Karnataka Rain Alert : ಬಂಗಾಳಕೊಲ್ಲಿಯಲ್ಲಿ ಮತ್ತೆ ಚಂಡಮಾರುತ : ರಾಜ್ಯದ ಈ 10 ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಡಿಸೆಂಬರ್‌ 11: ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯದಲ್ಲಿಯೂ ಫೆಂಗಲ್‌ ಚಂಡಮಾರುತದ ಪರಿಣಾಯದಿಂದಾಗಿ ಜನತೆ ಸಂಕಷ್ಟಕ್ಕೆ ಸಿಲುಕಿದ್ದರು. ಒಂದೇ ಒಂದು ಚಂಡಮಾರುತದಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಹಲವರು ಅವಂತರ ಸೃಷ್ಟಿಯಾಗಿತ್ತು. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸಲಿದ್ದು,ಜನಯ ಭಯ ಬೀತರಾಗಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸಲಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ನಾಳೆ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Yellow Alert Sounded In 10 Districts Of State As Cyclone Hits Bay Of Bengal Again

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ ಕೆಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಕೋಲಾರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದು ಮತ್ತು ನಾಳೆ ಬೆಂಗಳೂರು ನಗರ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ, ಕೋಲಾರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ 5 ದಿನಗಳ ಮಳೆಯ ಮುನ್ಸೂಚನೆಯನ್ನ IMD ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪೂರ್ವ ಹಿಂದೂ ಮಹಾಸಾಗರ ವಲಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ
ರಾಜ್ಯದ ದಕ್ಷಿಣ ಒಳನಾಡು ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಹಾಗೂ ಡಿಸೆಂಬರ್‌ 12 ಹಾಗೂ 13 ರಂದು ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಕೆಲವೆಡೆ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಇನ್ನುಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಕೆಲವೆಡೆ ದಟ್ಟ ಮಂಜು ಮುಸುಕಿನ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+