ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಲಿಕಾಪ್ಟರ್ ತರಬೇತಿ ವಿಭಾಗ ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರ

|
Google Oneindia Kannada News

ಬೆಂಗಳೂರು, ಡಿಸೆಂಬರ್ 29 : ವಾಯುಪಡೆಯ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರ ಮಾಡಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ವಾಯುಪಡೆಯೇ ಬೆಂಗಳೂರಿನಿಂದ ಮೈಸೂರಿಗೆ ಘಟಕ ಸ್ಥಳಾಂತರ ಮಾಡಬೇಕು ಎಂದು ಪ್ರಸ್ತಾವನೆ ಸಲ್ಲಿಸಿತ್ತು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಕೈಗಾರಿಕೆ ಹಾಗೂ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿದ್ದರು. ರಾಜ್ಯದ ವಿಮಾನನಿಲ್ದಾಣಗಳ ಅಭಿವೃದ್ಧಿ ಬಗ್ಗೆ ಚರ್ಚಿಸಿದ್ದಾರೆ.

ಭಾರತೀಯ ಸೇನೆಯಲ್ಲಿ 52,000 ಸೈನಿಕರ ಕೊರತೆಭಾರತೀಯ ಸೇನೆಯಲ್ಲಿ 52,000 ಸೈನಿಕರ ಕೊರತೆ

ಸಚಿವರ ಭೇಟಿಯ ವೇಳೆ ಬೆಂಗಳೂರಿನ ಯಲಹಂಕದಲ್ಲಿರುವ ವಾಯುಪಡೆ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರಿಗೆ ಸ್ಥಳಾಂತರ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ವಾಯುಪಡೆಗೆ ಇನ್ನಷ್ಟು ಶಕ್ತಿ: ಜಿಸ್ಯಾಟ್- 7ಎ ಉಡಾವಣೆ ಯಶಸ್ವಿವಾಯುಪಡೆಗೆ ಇನ್ನಷ್ಟು ಶಕ್ತಿ: ಜಿಸ್ಯಾಟ್- 7ಎ ಉಡಾವಣೆ ಯಶಸ್ವಿ

Yelahanka helicopter training center will shift to Mysuru

ವಿಮಾನ ನಿಲ್ದಾಣ ಪ್ರಾಧಿಕಾರದ ಸ್ವಾಧೀನದಲ್ಲಿ ಮೈಸೂರು ವಿಮಾನ ನಿಲ್ದಾಣವಿದೆ. ವಾಯುಪಡೆಗೆ ಅದನ್ನು ಸ್ಥಳಾಂತರ ಮಾಡಿ ಹೆಲಿಕಾಪ್ಟರ್ ತರಬೇತಿ ಕಾರ್ಯಕ್ಕೆ ಬಳಸಿಕೊಂಡು ಅಭಿವೃದ್ಧಿ ಪಡಿಸುವಂತೆ ಪ್ರಾಧಿಕಾರಕ್ಕೆ ಸೂಚಿಸಬೇಕು ಎಂದು ಕರ್ನಾಟಕ ಸರ್ಕಾರ ಮನವಿ ಮಾಡಿದೆ.

ಭಾರತದ ವಾಯು ಸೇನೆಗೆ ಇನ್ನು 'ನಿರ್ಭಯ'ಭಾರತದ ವಾಯು ಸೇನೆಗೆ ಇನ್ನು 'ನಿರ್ಭಯ'

ಶ್ರೀನಗರ, ಪುಣೆ, ಚಂಡೀಗಡ ಮಾದರಿಯಲ್ಲಿ ಮೈಸೂರು ವಿಮಾನ ನಿಲ್ದಾಣವನ್ನು ತನ್ನದೇ ವೆಚ್ಚದಲ್ಲಿ ಅಭಿವೃದ್ಧಿ ಮಾಡುವುದು. ನಾಗರಿಕರ ಹಾಗೂ ಮಿಲಿಟರಿ ಬಳಕೆಗೆ ಅಗತ್ಯವಿರುವ ಸೌಕರ್ಯಗಳನ್ನು ಕಲ್ಪಿಸಲು ವಾಯುಪಡೆಯು ಒಪ್ಪಿಗೆ ನೀಡಿದೆ.

ಕರ್ನಾಟಕ ಸರ್ಕಾರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣವನ್ನುಅಭಿವೃದ್ಧಿ ಪಡಿಸಲಿದೆ. ಮೈಸೂರಿಗೆ ದೇಶದ ವಿವಿಧ ವಿಮಾನ ನಿಲ್ದಾಣಗಳಿಂದ ಸಂಪರ್ಕ ಕಲ್ಪಿಸಬೇಕು ಎಂಬುದು ರಾಜ್ಯ ಸರ್ಕಾರದ ಆಶಯವಾಗಿದೆ.

English summary
Karnataka government approved to shift Helicopter training center Yelahanka, Bengaluru to Mysuru. Indian air force submitted proposal to shift training center to Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X