• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜನರಿಗೆ ಆಸ್ಪತ್ರೆಯಿಂದ ಯಡಿಯೂರಪ್ಪ ವಿಡಿಯೋ ಸಂದೇಶ

|

ಬೆಂಗಳೂರು, ಆಗಸ್ಟ್ 03 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೋವಿಡ್ - 19 ಸೋಂಕು ತಗುಲಿದೆ. ಬೆಂಗಳೂರು ನಗರದಲ್ಲಿರುವ ಮಣಿಪಾಲ್‌ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು, ಆರೋಗ್ಯವಾಗಿದ್ದಾರೆ.

   BS Yediyurappa ಆಸ್ಪತ್ರೆಯಿಂದ ವಿಡಿಯೋ ಸಂದೇಶ | Oneindia Kannada

   ಯಡಿಯೂರಪ್ಪ ಅವರು ಭಾನುವಾರ ರಾತ್ರಿ ಟ್ವೀಟರ್ ಮೂಲಕ ಸೋಂಕು ತಗುಲಿದ್ದನ್ನು ಖಚಿತಪಡಿಸಿದ್ದರು. "ರೋಗ ಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ" ಎಂದು ಟ್ವೀಟ್ ಮಾಡಿದ್ದರು.

   ಬಿಎಸ್‌ವೈಗೆ ಕೊರೊನಾ ಸೋಂಕು; ವಿಧಾನಸೌಧ ಕಚೇರಿ ಸೀಲ್ ಡೌನ್ ಇಲ್ಲ

   ಮುಖ್ಯಮಂತ್ರಿಗಳ ಗೃಹ ಕಚೇರಿ 'ಕೃಷ್ಣಾ'ಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಗೃಹ ಕಚೇರಿಯ 6 ಸಿಬ್ಬಂದಿಗಳಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಯಡಿಯೂರಪ್ಪ ಜೊತೆ ಸಂಪರ್ಕದಲ್ಲಿದ್ದ ಕುಟುಂಬ ಸದಸ್ಯರು, ಅಧಿಕಾರಿಗಳು, ಸಚಿವರು ಕ್ವಾರಂಟೈನ್ ಆಗಿದ್ದಾರೆ.

   ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರಿಗೂ ಕೊರೊನಾ ಸೋಂಕು

   ಯಡಿಯೂರಪ್ಪ ಅವರು ಸೋಮವಾರ ಆಸ್ಪತ್ರೆಯಿಂದಲೇ ರಾಜ್ಯದ ಜನರಿಗೆ ವಿಡಿಯೋ ಸಂದೇಶವೊಂದನ್ನು ರವಾನೆ ಮಾಡಿದ್ದಾರೆ. "ಯಾರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆದಷ್ಟು ಬೇಗ ನಾನು ಗುಣಮುಖನಾಗಿ ಹೊರ ಬಂದು ಕೆಲಸ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.

   ಯಡಿಯೂರಪ್ಪ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್‌ ಆಸ್ಪತ್ರೆಯಿಂದ ಮಾಹಿತಿ

   ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೇನೆ

   ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದೇನೆ

   ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು, "ಯಾರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆದಷ್ಟು ಬೇಗ ನಾನು ಗುಣಮುಖನಾಗಿ ಹೊರ ಬಂದು ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳುತ್ತೇನೆ. ನಾನು ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ. ಇಲ್ಲಿಂದಲೇ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡುತ್ತಿದ್ದೇನೆ" ಎಂದು ಹೇಳಿದ್ದಾರೆ.

   ಯಾವುದೇ ಆರೋಗ್ಯ ಸಮಸ್ಯೆ ಇಲ್ಲ

   ಯಾವುದೇ ಆರೋಗ್ಯ ಸಮಸ್ಯೆ ಇಲ್ಲ

   "ಭಾನವಾರ ರಾತ್ರಿ ಪಾಸಿಟಿವ್ ಎಂದು ತಿಳಿಯಿತು. ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದೇನೆ. ವೈದ್ಯರು ರಾತ್ರಿಯಿಂದ ಪರೀಕ್ಷೆ ಮಾಡಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ, ಬೇಗ ಗುಣಮುಖರಾಗಿ ಮನೆಗೆ ಹೋಗುತ್ತೀರಿ ಎಂದು ಹೇಳಿದ್ದಾರೆ" ಎಂದು ಯಡಿಯೂರಪ್ಪ ರಾಜ್ಯದ ಜನರಿಗೆ ಸಂದೇಶ ಕಳಿಸಿದ್ದಾರೆ.

   ರಾಜ್ಯದ ಜನರಿಗೆ ಮನವಿ

   ರಾಜ್ಯದ ಜನರಿಗೆ ಮನವಿ

   "ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ, ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಮುಂತಾದವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಮುಖ್ಯ

   ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು" ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

   ಯಡಿಯೂರಪ್ಪ ವಿಡಿಯೋ ಸಂದೇಶ

   ಆಸ್ಪತ್ರೆಯಲ್ಲಿರುವ ಯಡಿಯೂರಪ್ಪ ರಾಜ್ಯದ ಜನರಿಗೆ ವಿಡಿಯೋ ಸಂದೇಶವೊಂದನ್ನು ರವಾನೆ ಮಾಡಿದ್ದಾರೆ. ಅದು ಇಲ್ಲಿದೆ.

   English summary
   Karnataka chief minister B. S. Yediyurappa tested positive for COVID 19. Yediyurappa video message for the people of Karnataka from hospital.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X