ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀರಶೈವ ಮಹಾಸಭಾ ಅಧ್ಯಕ್ಷೆಯಾಗಿ ಯಡಿಯೂರಪ್ಪ ಪುತ್ರಿ ಅರುಣಾದೇವಿ ನೇಮಕ

|
Google Oneindia Kannada News

ಬೆಂಗಳೂರು, ಸೆ. 24: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ.

ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅರುಣಾದೇವಿ ಅವರು ಪದಗ್ರಹಣ ಮಾಡಿದರು. ಅವರೊಂದಿಗೆ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ಅವರು ಅಧಿಕಾರ ಸ್ವೀಕರಿಸಿದರು. ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ ಅವರ ಉಪಸ್ಥಿತಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು.

Yediyurappas Daughter Aruna Devi Became President Of Veerashaiva Mahasabha Womens Wing

ಅರುಣಾದೇವಿ ಅವರು ಶಿವಮೊಗ್ಗದಿಂದ ವೀರಶೈವ ಮಹಾಸಭಾವನ್ನು ಪ್ರತಿನಿಧಿಸುತ್ತಿದ್ದಾರೆ. ಹಾಗೆಯೆ ಕೋಶಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಜಿ. ಗುರುಬಸಪ್ಪ ಅವರು ಬೆಂಗಳೂರು ಮಹನಾಗರದಿಂದ ವೀರಶೈವ ಮಹಾಸಭಾವನ್ನು ಪ್ರತಿನಿಧಿಸುತ್ತಿದ್ದಾರೆ.

Yediyurappas Daughter Aruna Devi Became President Of Veerashaiva Mahasabha Womens Wing

Recommended Video

ಸಿದ್ದು ಹೊಸ ತಂತ್ರಗಾರಿಕೆ | Siddaramaiah | Oneindia Kannada

ಇಬ್ಬರಿಗೂ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಅವರು ಶುಭಹಾರೈಸಿದರು.

English summary
Chief Minister B.S. Yediyurappa's daughter Arunadevi Udayakumar has taken over as the President of the All India Veerashaiva Mahasabha State Women's wing
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X