ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊನೆಗೂ ಬಂದ ಕೇಂದ್ರ ತಂಡ: ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಿಎಂ ಯಡಿಯೂರಪ್ಪ!

|
Google Oneindia Kannada News

ಬೆಂಗಳೂರು, ಡಿ. 13: ಪ್ರವಾಹ ಹಾಗೂ ಅತಿವೃಷ್ಟಿಯಿಂದ ಆಗಿರುವ ಹಾನಿ ಅದ್ಯಯನಕ್ಕೆ ಕೇಂದ್ರ ಸರ್ಕಾರ ಕೊನೆಗೂ ರಾಜ್ಯಕ್ಕೆ ತಂಡವನ್ನು ಕಳುಹಿಸಿದೆ. ರಾಜ್ಯಕ್ಕೆ ಪರಿಹಾರ ಕೊಡುವಲ್ಲಿ ಬಹಳಷ್ಟು ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನು ವಿರೋಧ ಪಕ್ಷಗಳು ಮಾಡಿದ್ದವು.

ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯ ಕುರಿತು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡ ಭಾನುವಾರ ರಾಜ್ಯಕ್ಕೆೆ ಆಗಮಿಸಿದೆ. ಪ್ರವಾಹದಿಂದ ಉಂಟಾಗಿರುವ ಹಾನಿಯ ಅಧ್ಯಯನ ನಡೆಸಲು ಆಗಮಿಸಿರುವ ರಮೇಶ್ ಕುಮಾರ್ ಗಂಟ ಅವರ ನೇತೃತ್ವದ ಕೇಂದ್ರ ಇಂಟರ್ ಮಿನಿಸ್ಟೀರಿಯಲ್ ತಂಡವು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಚರ್ಚಿಸಿತು. ಪ್ರವಾಹದಿಂದ 15,410 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡು ಬಾರಿ ವೀಡಿಯೋ ಸಂವಾದ ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು, ಎನ್.ಡಿ.ಆರ್.ಎಫ್‌ನಿಂದ ಕೇಂದ್ರ ಸರ್ಕಾರವು 577.84 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿತ್ತು. ಇದೀಗ ಎರಡನೇ ಇಂಟರ್ ಮಿನಿಸ್ಟೀರಿಯಲ್ ತಂಡವನ್ನು ರಾಜ್ಯಕ್ಕೆ ಕೇಂದ್ರ ಸರ್ಕಾರ ಕಳುಹಿಸಿದೆ.

ವರ್ಷದಲ್ಲಿ ಮೂರು ಬಾರಿ ಪ್ರವಾಹ

ವರ್ಷದಲ್ಲಿ ಮೂರು ಬಾರಿ ಪ್ರವಾಹ

ಆಗಸ್ಟ್ ತಿಂಗಳಿನಲ್ಲಿ ಉಂಟಾದ ಪ್ರವಾಹದ ನಂತರ ರಾಜ್ಯದಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ 2 ಮತ್ತು 3ನೇ ವಾರದಲ್ಲಿ ಭಾರಿ ಮಳೆ ಉಂಟಾಯಿತು. ಇದರೊಂದಿಗೆ ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚಿನ ನೀರು ಬಿಡುಗಡೆಯಾಗಿ ಒಂದೇ ವರ್ಷದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಭೀಮಾ ಮತ್ತು ಕೃಷ್ಣಾ ಜಲಾಶಯಗಳಲ್ಲಿ ಪ್ರವಾಹ ಉಂಟಾಯಿತು ಎಂದು ಕೇಂದ್ರ ತಂಡಕ್ಕೆ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.

ಪ್ರವಾಹ ಮತ್ತು ಭೂ ಕುಸಿತದಿಂದಾಗಿ 16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಮೂಲಭೂತ ಸೌಲಭ್ಯಗಳಿಗೆ ತೀವ್ರ ಹಾನಿಯುಂಟಾಗಿರುವುದಲ್ಲದೆ, 34, 794 ಮನೆಗಳಿಗೆ ಹಾನಿಯುಂಟಾಗಿದ್ದು, ಒಟ್ಟಾರೆ 15,410 ಕೋಟಿ ರೂ. ಗಳ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯ ಸರ್ಕಾರದಿಂದ ಪರಿಹಾರ

