ಯುಗಾದಿ ಗಿಫ್ಟ್ :ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ

ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ಸಿಹಿ ಸುದ್ದಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದೆ. ಜನವರಿ 01,2017ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆಯನ್ನು ಶೇ 3ರಷ್ಟು ಹೆಚ್ಚಿಸಲಾಗಿದೆ.

ಬೆಂಗಳೂರು, ಮಾರ್ಚ್ 29: ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಕೊಡುಗೆಯಾಗಿ ಕಾಂಗ್ರೆಸ್ ಸರ್ಕಾರ ಮಂಗಳವಾರ ಸಂಜೆ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಟ್ಟಿಭತ್ಯೆಯನ್ನು ಶೇ.3ರಷ್ಟು ಏರಿಕೆ ಮಾಡಿದ್ದಾರೆ. ಈ ಬಗ್ಗೆ ಹಣಕಾಸು ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಕಳೆದ ವರ್ಷದ ದೀಪಾವಳಿ ಹಬ್ಬದ ನಂತರ ಹೇವಿಲಂಬಿ ಸಂವತ್ಸರ ಯುಗಾದಿಗೆ ಈ ಗಿಫ್ಟ್ ಸಿಕ್ಕಿದೆ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ ವಿಳಂಬ ನೀತಿ ಅನುಸರಿಸಿತು.[ದೀಪಾವಳಿ ಗಿಫ್ಟ್ :ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ]

ಅಲ್ಲದೆ, ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲು ಮುಂದಾಗಿಲ್ಲದಿರುವುದು ನೌಕರರ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ, ಶಿಫಾರಸು ಅನುಷ್ಠಾನಗೊಳಿಸಲು ಸಮಿತಿ ರಚಿಸಲಾಗಿದ್ದು, 2018ರಲ್ಲಿ ಇದರ ಪ್ರಯೋಜನ ಸಿಗಲಿದೆ.

Yugadi Festival Gift: Siddaramaiah Government hikes Dearness Allowance

ಈ ಮುಂಚೆ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ. 33 ರಿಂದ ಶೇ36ರಷ್ಟು ಹೆಚ್ಚಿನ ಸಂಬಳ ಏರಿಕೆಯಾಗಿ ಅಥವಾ ಶೇ.4.25ರಷ್ಟು ಏರಿಕೆ ಮಾಡಿ, ಶೇ 40.25ಗೆ ತರಲಾಗಿತ್ತು. ಈಗ ಜನವರಿ 01, 2017ಕ್ಕೆ ಅನ್ವಯವಾಗುವಂತೆ ಶೇ 3ರಷ್ಟು ಏರಿಕೆ ಮಾತ್ರ ಕಾಣಬಹುದಾಗಿದೆ.[ಕೇಂದ್ರ ನೌಕರರ ತುಟ್ಟಿಭತ್ಯೆ ಶೇ 2 ರಷ್ಟು ಹೆಚ್ಚಳ]

ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ.

ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.

ತುಟ್ಟಿ ಭತ್ಯೆ(dearness allowance) : ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕ ಆಧಾರಿಸಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+