Yettinahole Project update: ಎತ್ತಿನಹೊಳೆ ಯೂಜನೆ ಪೂರ್ಣದ ಗಡುವಿನ ಅಪ್ಡೇಟ್ ಕೊಟ್ಟ ಜಿ.ಪರಮೇಶ್ವರ
ಬೆಂಗಳೂರು, ಡಿಸೆಂಬರ್ 18: ನೇತ್ರಾವತಿ ನದಿ ತಿರುವು ಯೋಜನೆಯಾಗಿರುವ 'ಎತ್ತಿನಹೊಳೆ ಯೋಜನೆ' (Yettinahole Project) ದೊಡ್ಡಬಳ್ಳಾಪುರ ಸೇರಿದಂತೆ ಈ ಭಾಗದ ಬಯಲುಸೀಮೆಗೆ ನೀರು ಒದಗಿಸುವ ಮಹತ್ವದ ಯೋಜನೆ ಇದಾಗಿದ್ದು, ಕೆಲವು ವರ್ಷಗಳಿಂದ ಸ್ಥಗಿಗೊಂಡಿತ್ತು. ಇದೀಗ ಮರುಚಾಲನೆ ಜೊತೆಗೆ ಪೂರ್ಣಗೊಳ್ಳುವ ಗಡುವು ಕುರಿತು ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.
ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಬೆಳಗ್ಗೆ ಎತ್ತಿನ ಹೊಳೆ ಯೋಜನೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಎತ್ತಿನ ಹೊಳೆ ಯೋಜನೆಯು ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುಧಾನವನ್ನು ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು.
ಸದ್ಯ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂಪಾಯಿ ಆಗಲಿದೆ ಎಂದು ಅಂದಾಜಿಸಲಾಗಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಅವರು ವಿವರಿಸಿದರು.
ವಾಟರ್ ಸ್ಟೋರೆಜ್‌ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ. ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗಧಿಪಡಿಸಲಾಗಿದೆ. ಎಲ್ಲ ರೈತರಿಗೂ ಒಂದೇ ರೀತಿಯ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಏಜೆನ್ಸಿ (NIA) ಕಚೇರಿ ಬೆಂಗಳೂರಿನಲ್ಲಿ ಆಗಿದೆ. ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಆಧರಿಸಿ ದಾಳಿ ಮಾಡುತ್ತಿರುತ್ತಾರೆ. ಈ ಬಗ್ಗೆ ಎನ್‌ಐಎ ತಂಡವು ಕೆಲವು ಸಲ ರಾಜ್ಯ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಾರೆ. ಅವರ ಕರ್ತವ್ಯ ಅವರು ಮಾಡಲಿದ್ದಾರೆ ಎಂದು ಭವಿಷ್ಯದ ಅಕ್ರಮ, ಅಪರಾಧ ಚಟುವಟಿಕೆಗಳ ಕಡಿವಾಣ ಕುರಿತು ಹೇಳಿದರು.
ಇದೇ ವೇಳೆ ತಮ್ಮ ನಿವಾಸದ ಮುಂದೆ ಆಗಮಿಸಿದ್ದ ಸಾರ್ವಜನಿಕರ ಕುಂದು ಕೊರತೆಗಳನ್ನು ಗೃಹ ಸಚಿವ ಜಿ.ಪರಮೇಶ್ವರ ಅವರು ಆಲಿಸಿದರು. ತಮ್ಮ ಬಡಾವಣೆ, ಊರಿನಲ್ಲಿನ ಸಮಸ್ಯೆಗಳು, ಮುಗಿಯದ ವ್ಯಾಜ್ಯ ಸೇರಿದಂತೆ ಅನೇಕ ಕುಂದು ಕೊರತೆಗಳನ್ನು ಸಾರ್ವಜನಿಕರು ಸಚಿವರ ಹೇಳಿಕೊಂಡು ಮನವಿ ಪತ್ರ ನೀಡಿದರು. ಈ ವೇಳೆ ಹತ್ತಾರು ಮಂದಿ ಬೆಳಗ್ಗೆಯಿಂದಲೇ ಸಚಿವರ ಮನೆ ಬಳಿ ಆಗಮಿಸಿದ್ದು ಕಂಡು ಬಂತು.












Click it and Unblock the Notifications