ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನ ಪರಿಷತ್ ಚುನಾವಣೆ; ಯಡಿಯೂರಪ್ಪ ಮಾತೇ ಅಂತಿಮ!

|
Google Oneindia Kannada News

ಬೆಂಗಳೂರು, ಜೂನ್ 11 : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ವಿಚಾರದ ಬಗ್ಗೆ ಚರ್ಚೆಗಳು ನಡೆದಿವೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಾತಿಗೆ ಬೆಲೆ ಸಿಕ್ಕಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ.

Recommended Video

DK Shivakumar finally gets good news from BS Yediyurappa | Oneindia Kannada

ರಾಜ್ಯಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಮುಗಿಯುತ್ತಿದ್ದಂತೆ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಒಟ್ಟು 7 ಸದಸ್ಯರನ್ನು ಕರ್ನಾಟಕ ವಿಧಾನಸಭೆಯಿಂದ ಪರಿಷತ್‌ಗೆ ಆಯ್ಕೆ ಮಾಡಬೇಕಿದೆ. ಪರಿಷತ್ ಪ್ರವೇಶಿಸಲು ಪೈಪೋಟಿ ಆರಂಭವಾಗಿದೆ.

ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಈರಣ್ಣ ಕಡಾಡಿ ರಾಜ್ಯಸಭೆಗೆ! ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಈರಣ್ಣ ಕಡಾಡಿ ರಾಜ್ಯಸಭೆಗೆ!

ವಿಧಾನ ಪರಿಷತ್ ಚುನಾವಣೆ ಜೂನ್ 29ರಂದು ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಡಿಯೂರಪ್ಪ ಮಾತೇ ಅಂತಿಮ ಎಂದು ಬಿಜೆಪಿ ಹೈಕಮಾಂಡ್ ತೀರ್ಮಾನ ಕೈಗೊಂಡಿದೆ. ಸಂಖ್ಯಾ ಬಲದ ಆಧಾರದ ಮೇಲೆ ಬಿಜೆಪಿ 4 ಸ್ಥಾನಗಳಲ್ಲಿ ಜಯಗಳಿಸಬಹುದಾಗಿದೆ.

ಪರಿಷತ್ ಚುನಾವಣೆ: ಯುಟರ್ನ್ ಹೊಡೆದ ಎಸ್‌.ಟಿ. ಸೋಮಶೇಖರ್?ಪರಿಷತ್ ಚುನಾವಣೆ: ಯುಟರ್ನ್ ಹೊಡೆದ ಎಸ್‌.ಟಿ. ಸೋಮಶೇಖರ್?

ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿತ್ತು. ಆದರೆ ಅಭ್ಯರ್ಥಿಗಳನ್ನು ಬದಲಿಸಲು ಹೇಳಿದ್ದ ಹೈಕಮಾಂಡ್ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು.

 ವಿಶ್ವನಾಥ್ ಗೆ ವಿಧಾನ ಪರಿಷತ್ ಸ್ಥಾನ‌ ನೀಡಲು ಶ್ರೀನಿವಾಸ ಪ್ರಸಾದ್ ಮನವಿ ವಿಶ್ವನಾಥ್ ಗೆ ವಿಧಾನ ಪರಿಷತ್ ಸ್ಥಾನ‌ ನೀಡಲು ಶ್ರೀನಿವಾಸ ಪ್ರಸಾದ್ ಮನವಿ

ಬಿಜೆಪಿ ಶಕ್ತಿ ಹೆಚ್ಚಲಿದೆ

ಬಿಜೆಪಿ ಶಕ್ತಿ ಹೆಚ್ಚಲಿದೆ

ಜೂನ್ 29ರಂದು ಒಟ್ಟು ಏಳು ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಇದರಲ್ಲಿ ಬಿಜೆಪಿಗೆ 4 ಸ್ಥಾನ ಸಿಗಲಿದೆ. ಜೊತೆಗೆ ನಾಮ ನಿರ್ದೇಶನ ಕೋಟಾದಡಿ 5 ಸದಸ್ಯರನ್ನು ಪರಿಷತ್‌ಗೆ ನೇಮಿಸುವ ಅವಕಾಶವೂ ಸರ್ಕಾರಕ್ಕೆ ಸಿಗಲಿದೆ.

ಬಿಜೆಪಿ ಅಭ್ಯರ್ಥಿಗಳಾಗಲು ಪೈಪೋಟಿ

ಬಿಜೆಪಿ ಅಭ್ಯರ್ಥಿಗಳಾಗಲು ಪೈಪೋಟಿ

ವಿಧಾನ ಪರಿಷತ್ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದ ಈರಣ್ಣ ಕಡಾಡಿಗೆ ರಾಜ್ಯಸಭೆ ಪ್ರವೇಶಿಸುವ ಅವಕಾಶವನ್ನು ಬಿಜೆಪಿ ನೀಡಿದೆ. ಈಗ 4 ಬಿಜೆಪಿ ಟಿಕೆಟ್‌ಗಾಗಿ ಡಜನ್‌ಗೂ ಅಧಿಕ ಆಕಾಂಕ್ಷಿಗಳಿದ್ದಾರೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸವಾಲಿನ ಕೆಲಸವಾಗಿದೆ.

ಯಡಿಯೂರಪ್ಪಗೆ ಅಧಿಕಾರ

ಯಡಿಯೂರಪ್ಪಗೆ ಅಧಿಕಾರ

ವಿಧಾನ ಪರಿಷತ್‌ಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ಬಿ. ಎಸ್. ಯಡಿಯೂರಪ್ಪಗೆ ಸಂಪೂರ್ಣ ಅಧಿಕಾರ ನೀಡಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಾಗ ಕೆಲವರಿಗೆ ಯಡಿಯೂರಪ್ಪ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದನ್ನು ಈಗ ಪೂರೈಸಲು ಅವಕಾಶವೂ ಸಿಗಲಿದೆ.

ಉಪ ಚುನಾವಣೆಯಲ್ಲಿ ಸೋತವರು

ಉಪ ಚುನಾವಣೆಯಲ್ಲಿ ಸೋತವರು

ಉಪ ಚುನಾವಣೆಯಲ್ಲಿ ಸೋತ ಎಂಟಿಬಿ ನಾಗರಾಜ್, ಎಚ್. ವಿಶ್ವನಾಥ್ ಮತ್ತು ಟಿಕೆಟ್ ಬಿಟ್ಟುಕೊಟ್ಟ ಆರ್. ಶಂಕರ್‌ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ಬಯಸಿದ್ದಾರೆ. ಜೂನ್ 18ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ.

English summary
Election announced to elect 4 members from Karnataka assembly to legislative council. Chief minister B. S. Yediyurappa to take final decision on selection of candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X