Get Updates
Get notified of breaking news, exclusive insights, and must-see stories!

ಯೋಗೇಶ್ ಗೌಡ ಕೊಲೆ: ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿ ವಿರುದ್ಧದ ಪ್ರಕರಣ ರದ್ದಿಗೆ ಕೋರ್ಟ್ ನಕಾರ

ಬೆಂಗಳೂರು, ಅಕ್ಟೋಬರ್ 19; ಧಾರವಾಡ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಬಿಜೆಪಿ ಮುಖಂಡರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮಶೇಖರ್ ನ್ಯಾಮಗೌಡರ್ ವಿರುದ್ಧದ ಪ್ರಕರಣ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಅಲ್ಲದೆ, ಸರ್ಕಾರಿ ಅಧಿಕಾರಿಯಾಗಿದ್ದು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕೊಲೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಪ್ರಸ್ತುತ ತುಮಕೂರು ಜಿಲ್ಲೆಯ ತಿಪಟೂರಿನ ಎಪಿಎಂಸಿ ಕಾರ್ಯದರ್ಶಿಯಾಗಿರುವ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

Yogesh Gowda Murder HC Refused To Quash Case Against PS Of Former Minister Vinay Kulakarni

ಪ್ರಕರಣದಲ್ಲಿ ಅರ್ಜಿದಾರರು ಸಾರ್ವಜನಿಕ ಸೇವಕನಾಗಿದ್ದು, ತನ್ನ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾನೆ. ಆದ್ದರಿಂದ ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಕರ್ತವ್ಯಗಳು ಅಧಿಕೃತ ಎಂಬ ಅಂಶ ಕಂಡು ಬಂದಲ್ಲಿ ಅವರನ್ನು ವಿಚಾರಣೆಯಿಂದ ಕೈಬಿಡಬಹುದು. ಜತೆಗೆ, ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ವಿಚಾರಣೆ ಮುಂದುವರೆಸಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಮೇಲ್ನೋಟಕ್ಕೆ ಸಾಕ್ಷ್ಯ ಲಭ್ಯ: ನ್ಯಾಯಪೀಠ ಪ್ರಕರಣ ಸಂಬಂಧ ಸಿಬಿಐ ಸಲ್ಲಿಸಿದ್ದ ಆರೋಪ ಪಟ್ಟಿ ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನಂತರ ಈ ಆದೇಶ ಮಾಡಿದೆ. ಮೇಲ್ನೋಟಕ್ಕೆ ಆರೋಪಿಯ ವಿರುದ್ಧ ಸಾಕ್ಷ್ಯಾಧಾರಗಳು ಲಭ್ಯವಿದೆ. ಜತೆಗೆ, ಯೋಗೇಶ್ ಗೌಡ ಅವರ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳು ರೂಪಿಸಿರುವ ಸಂಚಿನ ಕುರಿತು ಅರ್ಜಿದಾರರಿಗೆ ಅರಿವಿತ್ತು ಎಂದು ವಿಶೇಷ ನ್ಯಾಯಾಲಯ ತಿಳಿಸಿದೆ.

