ದೆಹಲಿಗೆ ಯಡಿಯೂರಪ್ಪ; ಟ್ರಂಪ್ ಜೊತೆ ಔತಣಕೂಟದಲ್ಲಿ ಭಾಗಿ

ಬೆಂಗಳೂರು, ಫೆಬ್ರವರಿ 24 : ಮುಖ್ಯಮಂತ್ರಿ ಯಡಿಯೂರಪ್ಪ ದಿಢೀರ್ ಆಗಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಜೊತೆಗಿನ ಔತಣಕೂಟದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Recommended Video

      Yediyurappa to attend banquet with Donald Trump | BSY | Donald Trump | Oneindia kannada

      ಎರಡು ದಿನದ ಭೇಟಿಗಾಗಿ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಆಗಮಿಸಿದ್ದಾರೆ. ಮಂಗಳವಾರ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಡೊನಾಲ್ಡ್ ಟ್ರಂಪ್‌ ದಂಪತಿಗೆ ಔತಣಕೂಟ ಆಯೋಜನೆ ಮಾಡಲಾಗಿದೆ.

      ರಾಷ್ಟ್ರಪತಿ ಭವನದಲ್ಲಿ ನಡೆಯುವ ಔತಣಕೂಟದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಆಹ್ವಾನ ನೀಡಲಾಗಿತ್ತು. ಯಡಿಯೂರಪ್ಪ ಮಂಗಳವಾರ ಬೆಳಗ್ಗೆ 11.30ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

      Yediyurappa

      ಎಲ್ಲಾ ಪೂರ್ವ ನಿಗದಿತ ಕಾರ್ಯಕ್ರಮ ರದ್ದುಗೊಳಿಸಿ ಮಂಗಳವಾರ ರಾತ್ರಿ ನಡೆಯುವ ಔತಣಕೂಟದಲ್ಲಿ ಪಾಲ್ಗೊಳ್ಳುವ ಯಡಿಯೂರಪ್ಪ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ಬೆಳಗ್ಗೆ ಅವರು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.

      ಯಡಿಯೂರಪ್ಪ ಸೋಮವಾರ ಶಿವಮೊಗ್ಗ ಪ್ರವಾಸದಲ್ಲಿದ್ದರು. "ಔತಣಕೂಟದಲ್ಲಿ ಪಾಲ್ಗೊಳ್ಳಲು ಆಹ್ವಾನ ಬಂದಿದೆ. ಪಾಲ್ಗೊಳ್ಳುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿಕೆ ನೀಡಿದ್ದರು.

      ಸೋಮವಾರ ಬೆಳಗ್ಗೆ 11.40ಕ್ಕೆ ಅಹಮದಾಬಾದ್‌ಗೆ ಆಗಮಿಸಿದ ಡೊನಾಲ್ಡ್ ಟ್ರಂಪ್ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಬಳಿಕ 'ನಮಸ್ತೆ ಟ್ರಂಪ್' ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಜೆ ತಾಜ್ ಮಹಲ್ ವೀಕ್ಷಣೆ ಮಾಡಿರುವ ಅವರು ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.

      ಮಂಗಳವಾರ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವರು ಸಂಜೆ 7ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿಯಾಗಲಿದ್ದಾರೆ. ಜೌತಣಕೂಟ ಮುಗಿಸಿಕೊಂಡು ರಾತ್ರಿ 10 ಗಂಟೆಗೆ ವಾಪಸ್ ತೆರಳಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+