ವೈ.ಎಸ್.ವಿ.ದತ್ತಗೆ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ

ಬೆಂಗಳೂರು, ಜನವರಿ 03: ಕಳೆದ ವಿಧಾಣಸಭೆ ಚುನಾವಣೆಯಲ್ಲಿ ಸೋತು ನಿರಾಸೆ ಅನುಭವಿಸಿರುವ ಜೆಡಿಎಸ್‌ನ ಹಿರಿಯ ಮುಖಂಡ ವೈಎಸ್‌ವಿ.ದತ್ತ ಅವರಿಗೆ ಪಕ್ಷವು ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನವನ್ನು ನೀಡಿದೆ.

ಇಂದು ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಹಿರಿಯ ಹಾಗೂ ಸಜ್ಜನ ರಾಜಕಾರಿಣಿ ಎನಿಸಿಕೊಂಡಿರುವ ದತ್ತ ಅವರನ್ನು ಎಂಎಲ್‌ಸಿ ಮಾಡಬೇಕು ಎಂಬ ಕೂಗು ಕೇಳಿಬಂದಿತ್ತು. ಆದರೆ ಜೆಡಿಎಸ್ ವರಿಷ್ಠರು ಈಗ ಅವರಿಗೆ ಪಕ್ಷದಲ್ಲಿ ಹುದ್ದೆ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ಸಲುವಾಗಿ ದತ್ತ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಅಲ್ಲದೆ ಸ್ವಪಕ್ಷೀಯನಿಂದಲೇ ಹಿನ್ನಡೆ ಅನುಭವಿಸಿ ಪಕ್ಷದ ಮೇಲೆ ಮುನಿಸಿಕೊಂಡಿದ್ದ ದತ್ತ ಅವರಿಗೂ ಸಮಾಧಾನ ಮಾಡಲು ಈ ತಂತ್ರ ಅನುಸರಿಸಲಾಗಿದೆ.

YSV Datta selected as JDS campaigning comity president

ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ದೇವೇಗೌಡರು ಸಭೆಯಲ್ಲಿ ತಿಳಿಸಿದ್ದಾಗಿ ತಿಳಿದುಬಂದಿದೆ. ಆದರೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ಕೊಟ್ಟಿರುವ ಕಾರಣ ಲೋಕಸಭೆ ಚುನಾವಣೆಗೆ ದತ್ತ ಅವರಿಗೆ ಟಿಕೆಟ್‌ ನೀಡುತ್ತಾರೆಯೋ ಇಲ್ಲವೋ ಎಂಬ ಅನುಮಾನ ಜಾಗೃತವಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋತಿರುವ ದತ್ತ ಅವರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಬೇಕು ಎಂಬ ಕೂಗು ಸಹ ಕೇಳಿಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+