Who is the next CM: ನೀವೇ ನಮ್ಮ ಮುಂದಿನ ಸಿಎಂ; ಅಭಿಮಾನಿಗಳಿಂದ ಸಿದ್ದರಾಮಯ್ಯ, ಡಿಕೆಶಿ ಮನೆ ಮುಂದೆ ಬ್ಯಾನರ್!
ಬೆಂಗಳೂರು, ಮೇ14: ಕಾಂಗ್ರೆಸ್ ರಾಜ್ಯದಲ್ಲಿ ಭಾರೀ ಬಹುಮತದಿಂದ ಗೆಲುವು ಸಾಧಿಸುತ್ತಿದ್ದಂತೆ ಮುಖ್ಯಮಂತ್ರಿ ಯಾರು ಎಂಬ ಲೆಕ್ಕಾಚಾರ ಜೋರಾಗಿದೆ. ಮೊದಲನಿಂದಲೂ ಕೆಪಿಸಿಸಿ ಅಧ್ಯಮಕ್ಷ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಪೈಪೋಟಿ ಏರ್ಪಟ್ಟಿದ್ದು, ಇದೀಗ ಸಿಎಂ ರೇಸ್ ನಲ್ಲಿ ಹಲವರ ಹೆಸರು ಕೇಳಿ ಬರುತ್ತಿದೆ.
ಹೌದು, ಶನಿವಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮುಚ್ಚೂಣಿ ನಾಯಕರಾಗಿದ್ದು, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪೈಕಿ ಯಾರು ಸಿಎಂ ಆಗಬಹುದು ಅನ್ನೋ ಚರ್ಚೆ ಬಿರುಸುಗೊಂಡಿದೆ.

ಇನ್ನೂ ಬೆಂಗಳೂರಿನ ಸಿದ್ದರಾಮಯ್ಯ ಅವರ ನಿವಾಸದ ಬಳಿ ಮುಂದಿನ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಪೋಸ್ಟರ್ ಗಳು ಇದೀಗ ಗಮನ ಸೆಳೆದಿದೆ. ಮೊದಲಿನಿಂದಲೂ ಸಿದ್ದರಾಮಯ್ಯ ಅವರು ಯಾವುದೇ ಸಭೆ ಸಮಾರಂಭಗಳಿಗೆ ಹೋದರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಘೋಷಣೆಗಳು ಕೇಳಿ ಬರುತ್ತಿತ್ತು, ಇದೀಗ ಸಿಎಂ ಯಾರು ಎಂಬ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆ ನಡೆಯುತ್ತಿದ್ದು, ಅಭಿಮಾನಿಗಳ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬ್ಯಾನರ್ ಸಾಕಷ್ಟು ವೈರಲ್ ಆಗುತ್ತಿದೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು ಎಂದು ಪೋಸ್ಟರ್ ಹಾಕಿದ್ದಾರೆ. ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯೇ ನಡೆದಿಲ್ಲ, ಜೊತೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯೇ ಆಗಿಲ್ಲ. ಈ ನಡುವೆ ಅಭಿಮಾನಿಗಳು ನಮ್ಮ ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಬ್ಯಾನರ್ ಹಾಕಿಕೊಂಡಿದ್ದಾರೆ.

ಇತ್ತ ಸಿಎಂ ರೇಸ್ ನಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲೂ ಡಿ ಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿ ಎಂದು ಬ್ಯಾನರ್ ಹಾಕಿದ್ದು, ಅಭಿಮಾನಿಗಳು ಶುಭಾಶಯವನ್ನ ಕೋರಿದ್ದಾರೆ.
ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಸಿಎಂ ರೇಸ್ ನಡುವೆ ದಲಿತ ಸಿಎಂ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಮುಂದಿನ ಸಿಎಂ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವೈರಲ್ ಆಗುತ್ತಿದೆ.
ಒಟ್ನಲಿ ಉತ್ತಮ ಬಹುಮತ ಪಡೆದ ಕಾಂಗ್ರೆಸ್ ಪಾಳುದಲ್ಲಿ ಸಾಕಷ್ಟು ಸರಣಿ ಸಭೆಗಳು ನಡೆಸುತ್ತಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್, ಪೈಕಿ ಯಾರು ಸಿಎಂ ಆಗಲಿದ್ದಾರೆ ಎನ್ನುವುದು ಎರಡ್ಮೂರು ದಿನಗಳಲ್ಲಿ ಗೊತ್ತಾಗಲಿದೆ.












Click it and Unblock the Notifications