಳಿಸಿದ್ದಾರೆ.

      Yediyurappa

      ಭಾನುವಾರ ರಾತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿತ್ತು. ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೂ ವೈದ್ಯರ ಸಲಹೆಯಂತೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

      ಸೋಮವಾರ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಯಡಿಯೂರಪ್ಪ ಅವರು "ಯಾರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆದಷ್ಟು ಬೇಗ ನಾನು ಗುಣಮುಖನಾಗಿ ಹೊರ ಬಂದು ಕೆಲಸ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ" ಎಂದು ಹೇಳಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+