ಜತೆಗೆ, ಶ್ರೀನಿವಾಸ ರೆಡ್ಡಿ ಮತ್ತು ರಾಕೇಶ್ ಶರ್ಮಾ ಮತ್ತಿತರರು ನಡುವಿನ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹೇಳಿರುವಂತೆ, ಸರ್ಕಾರಿ ನೌಕರರಿಗಿರುವ ರಕ್ಷಣೆಯನ್ನು ಕಾನೂನು ಬಾಹಿರ ಕೃತ್ಯಗಳಲ್ಲಿ ಬಳಕೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಸುಳ್ಳು ಪ್ರವಾಸ ಕಾರ್ಯಕ್ರಮವನ್ನು ಸಿದ್ದಪಡಿಸುವುದು ಯೋಗೇಶ್ ಗೌಡರ ಕೊಲೆಗೆ ಸಂಚು ರೂಪಿಸಿರುವ ಭಾಗವಾಗಿದೆ. ಜತೆಗೆ ಎಲ್ಲ ಕಾರ್ಯಗಳನ್ನು ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಅವರ ಸೂಚನೆಯಂತೆ ನಡೆದುಕೊಂಡಿದ್ದಾರೆ ಎಂಬುದು ತಿಳಿದು ಬಂದಿದ್ದು, ಅರ್ಜಿ ವಜಾಗೊಳಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅರ್ಜಿದಾರರ ಪರ ವಕೀಲರು, ತಮ್ಮ ವಿರುದ್ಧದ ಆರೋಪಗಳು ಸಚಿವಾಗಿದ್ದ ವಿನಯ್ ಕುಲಕರ್ಣಿ ಅವರ ಅಧಿಕೃತ ಕರ್ತವ್ಯದಲ್ಲಿದ್ದು, ನಿರ್ವಹಿಸಿರುವ ಕೆಲಸಗಳಾಗಿವೆ. ಆದರೆ, ಸರ್ಕಾರಿ ಅಧಿಕಾರಿಯಾಗಿರುವುದರಿಂದ ತಮ್ಮ ವಿರುದ್ಧ ಸಕ್ಷಮ ಪ್ರಾಧಿಕಾರ ಪ್ರಾಧಿಕಾರದ ಅನುಮತಿ ಪಡೆಯದ ವಿಚಾಣೆಗೆ ಪರಿಗಣಿಸಿದ್ದು, ಪ್ರಕರಣ ರದ್ದು ಮಾಡಬೇಕು ಎಂದು ಕೋರಿದ್ದರು

ಜತೆಗೆ, ಯೋಗೇಶ್‌ಗೌಡ ಅವರ ಕೊಲೆ ಸಂದರ್ಭದಲ್ಲಿ ಸಚಿವರು ದೆಹಲಿಯಲ್ಲಿದ್ದರೂ ಎಂಬುದಾಗಿ ಹೇಳಿಕೊಳ್ಳುವುದಕ್ಕಾಗಿ ಸಚಿವರ ಆಪ್ತ ಕಾರ್ಯದರ್ಶಿಯಾಗಿದ್ದ ನ್ಯಾಮಗೌಡ ಅವರು 2016ರ ಜೂನ್ 12ರಂದು ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಳ್ಳು ಪ್ರವಾಸ ಕಾರ್ಯಕ್ರಮವನ್ನು ಸೃಷ್ಟಿಸಿದ್ದರು. ಜತೆಗೆ ಅದೇ ದಿನ ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗುವುದಕ್ಕಾಗಿ ತೆರಳುತ್ತಿರುವುದಾಗಿ ವಿಮಾನ ಟಿಕೆಟ್‌ಗಳನ್ನು ಕಾಯ್ದಿರಿಸಿದ್ದರು ಎಂದು ಸಿಬಿಐ ಆರೋಪಿಸಿತ್ತು.

ಆದರೆ, ಸಭೆಗೆ ಸಂಬಂಧಿಸಿಂತೆ ಕೇಂದ್ರ ಸಚಿವರಿಗೆ ಯಾವುದೇ ಮನವಿಯನ್ನು ರವಾನಿಸಿರಲಿಲ್ಲ. ಜತೆಗೆ, ಅದೇ ಸಂದರ್ಭದಲ್ಲಿ ಕೇಂದ್ರ ಸಚಿವರು ರಾಷ್ಟ್ರ ಮಟ್ಟದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಅಲಹಾಬಾದ್‌ಗೆ ಭೇಟಿ ನೀಡಿದ್ದರು ಎಂದು ಸಿಬಿಐ ತನ್ನ ಆರೋಪ ಪಟ್ಟಿಯಲ್ಲಿ ತಿಳಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+