ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಮಾರ್ಗದರ್ಶನದಂತೆ ಕರ್ನಾಟಕದ ಅಭಿವೃದ್ಧಿ: ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ನವೆಂಬರ್ 11: ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಂತೆ ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಲಿವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿನಂದನೆಗಳನ್ನು ತಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಕೇಂದ್ರದ ಪ್ರಧಾನಿ ಮೋದಿ ಸರ್ಕಾರದ ಮಾರ್ಗದರ್ಶನದ ಜೊತೆಗೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮತ್ತಷ್ಟು ಹೆಚ್ಚಿಸುವ ಭರವಸೆಯನ್ನು ನೀಡಿದ್ದಾರೆ. ಆ ಮೂಲಕ ಕರ್ನಾಟಕದ ಸುಧಾರಣೆಗೆ ಪೂರಕ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ತಿಳಿಸಿದ್ದಾರೆ.

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ದ ಪ್ರಧಾನಿ ಮೋದಿಯವರು, ಕರ್ನಾಟಕದ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು.

Yediyurappa Vows To Pursue Reforms, Development Thanks PM Modi On Bypoll Win

ಕೇಂದ್ರ ಹಾಗೂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃದೃಢೀಕರಿಸುತ್ತದೆ.

ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.

Recommended Video

ಇವ್ರೆ ನೋಡಿ BJPಯ Lucky charm !! | Oneindia Kannada

ಹಾಗೆಯೇ ಬಿಹಾರದಲ್ಲಿ ಹಾಗೂ ಉಪ ಚುನಾವಣೆಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಸರ್ಕಾರಕ್ಕೂ ಶುಭಾಶಯ ತಿಳಿಸಿದ್ದಾರೆ.

English summary
By Poll Results: Karnataka CM BS Yediyurappa vows to pursue reforms and the path of development as he extended his gratitude to PM Modi following BJP's win in the Karnataka by-polls on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X