Heavy Rain: ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ; ಹಳದಿ ಎಚ್ಚರಿಕೆ ಕೊಟ್ಟ ಐಎಂಡಿ

ರಾಜ್ಯದಲ್ಲಿ ಮತ್ತೆ ಹಿಂಗಾರು ಮಳೆ ಅಬ್ಬರ ಶುರುವಾಗಿದೆ. ಅಕ್ಟೋಬರ್ ಮಧ್ಯಭಾಗದಲ್ಲಿ ಅಬ್ಬರಿಸಿದ್ದ ಮಳೆಯಿಂದಾಗಿ ಸಾಕಷ್ಟು ತೊಂದರೆಗಳಾಗಿತ್ತು. ನದಿ, ಹಳ್ಳಗಳ ನೀರು ಹೊಲ, ತೋಟಗಳಿಗೆ ನುಗ್ಗಿದ್ದರಿಂದ ಬೆಳೆ ಹಾನಿಯಿಂದ ರೈತರು ಸಂಕಷ್ಟ ಅನುಭವಿಸಿದ್ದರು. ಬೆಂಗಳೂರಿನಲ್ಲಿ ಕೂಡ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಸಾಕಷ್ಟು ಸಮಸ್ಯೆಗಳಾಗಿತ್ತು. ಇದೀಗ ಹಲವು ದಿನ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಚುರುಕಾಗುವ ಸೂಚನೆ ಸಿಕ್ಕಿದೆ.

ನವೆಂಬರ್ 1 ಮತ್ತು 2 ರಂದು ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Yellow Alert given to these districts of karnataka on November 1st

ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಇಂದು (ಶುಕ್ರವಾರ) ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದ್ದು ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು ಹಳದಿ ಎಚ್ಚರಿಕೆ ಘೋಷಣೆ ಮಾಡಲಾಗಿದೆ.

ಉಳಿದಂತೆ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಕೂಡ ಮಳೆ

ರಾಜಧಾನಿ ಬೆಂಗಳೂರು ನಗರದಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶದಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ಕೂಡ ನಗರದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.

ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ಗ್ರಾಮದಲ್ಲಿ 131.5 ಮಿ.ಮೀ ಮಳೆಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಾಡ್ಯದಲ್ಲಿ 128 ಮಿ.ಮೀ, ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಸೋಮನಹಳ್ಳಿಯಲ್ಲಿ 123.5 ಮಿ.ಮೀ ಮಳೆಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಪ್ರದೇಶದಲ್ಲಿ 83 ಮಿ.ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮೇಲಿನ ಇಡಗುಂಜಿಯಲ್ಲಿ 61.5 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+