ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆ.5ರಂದು ಬೆಳಗಾವಿ, ವಿಜಯಪುರಕ್ಕೆ ಯಡಿಯೂರಪ್ಪ ಭೇಟಿ

|
Google Oneindia Kannada News

ಬೆಂಗಳೂರು, ಆಗಸ್ಟ್ 04 : "ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಸೋಮವಾರ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿಗಳು, "ಕೃಷ್ಣಾ ನದಿ ಪ್ರವಾಹದಿಂದ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಕೆಲವು ಹಳ್ಳಿಗಳು ಮುಳುಗಡೆ ಆಗಿವೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಬೆಳಗಾವಿಗೆ ಭೇಟಿ ನೀಡುತ್ತೇನೆ. ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ಕೊಡುತ್ತೇನೆ" ಎಂದು ಯಡಿಯೂರಪ್ಪ ತಿಳಿಸಿದರು.

ದೆಹಲಿ ಭೇಟಿ ರದ್ದುಗೊಳಿಸಲು ಯಡಿಯೂರಪ್ಪಗೆ ಎಚ್‌.ಕೆ.ಪಾಟೀಲ್ ಪತ್ರದೆಹಲಿ ಭೇಟಿ ರದ್ದುಗೊಳಿಸಲು ಯಡಿಯೂರಪ್ಪಗೆ ಎಚ್‌.ಕೆ.ಪಾಟೀಲ್ ಪತ್ರ

"ಪ್ರವಾಹದಿಂದಾಗಿ ವಿಜಯಪುರ ಮತ್ತು ಬೆಳಗಾವಿಯ ಕೆಲವು ಹಳ್ಳಿಗಳು ಮುಳುಗಡೆ ಆಗಿವೆ. ಜಿಲ್ಲಾಧಿಕಾರಿಗಳ ಜೊತೆ ಶನಿವಾರ ಚರ್ಚೆ ನಡೆಸಿದ್ದೇನೆ. ನಿರಾಶ್ರಿತರಿಗೆ ಶಾಲೆಗಳಲ್ಲಿ ಉಳಿಯಲು ವ್ಯವಸ್ಥೆ ಮಾಡಲಾಗಿದೆ" ಎಂದರು.

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ರಾಜ್ಯದಲ್ಲಿ ಪ್ರವಾಹ ಭೀತಿಮಹಾರಾಷ್ಟ್ರದಲ್ಲಿ ಭಾರಿ ಮಳೆ: ರಾಜ್ಯದಲ್ಲಿ ಪ್ರವಾಹ ಭೀತಿ

Yediyurappa To Visit Vijayapura And Belagavi

"ಸೋಮವಾರ ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ರಾಜ್ಯದಲ್ಲಿ ಆಗಬೇಕಾದ ಕೆಲಸ ಕಾರ್ಯಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸಬೇಕಿದೆ. ಸಂಪುಟ ರಚನೆ ವಿಚಾರವಾಗಿಯೂ ಚರ್ಚೆ ನಡೆಸಬೇಕಿದೆ. 6, 7, 8 ರಂದು ದೆಹಲಿಯಲ್ಲಿ ಇರುತ್ತೇನೆ. ನಮ್ಮದು ರಾಷ್ಟ್ರೀಯ ಪಕ್ಷ, ವರಿಷ್ಠರು ಸೂಚನೆ ಕೊಡುವ ತನಕ ನಾವು ತೀರ್ಮಾನ ಮಾಡುವುದಕ್ಕೆ ಆಗುವುದಿಲ್ಲ" ಎಂದರು.

ವಿಡಿಯೋ: ಗುಜರಾತ್ ಪ್ರವಾಹ, ಬೀದಿಯಲ್ಲಿ ಈಜಾಡಿದ ಮೊಸಳೆ!ವಿಡಿಯೋ: ಗುಜರಾತ್ ಪ್ರವಾಹ, ಬೀದಿಯಲ್ಲಿ ಈಜಾಡಿದ ಮೊಸಳೆ!

"ವರಿಷ್ಠರು ಸೂಚನೆ ಕೊಟ್ಟ 24 ಗಂಟೆಯೊಳಗೆ ಸಂಪುಟ ರಚನೆ ಮಾಡುತ್ತೇವೆ. ಅದಕ್ಕಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ಮಾಡುತ್ತೇನೆ. ಏಕವ್ಯಕ್ತಿ ಸರ್ಕಾರ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ" ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಹಿರಿಯ ನಾಯಕ ಮತ್ತು ಗದಗ ಕ್ಷೇತ್ರದ ಶಾಸಕ ಎಚ್. ಕೆ. ಪಾಟೀಲ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿತ್ತು.

English summary
Karnataka Chief Minister B.S.Yediyurapp to visit Belagavi and Vijayapura district on August 10, 2019. Both district hit by rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X