ಯೂಟ್ಯೂಬ್ ಚಾನೆಲ್‌ಗಳ ಪ್ರಾರಂಭಕ್ಕೆ ಇನ್ಮುಂದೆ ಲೈಸೆನ್ಸ್: ಸಿ.ಎಂ ಸಿದ್ದರಾಮಯ್ಯ ಹೇಳಿದ್ದೇನು ?
ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಯೂಟ್ಯೂಬ್ ಚಾನೆಲ್‌ಗಳ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಈ ರೀತಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೂಟ್ಯೂಬ್ ಚಾನೆಲ್‌ಗಳಿಗೆ ಲೆಸೆನ್ಸ್ ಕಡ್ಡಾಯಗೊಳಿಸುವ ಬಗ್ಗೆ ಮಾತನಾಡಿದ್ದು, ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬ್ಲಾಕ್ ಮೇಲ್ ಹಾಗೂ ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯುಟ್ಯೂಬ್ ಚಾನಲ್‌ಗಳು ಸಮಾಜಕ್ಕೆ ಶಾಪ ಆಗಿವೆ. ಈ ರೀತಿಯ ಯುಟ್ಯೂಬ್ ಚಾನಲ್‌ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಅನ್ನು ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ, ಮಾತನಾಡಿರುವ ಅವರು ಸುಳ್ಳು ಸುದ್ದಿ ಮತ್ತು ಯೂಟ್ಯೂಬ್ ಚಾನೆಲ್‌ಗಳ ಬಗ್ಗೆ ಮಾತನಾಡಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿಯಲು ನಮ್ಮ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ. ಆದರೆ, ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ.
ಮುಂದುವರಿದು ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ನಿರಂತರವಾಗಿ ತೋರಿಸುವಾಗಲೂ ಯಾಕೆ ಈ ರೀತಿ ತೋರಿಸುತ್ತಿದ್ದೀರಿ. ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದು ಹೇಳಿದ್ದಾರೆ.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್‌ಗಳು ತೋರಿಸಿದ್ದೆಲ್ಲವೂ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಈ ರೀತಿ ಎಲ್ಲಾ ತೋರಿಸಿದರೆ ಜನ ಒಪ್ಪುತ್ತಾರೆಯೇ ಎಂದು ಯೋಚನೆ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.












Click it and Unblock the Notifications