ಯಶಸ್ವಿನಿ ಯೋಜನೆಗೆ ಮರುಜೀವ: ಅ.2 ರಂದು ಉದ್ಘಾಟನೆ
ಬೆಂಗಳೂರು, ಮೇ 06: ಯಶಸ್ವಿನಿ ಯೋಜನೆಗೆ ಮರುಜೀವ ನೀಡಿರುವ ರಾಜ್ಯ ಸರ್ಕಾರ ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ನಿರ್ಧರಿಸಿದೆ.
2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹಕಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಯಶಸ್ವಿನಿ ಯೋಜನೆಗೆ ಮರು ಚಾಲನೆ ನೀಡುವ ದಿನಾಂಕವನ್ನು ನಿಗದಿಪಡಿಸಿದ್ದಾರೆ.
ಯಶಸ್ವಿನಿ ಯೋಜನೆ ಹಾಗೂ ಎ.ಬಿ.ಆರ್. ಕೆ ಡ್ಯೂಪ್ಲಿಕೇಷನ್ ಆಗಬಾರದು. ಎ.ಬಿ.ಆರ್.ಕೆ ಅರ್ಜಿಗಳನ್ನು ತಿರಸ್ಕರಿಸಕೂಡದು. ತಜ್ಞರಿಂದ ಅಧ್ಯಯನ ಕೈಗೊಂಡು ತೀರ್ಮಾನ ಕೈಗೊಳ್ಳುವುದು ಎಂದು ಸೂಚಿಸಿದರು.

ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸಂಬಂಧಿಸಿದಂತೆ ಆರ್.ಬಿ.ಐ ನಿಯಮಾವಳಿಗಳ ಅಗತ್ಯಗಳಿಗೆ ಅನುಸಾರವಾಗಿ ದಾಖಲೆಗಳನ್ನು ಸಲ್ಲಿಸುವುದು. ಈ ತಿಂಗಳೊಳಗೆ ಕೆಲಸ ಪೂರ್ಣಗೊಳ್ಳಬೇಕು. ಗೋಕಾಕ್, ಬೀದರ್, ಹುಬ್ಬಳ್ಳಿಯಲ್ಲಿ ಸಹಕಾರಿ ವಲಯದ ಆಸ್ಪತ್ರೆಗಳನ್ನು ಬಲಪಡಿಸಲು ಆಸ್ಪತ್ರೆಗಳಿಗೆ ನೆರವು ಒದಗಿಸಲು ಕ್ರಮ ವಹಿಸಬೇಕು. ಅಲ್ಲದೆ, ಸಾಲಮನ್ನಾ ಸಂಬಂಧ 50 ವರ್ಷಗಳ ಹಳೆಯ ಸೊಸೈಟಿಗಳಿಗೆ ನೆರವು ಒದಗಿಸುವ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು.
ಜುಲೈ ಒಳಗೆ ಫಲಾನುಭವಿಗಳ ಆಯ್ಕೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಮುಖ್ಯಮಂತ್ರಿ ,ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು, ಮೇ 5- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಯೋಜನೆಗಳಿಗೆ ಜುಲೈ ತಿಂಗಳೊಳಗಾಗಿ ಫಲಾನುಭವಿಗಳ ಆಯ್ಕೆಯನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಮುಖ್ಯಾಂಶಗಳು:
1. ಇಲಾಖೆಯ 50 ಕನಕದಾಸ ವಿದ್ಯಾರ್ಥಿನಿಲಯಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಾಣಗಳ ಕಾರ್ಯವನ್ನು ಪ್ರಾರಂಭಿಸುವುದು
2. ಈ ವರ್ಷ ಜುಲೈ ಒಳಗೆ ಫಲಾನುಭವಿಗಳ ಆಯ್ಕೆ ಮುಗಿಯಬೇಕು

3. ವಿದ್ಯಾರ್ಥಿನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಒದಗಿಸಲು ಮಾಸಿಕ ಭೋಜನಾ ವೆಚ್ಚವನ್ನು ಹೆಚ್ಚಿಸಲಾಗಿದೆ.
4. ನಾರಾಯಣ ಗುರು ವಸತಿ ಶಾಲೆ ಸ್ಥಾಪನೆಗೆ ಸ್ಥಳ ನಿಗದಿಯಾಗಿದೆ. ಮೊದಲ ಹಂತದಲ್ಲಿ 5 ಕೋಟಿ ರೂ.ಗಳಿಗೆ ಶಾಲೆಯನ್ನು ಪ್ರಾರಂಭ ಮಾಡುವುದು.
5. ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ಅನುದಾನ ಲಭ್ಯವಿದ್ದು, ಇದನ್ನು 100 ಕೋಟಿ ನೀಡುವುದು, ವೀರಶೈವ ಅಭಿವೃದ್ಧಿ ನಿಗಮಕ್ಕೆ ಲಭ್ಯವಿರುವ 100 ಕೋಟಿ ರೂ.ಗಳು ವೆಚ್ಚವಾದ ನಂತರ ಹೆಚ್ಚುವರಿ 100 ಕೋಟಿ ಗಳನ್ನು ಒದಗಿಸುವುದು. ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ತುರ್ತಾಗಿ ಸಭೆ ಕರೆಯುವಂತೆ ಸೂಚಿಸಿದರು.
6. ದೇವರಾಜ ಅರಸ್ ಹಿಂದುಳಿದ ವರ್ಗಗಳ ಹಿಂದುಳಿದ ನಿಗಮದ ಮೂಲಕ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಶೇ 85 ರಷ್ಟು ಪ್ರವರ್ಗ 1 ಮತ್ತು 2 ಎ ಗೆ ವರ್ಗೀಕರಿಸಿ ಬರುವ ಸಮುದಾಯಗಳ ಪಟ್ಟಿಯನ್ನು ಕಡತದಲ್ಲಿ ಸಲ್ಲಿಸುವಂತೆ ತಿಳಿಸಿದರು.
7. ಕೊಡವ ಜನಾಂಗದ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ನೀಡುವುದು
8. ಅಮೃತ ಮುನ್ನಡೆ ನೂತನ ಯೋಜನೆಗೆ ಮುಂದಿನ ವಾರದಿಂದ ಅರ್ಜಿ ಕರೆಯುವುದು . ಪದವಿ ಕೋರ್ಸುಗಳ ವಿದ್ಯಾರ್ಥಿಗಳಿಗೆ ಸೀಮಿತಗೊಳಿಸುವುದು.
9. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಇಲಾಖೆಗಳಿಂದ 50,000 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕುರಿತು ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ, ಉನ್ನತ ಶಿಕ್ಷಣ ಇಲಾಖೆಗಳ ಸಭೆ ಕರೆದು, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಸಂಖ್ಯೆಯನ್ನು ನಿಗದಿಪಡಿಸುವಂತೆ ಸೂಚಿಸಿದರು.
-
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Vastu Plants: ಮನೆಯಲ್ಲೇ ಐಶ್ವರ್ಯ ಹೆಚ್ಚಿಸಬೇಕಾ? ಈ 5 ಸಸ್ಯಗಳನ್ನು ಬೆಳೆಸಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications