ಹಾಸನ: ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಸಾವು; ಶವ ಕೊಡದ ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಪ್ರತಿಭಟನೆ
ಹಾಸನ,ನವೆಂಬರ್ 23: ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವಂತಹ ಘಟನೆ ಹಾಸನ-ಬೇಲೂರು ರಸ್ತೆಯ ಸೂಲದೇವರಹಳ್ಳಿ ಬಳಿ ನಡೆದಿದೆ.
ಹೌದು, ಬುಧವಾರ ಸಂಜೆ ಹಾಸನ-ಬೇಲೂರು ರಸ್ತೆಯ ಸೂಲದೇವರಹಳ್ಳಿ ಬಳಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗೊಂಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿವ್ಯ (18) ಹಾಗೂ ಪ್ರಜ್ವಲ್ (24) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇತ್ತ ಬಾಕಿ ಬಿಲ್ ಪಾವತಿ ನೆಪ ಹೇಳಿ ಮೃತದೇಹ ಕೊಡುತ್ತಿಲ್ಲ ಎಂದು ಸಂಬಂಧಿಕರು ಆರೋಪ ಮಾಡಿದ್ದು, ಖಾಸಗಿ ಆಸ್ಪತ್ರೆ ಎದುರು ಮೃತ ಯುವತಿಯ ಕುಟುಂಬಸ್ಥರಿಂದ ಪ್ರತಿಭಟನೆ ಮಾಡಲಾಗಿದೆ.

ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಿವ್ಯ ಸಾವನ್ನಪ್ಪಿದ್ದಾಳೆ. ತೀವ್ರವಾಗಿ ಗಾಯಗೊಂಡಿರುವ ಪ್ರಜ್ವಲ್ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೋಷಕರಿಗೆ ದಿವ್ಯ ಶವ ನೀಡದೆ ಬಾಕಿ ಬಿಲ್ ನೀಡುವಂತೆ ಹೇಳಿದ ಆಸ್ಪತ್ರೆ ಸಿಬ್ಬಂದಿ ಕ್ರಮಕ್ಕೆ ಸಂಬಂಧಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪೋಷಕರಿಗೆ ದಿವ್ಯ ಶವ ನೀಡದೆ ಬಾಕಿ ಬಿಲ್ ನೀಡುವಂತೆ ಹೇಳಿದ ಆಸ್ಪತ್ರೆ ಸಿಬ್ಬಂದಿ ಕ್ರಮಕ್ಕೆ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
ನೀರಿನ ಸಂಪ್ ಸ್ವಚ್ಛತೆಗಿಳಿದಿದ್ದ ಇಬ್ಬರು ಕಾರ್ಮಿಕರ ಸಾವು
ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದ ಶ್ರೀನಿವಾಸ ರೆಡ್ಡಿಗೆ ಸೇರಿದ ಸನ್ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ನಡೆದಿದೆ.
ಹೌದು, ಬಿಹಾರ ಮೂಲದ ಸಹೋದರರಾದ ಚಂದನ್ ರಾಜ್ಬನ್ ಸಿಂಗ್(31), ಪಿಂಟು ರಾಜ್ಬನ್(22) ಮೃತ ಕೂಲಿ ಕಾರ್ಮಿಕರು. ಆ್ಯಸಿಡ್ ಹಾಕಿ ವಾಟರ್ ಟ್ಯಾಂಕ್ ಸ್ವಚ್ಛಗೊಳಿಸಲು ಮುಂದಾಗಿದ್ದರು. ಈ ವೇಳೆ ಉಸಿರುಗಟ್ಟಿ ನೀರಿನ ಸಂಪ್ನಲ್ಲೇ ಮೃತಪಟ್ಟಿದ್ದಾರೆ. ಕಾರ್ಮಿಕರ ರಕ್ಷಣೆಗೆ ಮುಂದಾಗಿದ್ದ ಜಗದೀಶ್, ಶ್ರೀನಿವಾಸರೆಡ್ಡಿ ಸಹ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.












Click it and Unblock the Notifications