Get Updates
Get notified of breaking news, exclusive insights, and must-see stories!

Bengaluru Rural: ಬೆಂಗಳೂರು ಗ್ರಾಮಾಂತರದಲ್ಲಿ ಯುವ ಮತದಾರರ ಸಂಖ್ಯೆ ಹೆಚ್ಚಳ

ಬೆಂಗಳೂರು, ಜನವರಿ 07: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟಗೊಂಡಿದ್ದು, ಜಿಲ್ಲೆಯಲ್ಲಿ 9,05,724 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್‌ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025ರ ಸಂಬಂಧ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲೆಯ ನಾಲ್ಕು ತಾಲೂಕುಗಳ ಎಲ್ಲಾ ಮತಗಟ್ಟೆಗಳಲ್ಲಿ, ಮತದಾರ ನೋಂದಣಾಧಿಕಾರಿ ಕಚೇರಿಯಲ್ಲಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಈ ಕಛೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ.

Youth Voter Numbers Rise In Bengaluru Rural District

2024ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್-2024ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇದರಿಂದ 18 ವರ್ಷಗಳನ್ನು ಪೂರೈಸಿದ ಯುವಕರು ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರಣೆಯವರೆಗೆ ಕಾಣುವುದನ್ನು ತಪ್ಪಿಸಲಾಗಿದೆ ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮಾತ್ರ ಚಲಾವಣೆಗೆ ಅವಕಾಶ ದೊರೆಯಲಿದೆ ಎಂದರು.

ಜಿಲ್ಲೆಯಲ್ಲಿ ಈಗ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 9,05,724 ಮತದಾರರು ಇದ್ದಾರೆ. ಇದರಲ್ಲಿ 4,46,918 ಪುರುಷ ಮತದಾರರು ಮತ್ತು 4,58,659 ಮಹಿಳಾ ಮತದಾರರು ಹಾಗೂ 147 ಇತರೆ ಮತದಾರರು ಇದ್ದಾರೆ.

Youth Voter Numbers Rise In Bengaluru Rural District

ಒಟ್ಟು ಮತದಾರರ ಪೈಕಿ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕರು, 13,431 ವಿಶೇಷ ಚೇತನ ಮತದಾರರು ಹಾಗೂ 121 ಸೇವಾ ಮತದಾರರಿದ್ದಾರೆ ಎಂದರು.

ಜಿಲ್ಲೆಯ 4 ತಾಲೂಕುಗಳಲ್ಲಿನ ಮತದಾರರ ಪೈಕಿ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರೇ ಇದ್ದಾರೆ. ದೊಡ್ಡಬಳ್ಳಾಪುರದಲ್ಲಿ ಒಟ್ಟು 2,21,297 ಮತದಾರರಿದ್ದು, ಅದರಲ್ಲಿ 1,12,171 ಮಹಿಳಾ ಮತದಾರರು ಹಾಗೂ 1,09,125 ಪುರುಷ ಮತದಾರರಿದ್ದಾರೆ. ಹೊಸಕೋಟೆಯಲ್ಲಿ ಒಟ್ಟು 2,40,998 ಮತದಾರರಿದ್ದು, ಅದರಲ್ಲಿ 1,21,543 ಮಹಿಳೆ ಹಾಗೂ 1,19,434 ಪುರುಷ ಮತದಾರರು ಇದ್ದಾರೆ. ದೇವನಹಳ್ಳಿಯಲ್ಲಿ ಒಟ್ಟು 2,18,343 ಮತದಾರರಿದ್ದು, 1,10,457 ಮಹಿಳಾ ಹಾಗೂ 1,07,869 ಪುರುಷ ಮತದಾರರಿದ್ದಾರೆ. ನೆಲಮಂಗಲದಲ್ಲಿ 2,25,086 ಮತದಾರರ ಪೈಕಿ 1,14,488 ಮಹಿಳೆ ಹಾಗೂ 1,10,490 ಪುರುಷ ಮತದಾರರಿದ್ದಾರೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಮತದಾರರ ಲಿಂಗಾನುಪಾತದಲ್ಲಿ ಸಾವಿರ ಪುರುಷರಿಗೆ 1027 ಮಹಿಳೆಯರಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರದಲ್ಲಿ 1028, ಹೊಸಕೋಟೆಯಲ್ಲಿ 1018, ದೇವನಹಳ್ಳಿ 1024 ಹಾಗೂ ನೆಲಮಂಗಲದಲ್ಲಿ ಅತಿ ಹೆಚ್ಚು 1037 ಲಿಂಗಾನುಪಾತ ಕಂಡುಬಂದಿದೆ. ಹೊಸಕೋಟೆ 3646, ದೇವನಹಳ್ಳಿ 3767 ಹಾಗೂ ದೊಡ್ಡಬಳ್ಳಾಪುರ 3399 ಹಾಗೂ ನೆಲಮಂಗಲದಲ್ಲಿ 2619 ಸೇರಿದಂತೆ ಒಟ್ಟು 12,624 ಮಂದಿ ವಿಶೇಷಚೇತನ ಮತದಾರರಿದ್ದಾರೆ. ಜೊತೆಗೆ 85 ವರ್ಷ ಮೇಲ್ಪಟ್ಟ 11,114 ಹಿರಿಯ ನಾಗರಿಕ ಮತದಾರಿದ್ದಾರೆ. ಇನ್ನು ಸೇವಾ ಮತದಾರರು 128 ಮಂದಿ ಇದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಾದ್ಯಂತ ಕಾಲೇಜುಗಳಲ್ಲಿ ಮತದಾರರ ನೋಂದಣಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಅಂತಿಮ ಮತದಾರರ ಪಟ್ಟಿಯಲ್ಲಿ 18 ರಿಂದ 19 ವರ್ಷದೊಳಗಿನ 14,817 ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4173, ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3808, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3886, ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2950 ಯುವ ಮತದಾರರಿದ್ದಾರೆ.

ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1141 ಮತಗಟ್ಟೆಗಳಿವೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 293 ಮತಗಟ್ಟೆ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 294, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 276, ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 278 ಮತಗಟ್ಟೆಗಳಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+