ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ?' ಬಿಜೆಪಿಗೆ ಎಚ್‌ಡಿಕೆ ಪ್ರಶ್ನೆ

|
Google Oneindia Kannada News

ಬೆಂಗಳೂರು, ಜುಲೈ 6: PSI ಹಗರಣದ ವಿಚಾರದಲ್ಲಿ ಸರಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಈಗ ಮತ್ತೆ ಬಿಜೆಪಿ ನಾಯಕರು ಮತ್ತು ಅಲ್ಲಿನ ಕುಟುಂಬ ರಾಜಕಾರಣದ ಹೆಸರನ್ನು ಬಿಡಿಸಿ ಬಿಡಿಸಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ತಾವು ಮುಖ್ಯಮಂತ್ರಿಯಾಗಿದ್ದು ಲಕ್ಕಿಡಿಪ್ ಮೂಲಕ ಎಂದು ಹೇಳಿದ್ದ ಬಿಜೆಪಿ ಮುಖಂಡರಿಗೂ ತಿರುಗೇಟು ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರೂ ಅದೇ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇಡೀ PSI ಹಗರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿಇಡೀ PSI ಹಗರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

"ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ ಎಂಬುದನ್ನು ಮರೆತರೆ ಹೇಗೆ"ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

"ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ.

 ಐಎಎಸ್, ಐಪಿಎಸ್ ಅಧಿಕಾರಿಗಳ ಬಂಧನದ ಹಿಂದೆ ಒಂದೇ ಕಾರಣ? ಐಎಎಸ್, ಐಪಿಎಸ್ ಅಧಿಕಾರಿಗಳ ಬಂಧನದ ಹಿಂದೆ ಒಂದೇ ಕಾರಣ?

 ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ

ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ

"ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ?". "ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!! ʼಮಿಷನ್‌ ದಕ್ಷಿಣ್‌ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

 ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ

ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ

"ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿ ಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ವಿವರಣೆ

ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ,
1.ಯಡಿಯೂರಪ್ಪ & ಸನ್ಸ್‌
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
5.ಅರವಿಂದ ಲಿಂಬಾವಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌.
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌

 ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ ಎನ್ನುವುದೂ ಗೊತ್ತಿದೆ

ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ ಎನ್ನುವುದೂ ಗೊತ್ತಿದೆ

"ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬ ವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ?

ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ 'ಪರಿವಾರಕೋಟಿ'ಯನ್ನೇ ಬರೆಯಬಹುದು"ಎಂದು ಎಚ್.ಡಿ.ಕುಮಾರಸ್ವಾಮಿ, ಬಿಜೆಪಿಗೆ ಟಾಂ ನೀಡಿದೆ.

English summary
Yes, I Am Lucky Dip CM, Former CM H D Kumaraswamy Reply to BJP Leaders. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X