ಯೋಗಿಯ ಉತ್ತರ ಪ್ರದೇಶ ಗೂಂಡಾ ರಾಜ್ಯ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು, ಅಕ್ಟೋಬರ್ 04; ಉತ್ತರ ಪ್ರದೇಶದ ಲಖಿಂಪುರದಲ್ಲಿ ಭಾನುವಾರ ನಡೆದ ಹಿಂಸಾಚಾರದ ಬಗ್ಗೆ ದೇಶವ್ಯಾಪಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳು ಘಟನೆ ಖಂಡಿಸುತ್ತಿವೆ. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಿವೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಸರಣಿ ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದಲ್ಲಿ ನಡೆದ ಹಿಂಸಾಚಾರ, ಬಳಿಕ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹ ಘಟನೆಯನ್ನು ಖಂಡಿಸಿದ್ದಾರೆ.

'ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು,‌ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದು‌ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು‌ ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು' ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

 Yogi Adityanath Uttar Pradesh Goonda Raj Tweets Siddaramaiah

'ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಬಿಜೆಪಿ ಅವರನ್ನು ಪೋಲಿಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದೆ. ಉತ್ತರಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ' ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಭಾನುವಾರ ಕೃಷಿ ಕಾಯ್ದೆ ವಿರೋಧಿಸಿ ಲಖಿಂಪುರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. ಈ ವಿಚಾರದ ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ.

ಈ ವಿಚಾರ ಈಗ ರಾಜಕೀಯ ತಿರುವು ಪಡೆದಿದ್ದು, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಲಖಿಂಪುರಕ್ಕೆ ಹೊರಟಿದ್ದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ಈ ನೀತಿಯನ್ನು ಸಿದ್ದರಾಮಯ್ಯ ಖಂಡಿಸಿದ್ದಾರೆ. 'ರೈತರ‌ ಹತ್ಯೆ ನಡೆದ ಸ್ಥಳಕ್ಕೆ ಭೇಟಿ‌ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವ ಯೋಗಿ ಆದಿತ್ಯನಾಥ್ ಸರ್ಕಾರದ ಕೃತ್ಯ ಖಂಡನೀಯ' ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸಹ ಉತ್ತರ ಪ್ರದೇಶದ ಘಟನೆ ಬಗ್ಗೆ ಟ್ವೀಟ್ ಮಾಡಿದ್ದಾರೆ. 'ಲಖಿಂಪುರದಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ಕಾಳಜಿ ಹೊಂದಿದ್ದೇನೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ನಡೆಯುತ್ತಿರುವ ಬೆಳವಣಿಗೆಗಳನ್ನು ನಾನು ಗಮನಿಸುತ್ತಿದ್ದೇನೆ. ಮೃತಪಟ್ಟ ರೈತರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತೇನೆ' ಎಂದು ದೇವೇಗೌಡರು ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಖಂಡಿಸಿ ಟ್ವೀಟ್ ಮಾಡಿದೆ. 'ರೈತವಿರೋಧಿ ಕೃಷಿ ಕಾಯ್ದೆಗಳ ವಿರೋಧಿ ಪ್ರತಿಭಟನೆಗೆ 10 ತಿಂಗಳು ಕಳೆದಿವೆ. ಇಷ್ಟು ದಿನಗಳಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು, ದಿಕ್ಕು ತಪ್ಪಿಸಲು, ಅಪರಾಧಿಗಳನ್ನಾಗಿಸಲು ಬಿಜೆಪಿ ಹಲವು ಕಸರತ್ತು ನಡೆಸಿತ್ತು. ಈಗ ಸ್ವತಃ ಕೇಂದ್ರ ಸಚಿವರೇ ಕಾರು ಹರಿಸಿ ರೈತರನ್ನು ಕೊಲೆ ಮಾಡಲು ಮುಂದಾಗಿದ್ದಾರೆ. ಬಿಜೆಪಿ ಕೊಲೆಗಡುಕರ ಪಕ್ಷ ಎಂದರೆ ತಪ್ಪಾಗದು' ಎಂದು ಪಕ್ಷ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಭಾನುವಾರ ನಡೆದಿದ್ದೇನು?; ಭಾನುವಾರ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಗ್ರಾಮವೊಂದರಲ್ಲಿ ಇತ್ತು. ಕಾರ್ಯಕ್ರಮದ ಬಳಿಕ ರಾಜ್ಯ ಸಚಿವ ಅಜಯ್ ಮಿಶ್ರಾ ನೀಡಿದ ಹೇಳಿಕೆಯಿಂದ ರೊಚ್ಚಿಗೆದ್ದ ರೈತರು ಕಾರನ್ನು ಅಡ್ಡಗಟ್ಟಲು ಪ್ರಯತ್ನ ನಡೆಸಿದ್ದರು. ಆಗ ಕಾರು ಹರಿದು ನಾಲ್ವರು ಮೃತಪಟ್ಟಿದ್ದಾರೆ. ಆಗ ರೈತರು ಸಚಿವರ ಬೆಂಗಾವಲು ಕಾರನ್ನು ಅಡ್ಡಗಟ್ಟಿ ಬೆಂಕಿ ಹಚ್ಚಿದ್ದರು. ಈ ಹಿಂಸಾಚಾರದಲ್ಲಿ 4 ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+