ಉತ್ತರ ಪ್ರದೇಶದಲ್ಲಿ ಶ್ರೀರಾಮ ಸೇನೆ ಬ್ಯಾನ್ ಮಾಡಿದ್ದು ಯಾಕೆ? ಯೋಗಿ ಹೇಳಬೇಕು: ಡಿಕೆ ಸುರೇಶ್

ರಾಮನಗರ,ಮೇ5: ರಾಜ್ಯ ರಾಜಕಾರಣದ ಚುನಾವಣಾ ಭರಾಟೆಯಲ್ಲಿ ಜೋರಾಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರು ರಾಜಕೀಯ ಪಕ್ಷಗಳು ಭರಪೂರ ಪ್ರಣಾಳಿಕೆಯನ್ನ ನೀಡಿದ್ದು, ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್‌ ಭರವಸೆಗೆ ಬಿಜೆಪಿಗೆ ಚುನಾವಣೆ ಅಸ್ತ್ರವಾಗಿದ್ದು, ಬಿಜೆಪಿಯ ನಾಯಕರು ಕಾಂಗ್ರೆಸ್‌ ಭರವಸೆ ಕುರಿತು ಕಿಡಿಕಾರಿದ್ದು, ಸಂಸದ ಡಿ ಕೆ ಸುರೇಶ್‌ ಶ್ರೀರಾಮಸೇನೆ ವಿಚಾರವನ್ನ ಪ್ರಸ್ತಾಪಿಸಿದ್ದಾರೆ.

ಹೌದು, ರಾಮನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಶ್ರೀರಾಮ ಸೇನೆ ಬ್ಯಾನ್ ಮಾಡಿದ್ದು ಯಾಕೆ ಎಂಬುದನ್ನು ಯೋಗಿ ಆದಿತ್ಯನಾಥ್‌ ಹೇಳಬೇಕು ಎಂದು ಕಾಂಗ್ರೆಸ್‌ ಸಂಸದ ಡಿ ಕೆ ಸುರೇಶ್‌ ಪ್ರಶ್ನಿಸಿದ್ದಾರೆ.

Yogi Should Tell Why Shri Ram Sena Was Banned In Uttar Pradesh Says DK Suresh

ಬಿಜೆಪಿ ಸರ್ಕಾದ ಅಧಿಕಾರದಲ್ಲಿರುವ ಮೂರು ರಾಜ್ಯಗಳಲ್ಲಿ ಶ್ರೀರಾಮ ಸೇನೆ ಬ್ಯಾನ್ ಆಗಿದೆ. ಯಾಕೆ ಬ್ಯಾನ್ ಮಾಡಿದ್ದಾರೆ ಎಂದು ಬಿಜೆಪಿಗರು ಹೇಳಬೇಕು. ಚುನಾವಣೆ ಹೊಸ್ತಿಲಲ್ಲಿ ಗೆಲ್ಲಲು ಆಗದೆ ಧರ್ಮದ ಹೆಸರಿನಲ್ಲಿ ಅಡ್ಡ ಬರುತ್ತಿರುವುದು ಒಳ್ಳೆಯದಲ್ಲ ಎಂದು ಬಿಜೆಪಿನಾಯಕರ ವಿರುದ್ದ ಕಿಡಿಕಾರಿದ್ದಾರೆ.

ನಾವು ಸಹ ಹಿಂದೂಗಳು, ಹಿಂದುತ್ವದ ಬಗ್ಗೆ ಬಿಜೆಪಿಯಿಂದ ಸಲಹೆ ಪಡೆಯಬೇಕಾಗಿಲ್ಲ. ನಾವೂ ದೇವಸ್ಥಾನಕ್ಕೆ ಹೋಗಿ ದೇವರ ಪೂಜೆ ಮಾಡುತ್ತೇವೆ. ಆದರೆ ಚುನಾವಣಾ ಪ್ರಚಾರದಲ್ಲಿ ರಾಮ ಮತ್ತು ಹನುಮನ ತಂದು ಪೂಜೆ ಮಾಡುವುದಿಲ್ಲ. ವೋಟಿಗಾಗಿ ಪೂಜೆ ಮಾಡುವವರಿಗೆ ಜನ ಚುನಾವಣೆಯಲ್ಲಿ ಉತ್ತರಿಸಲಿದ್ದಾರೆ ಎಂದು ಕಾಂಗ್ರೆಸ್‌ ಪ್ರಣಾಳಿಕ ವಿರೋಧಿಸಿದ ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.

ಕನಕಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಮಾಡುವ ವಿಚಾರವಾಗಿ ಮಾತನಾಡಿದ ಅವರು, ಯಾರು ಬೇಕಾದರೂ ಬಂದು ಪ್ರಚಾರ ಮಾಡಲಿ. ಅಮಿತ್ ಶಾ ಬಂದರೂ ಸಂತೋಷ, ಪ್ರಧಾನಿ ನರೇಂದ್ರ ಮೋದಿ ಬಂದರೂ ಸಂತೋಷ. ಅವರಿಬ್ಬರೂ ಮೇಕೆದಾಟು ಯೋಜನೆಗೆ ಯಾವಾಗ ಅನುಮತಿ ಕೊಡುತ್ತೀರಾ? ಎಂದು ಪ್ರಶ್ನಿಸಿದ ಅವರು, ಮೇಲೆದಾಟು ಯೋಜನೆ ಬಗ್ಗೆ ನಿಲುವು ಸ್ಪಷ್ಟಪಡಿಸಲಿ ಎಂದು ಹೇಳಿದರು.

Yogi Should Tell Why Shri Ram Sena Was Banned In Uttar Pradesh Says DK Suresh

ಇನ್ನೂ ಕನಕಪುರದಲ್ಲಿ ಭಯದ ವಾತಾವರಣ ಇದೆ ಎಂಬ ಬಿ.ಎಲ್ ಸಂತೋಷ್ ಹೇಳಿಕೆ ವಿಚಾರವಾಗಿ ಮಾತನಾಡಿ, ಬಿ.ಎಲ್ ಸಂತೋಷ್ ಅವರಿಗೆ ನಾನೇ ಎಲ್ಲಾ ರೀತಿಯ ರಕ್ಷಣೆ ನೀಡುತ್ತೇನೆ. ಅವರೇ ಮನೆಮನೆಗೆ ಬಂದು ಮತ ಕೇಳಲಿ. ನಾನು ಒಂದು ಮಾತು ಹೇಳಿದ್ರೆ ಸಾಕು ಅವರಿಗೆ ರಕ್ಷಣೆ ಸಿಗುತ್ತದೆ. ಅದಕ್ಕಾಗಿ ಬಿಎಸ್‍ಎಫ್‍ನ ಅಗತ್ಯವಿಲ್ಲ ಎಂದು ಬಿ.ಎಲ್ ಸಂತೋಷ್ ಅವರಿಗೆ ಕುಟುಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+