Shivasharanappa Gowda: ಕರ್ನಾಟಕದ ಹಿರಿಯ ರಾಜಕಾರಣಿ ನಿಧನ
ಕೊಪ್ಪಳ, ನವೆಂಬರ್ 25: ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ತುಮಕೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದ್ದಾರೆ.
ರೈತರ ಪರ ಧ್ವನಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಮಾಜಿ ಶಾಸಹ ಹಾಗೂ ಹಿರಿಯ ನಾಯಕರಾದ ಶಿವಶರಣಪ್ಪಗೌಡ ಅವರು 1999ರಿಂದ 2004ರ ವರೆಗೂ ಯಲಬುರ್ಗಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ನಾಲ್ಕು ಜನ ಪುತ್ರರು ಮತ್ತು ಪತ್ನಿಯನ್ನು ಅಗಲಿದ್ದಾರೆ. ಶಿವಶರಣಪ್ಪ ಗೌಡ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಸ್ವಗ್ರಾಮ ಹುಣಿಸ್ಯಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಯಲಬುರ್ಗಾ ಕ್ಷೇತ್ರದ ರಾಜಕೀಯದಲ್ಲಿ ದೀರ್ಘಕಾಲದ ಅನುಭವ ಹೊಂದಿದ್ದ ಶಿವಶರಣಪ್ಪಗೌಡರು, 1999ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇನ್ನೂ ಯಲಬುರ್ಗಾ ಪಟ್ಟಣದಲ್ಲಿರುವ ಶಿವಶರಣಪ್ಪಗೌಡ ಅವರ ನಿವಾಸದಲ್ಲಿ ಬುಧಾವರ ಸಂಜೆಯಿಂದ ಗುರುವಾರ ಬೆಳಗದಗಿನವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ. ನಂತರ ಮಾಜಿ ಶಾಸಕ ಶಿವಶರಣಪ್ಪಗೌಡ ಅವರ ಸ್ವಗ್ರಾಮ ಯಲಬುರ್ಗಾ ಹುಣಿಸ್ಯಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನೂ ಮಾಜಿ ಶಾಸಕ ಶಿವಶರಣಪ್ಪಗೌಡ ಅವರು ಶಾಸಕರಾಗುವ ಮೊದಲು ತಾಲೂಕು ಬೋರ್ಡ್ ಅಧ್ಯಕ್ಷರಾಗಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿಯೂ ಶಿವಶರಣಪ್ಪಗೌಡರು ಕಾರ್ಯ ನಿರ್ವಹಿಸಿದ್ದರು. 2004ರ ವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದ ಇವರು ಆ ಕಾಲದಲ್ಲಿ ಕೊಪ್ಪಳ ಜಿಲ್ಲೆಯಲ್ಲೇ ಜನಪ್ರಿಯ ಶಾಸಕರಾಗಿದ್ದರು. ರೈತರ ಸಮಸ್ಯೆಗಳಿಗೆ ಧ್ವನಿಯಾಗಿದ್ದಲ್ಲದೆ, ಮೂಲ ಸೌಕರ್ಯಗಳ ಅಭಿವೃದ್ಧಿಗೂ ವಿಶೇಷ ಆಸಕ್ತಿ ನೀಡಿದ್ದರು. ಇನ್ನೂ ಹಿರಿಯ ನಾಯಕ ಶಿವಶರಣಪ್ಪಗೌಡ ಅವರ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಸಹ ಸಂತಾಪ ಸೂಚಿಸಿದ್ದಾರೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications