ಕರ್ನಾಟಕ ಚುನಾವಣೆ : ಯೋಗಿ ಆದಿತ್ಯನಾತ್ ಸ್ಟಾರ್ ಪ್ರಚಾರಕ

Posted By: Gururaj
Subscribe to Oneindia Kannada

ಬೆಂಗಳೂರು, ಜನವರಿ 01 : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರು. ರಾಜ್ಯದಲ್ಲಿ ಹಲವು ಸಮಾವೇಶ ಉದ್ದೇಶಿಸಿ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ.

ಬಿಜೆಪಿ ನಾಯಕರಿಗೆ ಅಮಿತ್ ಶಾ ಕೊಟ್ಟ ಸೂಚನೆಗಳು

ಗುಜರಾತ್ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ 35 ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದ್ದರು. ಕರ್ನಾಟಕದಲ್ಲಿಯೂ ಅವರನ್ನು ಕರೆಸಿ ಪ್ರಚಾರ ನಡೆಸಲು ಪಕ್ಷ ನಿರ್ಧರಿಸಿದೆ.

ಯೋಗಿ ಆದಿತ್ಯನಾಥ ಮಾತಿನ ಓಘಕ್ಕೆ ಉಘೇ ಎಂದ ಹುಬ್ಬಳ್ಳಿ ಮಂದಿ

ಪಕ್ಷ ಆಂತರಿಕ ಸಮೀಕ್ಷೆಯನ್ನು ನಡೆಸಿ ರಾಜ್ಯದ 224 ಕ್ಷೇತ್ರಗಳನ್ನು ಮೂರು ವಿಭಾಗಗಳಾಗಿ ವಿಂಗಡನೆ ಮಾಡಿದೆ. ಸುಲಭವಾಗಿ ಜಯಗಳಿಸಬಹುದು (ಎ), ಸ್ಪರ್ಧೆ ಇರುವ ಕ್ಷೇತ್ರ (ಬಿ), ಅತೀ ಕಷ್ಟದ ಕ್ಷೇತ್ರ (ಸಿ).

Yogi Adityanath

ಯೋಗಿ ಆದಿತ್ಯನಾಥ್ ಬಿ ಮತ್ತು ಸಿ ವಿಭಾಗಗಳಲ್ಲಿ ಬರುವ ಕ್ಷೇತ್ರಗಳಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ. ಮಾರ್ಚ್‌ ಮತ್ತು ಏಪ್ರಿಲ್‌ ತಿಂಗಳಿನಲ್ಲಿ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ.

ಯೋಗಿ ಮೂರುಸಾವಿರ ಮಠಕ್ಕೆ ಭೇಟಿ ನೀಡಿದ್ದು ಏಕೆ?

ಡಿಸೆಂಬರ್ 21ರಂದು ಯೋಗಿ ಆದಿತ್ಯನಾಥ್ ಹುಬ್ಬಳ್ಳಿಯಲ್ಲಿ ಪರಿವರ್ತನಾ ಯಾತ್ರೆ ಉದ್ದೇಶಿಸಿ ಭಾಷಣ ಮಾಡಿದ್ದರು. ಹಿಂದುತ್ವ ಅಜೆಂಡಾವನ್ನು ಜನರ ಮುಂದಿಟ್ಟು, ಟಿಪ್ಪು ಜಯಂತಿ ಆಚರಣೆ ಮಾಡುವ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎ ವಿಭಾಗದಲ್ಲಿ ಬರುವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಪ್ರಚಾರಕ್ಕೆ ಈಗಾಗಲೇ ಪಕ್ಷ ಯೋಜನೆ ತಯಾರಿಸುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Uttar Pradesh Chief Minister Yogi Adityanath star campaigner for Karnataka assembly elections 2018. He will address more than 10 rally in the state in the month of March and April. In the recent Gujarat elections he addressed 35 rally's.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