ರಾಜ್ಯ ಸರ್ಕಾರದಿಂದ ಪರಿಹಾರ

ತಕ್ಷಣದ ಪರಿಹಾರವಾಗಿ ರಾಜ್ಯ ಸರ್ಕಾರವು 7.12 ಲಕ್ಷ ರೈತರಿಗೆ 551.14 ಕೋಟಿ ರೂ.ಗಳ ಇನ್‍ಪುಟ್ ಸಹಾಯಧನವನ್ನು ಹಂಚಿಕೆ ಮಾಡಿದೆ ಎಂದು ವಿವರಿಸಿದ ಸಿಎಂ ಯಡಿಯೂರಪ್ಪ, ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ ರೂ, ತೀವ್ರ ಹಾನಿಗೊಳಗಾದ ಮನೆಗಳಿಗೆ 3 ಲಕ್ಷ ರೂ.ಗಳು ಹಾಗೂ ಭಾಗಶಃ ಹಾನಿಗೊಳಗಾದ ಮನೆಗಳಿಗೆ ರೂ.50 ಸಾವಿರಗಳ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಒದಗಿಸುತ್ತಿದೆ. ಈ ಮೊತ್ತವು ಎಸ್.ಡಿ.ಆರ್.ಎಫ್ ಮಾರ್ಗಸೂಚಿಗಿಂತಲೂ ಹೆಚ್ಚುವರಿಯಾಗಿ ರಾಜ್ಯದ ಅನುದಾನದಿಂದ ಭರಿಸಿದೆ. ಈ ಸಾಲಿನಲ್ಲಿ 465 ಕೋಟಿ.ರೂ.ಗಳನ್ನು ಗೃಹ ನಿರ್ಮಾಣ ನೆರವಿಗಾಗಿ ಭರಿಸಲಿದೆ ಎಂದರು.

ಕೇಂದ್ರದ ಪರಿಹಾರಕ್ಕೆ ಸಿಎಂ ಮನವಿ

ಕೇಂದ್ರದ ಪರಿಹಾರಕ್ಕೆ ಸಿಎಂ ಮನವಿ

ರಾಜ್ಯದಲ್ಲಿ ಪ್ರವಾಹದಿಂದ ಅಂದಾಜು 15410 ಕೋಟಿ ರೂ. ಗಳ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ಥರಿಗೆ ಹಾಗೂ ಹಾನಿಗೊಳಗಾಗಿರುವ ಮೂಲಭೂತ ಸೌಕರ್ಯಗಳ ದುರಸ್ಥಿಗೆ ಐ.ಎಂ.ಸಿ.ಟಿ ತಂಡವು ಕೇಂದ್ರ ನೆರವನ್ನು ಒದಗಿಸಲು ಶಿಫಾರಸ್ಸು ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

Recommended Video

ಕರ್ನಾಟಕ: ಸರ್ಕಾರ, ಸಾರಿಗೆ ನೌಕರರ ನಡುವಿನ ಹಗ್ಗಜಗ್ಗಾಟ ಅಂತ್ಯ..! | Oneindia Kannada
ಮೂರು ತಂಡಗಳಿಂದ ಅದ್ಯಯನ

ಮೂರು ತಂಡಗಳಿಂದ ಅದ್ಯಯನ

ಮೂರು ತಂಡಗಳಲ್ಲಿ ಆಗಮಿಸಿರುವ ಕೇಂದ್ರ ಅಧಿಕಾರಿಗಳು ಸೋಮವಾರ ಕಲಬುರ್ಗಿ, ವಿಜಯಪುರ ಹಾಗೂ ಉಡುಪಿ ಜಿಲ್ಲೆೆಗಳಲ್ಲಿ ಅಧ್ಯಯನ ನಡೆಸಿ, ಆಯಾ ಜಿಲ್ಲೆೆಗಳಲ್ಲಿಯೇ ವಾಸ್ತವ್ಯ ಹೂಡಿ, ಡಿಸೆಂಬರ್ 15 ರಂದು ಬೆಂಗಳೂರಿಗೆ ಆಗಮಿಸಿ ಮುಖ್ಯಕಾರ್ಯದರ್ಶಿಯೊಂದಿಗೆ ಸಭೆ ನಡೆಸಿ ದೆಹಲಿಗೆ ವಾಪಸ್ಸಾಾಗಲಿದ್ದಾಾರೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾ ಜೆ.ಸಿ.‌ ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
In view of the estimated huge loss of Rs 15410 Crores, CM Yediyurappa urged the IMCT to recommend release of central assistance to enable us to provide relief to the affected people and to take up repair of damaged infrastructure. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X