ಯೋಗೇಶ್ ಗೌಡ ಪ್ರಕರಣ: ಏ.15ಕ್ಕೆ ಅಂತಿಮ ತೀರ್ಪು, ವಿನಯ್ ಕುಲಕರ್ಣಿ ಭವಿಷ್ಯ ಅಂದು ನಿರ್ಧಾರ
ಬೆಂಗಳೂರು: ಹಾಲಿ ಶಾಸಕ ಮತ್ತು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸಂಬಂಧಿಸಿದ ಧಾರವಾಡದ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ನ್ಯಾಯಾಲಯ ವಿಚಾರಣೆ ಪೂರ್ಣಗೊಂಡಿದೆ. ಇಂದು ಗುರುವಾರ (ಏ.9) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಆದೇಶವನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ. ಅಂದು ತೀರ್ಪು ಹೊರ ಬೀಳಲಿದೆ.
ಧಾರವಾಡದ ಜಿಲ್ಲಾ ಪಂಚಯಾತಿ ಸದಸ್ಯ ಯೋಗೇಡೌ ಗೌಡ ಅವರನ್ನು ಜಿಮ್‌ನಲ್ಲಿ ಹತ್ಯೆ ಮಾಡಲಾಗಿತ್ತು. ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಪ್ರಕರಣ ಆರೋಪಿಗಳಾಗಿದ್ದರು. ಇದೀಗ ಪ್ರಕರಣ ಸುದೀರ್ಘ 08 ವರ್ಷಗಳ ವಿಚಾರಣೆ ಪೂರ್ಣಗೊಂಡಿದೆ. ಇಂದು ಅಂತಿಮ ತೀರ್ಪು ನೀಡುವುದಾಗಿ ಹೇಳಿದ್ದರಿಂದ ಸಾಕಷ್ಟು ಕುತೂಹಲ ಉಂಟಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಪ್ರಕರಣದ ತೀರ್ಪು ಪ್ರಕಟ ದಿನಾಂಕವನ್ನು ಮುಂದೂಡಿದೆ. ಏಪ್ರಿಲ್ 15ರಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲ ಆರೋಪಿಗಳ ಭವಿಷ್ಯ ಗೊತ್ತಾಗಲಿದೆ.

ಇಂದು ಅಂತಿಮ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಪ್ರಯುಕ್ತ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲ ಆರೋಪಿಗಳು ಕೋರ್ಟ್‌ಗೆ ಖುದ್ದು ಹಾಜರಾಗಿದ್ದರು. ಕೊರ್ಟ್‌ಗೆ ತೆರಳುವ ಮುನ್ನ, ವಿನಯ್ ಕುಲಕರ್ಣಿ, ಸತ್ಯಕ್ಕೆ ಯಾವತ್ತಿಗೂ ಜಯ ಸಿಗಲಿದೆ. ನನಗೆ ದೇವರ ಮೇಲೆ ನಂಬಿಕೆ ಇದೆ. ನ್ಯಾಯಾಲಯ ವ್ಯವಸ್ಥೆ ಮೇಲೆ ನನಗೆ ನಂಬಿಕೆ ಇದೆ. ಈ ಹಂತದಲ್ಲಿ ಮಾತನಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದರು.
ಪ್ರಕರಣದ ಹಿನ್ನೆಲೆ ಏನು?
2016 ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯರ ಯೋಗೇಶ್ ಗೌಡ ಅವರನ್ನು ಜಿಮ್ ನಲ್ಲಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಧಾರವಾಡ ಉಪನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಆರು ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆಸ್ತಿ ವಿವಾದ ಹಿನ್ನೆಲೆ ಯೋಗೇಶ್ ಗೌಡ ಅವರ ಹತ್ಯೆ ನಡೆದಿತ್ತು ಎನ್ನಲಾಗಿದೆ. 2019ರಂದು ಯೋಗೇಶ್ ಗೌಡ ಅವರ ಕುಟುಂಬಸ್ಥರ ಒತ್ತಾಯದ ಮೇರೆಗೆ ಸಿಬಿಐ ತನಿಖೆಗೆ ವಹಿಸಲಾಗಿತ್ತು.
ಪ್ರಕರಣದಲ್ಲಿ ಇಂದಿನ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪಾತ್ರ ಇದೆ ಎಂದು ಆರೋಪ ಕೇಳಿ ಬರುತ್ತಿದ್ದಂತೆ 2020ರಲ್ಲಿ ಬಂಧಿಸಲಾಗಿತ್ತು. ಪ್ರಕರಣ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ದೀರ್ಘ ವಿಚಾರಣೆ ನಡೆದಿದ್ದು, ವಿನಯ್ ಕುಲಕರ್ಣಿ ಜೈಲುವಾಸ ಅನುಭವಿಸಿದರು. ಬಳಿಕ ಜಾಮೀನಿನ ಮೇಲೆ ಹೊರ ಬಂದರು. ಆದರೆ ಅವರಿಗೆ ತಮ್ಮ ಕ್ಷೇತ್ರಕ್ಕೆ ತೆರಳದಂತೆ ಕೋರ್ಟ್ ಷರತ್ತು ವಿಧಿಸಿತ್ತು. ಬಳಿಕ ಬೆಳಗಾವಿ ಭಾಗದಲ್ಲಿ ಇದ್ದುಕೊಂಡೇ ಅವರು ಕಳೆದ ಬಾರಿ ಚುನಾವಣೆಯಲ್ಲಿ ಆನ್‌ಲೈನ್ ಪ್ರಚಾರ ಮಾಡಿ ಮತ್ತೆ ಶಾಸಕರಾಗಿ ಆಯ್ಕೆ ಆದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ವರ್ಷ ವಿಚಾರಣೆ ನಡೆದಿದೆ. ಏಪ್ರಿಲ್ 15ರಂದು ಪ್ರಕಟವಾಗಲಿರುವ ಅಂತಿಮ ತೀರ್ಪು ವಿನಯ್ ಕುಲಕರ್ಣಿ ಅವರ ವೈಯಕ್ತಿಕ ಹಾಗೂ ರಾಜಕೀಯ ಜೀವನವನ್ನು ನಿರ್ಧರಿಸಲಿದೆ.
-
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ












Click it and Unblock the Notifications