ಕಾಂಗ್ರೆಸ್ ಸೇರ್ಪಡೆಗೊಂಡ ವೈಎಸ್‌ವಿ ದತ್ತಾ, ಮಾಜಿ ಸಚಿವ ಎಚ್. ನಾಗೇಶ್
ಬೆಂಗಳೂರು, ಜನವರಿ 14: ಕಡೂರು ಜೆಡಿಎಸ್ ಶಾಸಕ ವೈಎಸ್‌ವಿ ದತ್ತಾ ಹಾಗೂ ಮುಳುಭಾಗಿಲು ಪಕ್ಷೇತರ ಶಾಸಕ, ಮಾಜಿ ಸಚಿವ ಎಚ್ ನಾಗೇಶ್ ಅವರು ಶನಿವಾರ ಕಾಂಗ್ರೆಸ್ ಸೇರ್ಪಡೆಗೊಂಡರು.
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಇಬ್ಬರನ್ನು ಪಕ್ಷದ ಕಚೇರಿಯಲ್ಲಿ ಬರಮಾಡಿಕೊಂಡರು. ಮುಳಬಾಗಿಲು ನಾಗೇಶ್, ಜೆಡಿಎಸ್ ಮುಖಂಡ, ಮಾಜಿ ಎಂಎಲ್ಸಿ ವೈ.ಎಸ್.ವಿ ದತ್ತ, ಮೈಸೂರಿನ ಬಿಜೆಪಿ ಮುಖಂಡ, ಮೂಡ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಅವರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆದರು.
ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಧ್ರುವನಾರಾಯಣ್, ಹಿರಿಯ ಮುಖಂಡ ಡಾ. ಬಿ ಎಲ್ ಶಂಕರ್, ಮಾಜಿ ಎಂಎಲ್ಸಿ ರಮೇಶ್ ಬಾಬು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ವೈಎಸ್‌ವಿ ದತ್ತಾ, ಎಚ್ ನಾಗೇಶ್, ಮೋಹನ್ ಕುಮಾರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಆಡಳಿತ ಪಕ್ಷವಾದ ಬಿಜೆಪಿ ವಿರುದ್ಧ ನಾಯಕರಲ್ಲಿ ವಿಶ್ವಾಸ ಕಡಿಮೆಯಾಗುತ್ತಿದೆ. ಜನರಿಗೆ ಉತ್ತಮ ಆಡಳಿತ ಕೊಡಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಲವಾರು ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಇದು ಆರಂಭ ಅಷ್ಟೇ ಇನ್ನೂ ಹಲವರು ಜನ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈಗ ದತ್ತಾ ಹಾಗೂ ನಾಗೇಶ್, ಮೋಹನ್ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಆಡಳಿತರೂಢ ಬಿಜೆಪಿ ಕೊಟ್ಟ ಅಧಿಕಾರವನ್ನೇ ಬಿಟ್ಟು ಕೊಟ್ಟು ಎಚ್ ನಾಗೇಶ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಾನು 40ಕ್ಕೂ ಹೆಚ್ಚು ವರ್ಷದಿಂದ ವೈಎಸ್‌ಎಸ್‌ವಿ ದತ್ತಾ ಅವರು ಗೊತ್ತು. ಅವರು ಪಾಠ ಹೇಳುವಾಗ ನ್ಯಾಷನಲ್ ಕಾಲೇಜಿನಲ್ಲಿ ನಾನು ವಿದ್ಯಾರ್ಥಿಯಾಗಿದ್ದೇ. ಕಡೂರಿನಲ್ಲಿ ಎರಡು ಬಾರಿ ಶಾಸಕರಾಗಿ ಗೆದ್ದು ಜೆಡಿಎಸ್‌ನಲ್ಲಿ ಭವಿಷ್ಯವಿಲ್ಲ ಎಂದ ಕಾಂಗ್ರೆಸ್‌ಗೆ ಬರುತ್ತಿದ್ದಾರೆ ಅವರಿಗೆ ಸ್ವಾಗತ ಮಾಡುತ್ತಿದ್ದೇವೆ. ಮೈಸೂರಿನ ಮೂಡ ಅಧ್ಯಕ್ಷರಾಗಿದ್ದ ಮೋಹನ್ ಕುಮಾರ್ ಅವರು ಬಿಜೆಪಿ ಮೇಲೆ ವಿಶ್ವಾಸವಿಲ್ಲದೆ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದರು.












Click it and Unblock the Notifications