Yeshasvini scheme: ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಸಿ ಸಿಹಿ ಸುದ್ದಿ

ಬೆಂಗಳೂರು, ಜೂನ್. 07: ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿಯಲ್ಲಿ ಬರುವ 200 ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ಆಸ್ಪತ್ರೆಗಳು ಕೂಡ ಹೆಚ್ಚಾಗಿದ್ದು, ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಲಾಭವಾಗಲಿದೆ.

2003ರಲ್ಲಿ ಈ ಯೋಜನೆ ಆರಂಭಿಸಲಾಯಿತು. ಕಾರನಾಂತರಗಳಿಂದ 2018ರಲ್ಲಿ ಸ್ಥಗಿತವಾಗಿತ್ತು. ಬಳಿಕ ರಾಜ್ಯದ ಸರ್ಕಾರವು 2023ರ ಜನವರಿಯಲ್ಲಿ ಸಹಕಾರ ಸಂಘದ ಅಡಿಯಲ್ಲಿ ಮರುಜಾರಿಗೊಳಿಸಿತ್ತು. 2023-24ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಮಾರ್ಚ್‌ 31ರ ವರೆಗೆ ವಿಸ್ತರಣೆಯಾಗಿತ್ತು. ಇದರ ಬೆನ್ನಲ್ಲೇ, 200 ಕ್ಕೂ ಹೆಚ್ಚು ಚಿಕಿತ್ಸಾ ದರವನ್ನು ಪರಿಷ್ಕರಣೆ ಮಾಡಲಾಗಿದೆ.

Yeshasvini Scheme Rate Revision Hospital Network Expansion

ಯಶಸ್ವಿನಿ ಯೋಜನೆ: ಹೆಚ್ಚಾಯ್ತು ಖಾಸಗಿ ಆಸ್ಪತ್ರೆಗಳ ಸಂಖ್ಯೆ

ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು. ಇದರಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವುದು ಕಷ್ಟವಾಗಿತ್ತು. ಇದನ್ನು ಅರಿತ ರಾಜ್ಯ ಸರ್ಕಾರ ಯೋಜನೆಯ ಚಿಕಿತ್ಸಾ ದರವನ್ನು 300% ವರೆಗೂ ಹೆಚ್ಚಳ ಮಾಡಿದೆ. ಪರಿಣಾಮ 370 ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ 600ರ ಗಡಿ ದಾಟಿದೆ ಈ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ.

ಯಶಸ್ವಿನಿ ಯೋಜನೆಯಡಿ 2,128 ಚಿಕಿತ್ಸೆಗಳು ಲಭ್ಯವಾಗಲಿದ್ದು, ಈ ಪೈಕಿ 206 ಚಿಕಿತ್ಸೆಗಳ ದರ ಪರಿಷ್ಕರಣೆ ಮಾಡಲಾಗಿದೆ. ಈ ಮೊದಲು ಯೋಜನೆಯಡಿ 1,650 ಚಿಕಿತ್ಸೆಗಳನ್ನು ಒದಗಿಸಲಾಗುತ್ತಿತ್ತು. ಯೋಜನೆಯಡಿ ಒಟ್ಟು 637 ನೆಟ್‌ವರ್ಕ್‌ ಆಸ್ಪತ್ರೆಗಳು ನೋಂದಣಿಯಾಗಿದ್ದು, ಇದರಲ್ಲಿ 602 ಖಾಸಗಿ ಆಸ್ಪತ್ರೆಗಳು ನೋಂದಣಿ ಮಾಡಿಕೊಂಡಿವೆ.

Yeshasvini Scheme Rate Revision Hospital Network Expansion

ಗರಿಷ್ಠ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ

ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷ ರೂಪಾಯಿ ವರೆಗೆ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್‌ವರ್ಕ್‌ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದು. ಇದರಿಂದಾಗಿ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ಸುಲಭವಾಗಿ ದೊರೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+