Yuva Nidhi Scheme: ಯುವ ನಿಧಿ ಯೋಜನೆ ನೋಂದಣಿ ಕುರಿತು ಮಹತ್ವದ ಮಾಹಿತಿ

Yuva Nidhi Scheme: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಕೂಡ ಒಂದಾಗಿದೆ. ಇನ್ನು ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ಜನವರಿ 06ರಿಂದ 20ರ ವರೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳಲ್ಲಿ ಆಯೋಜಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.

ಕರ್ನಾಟಕ ಸರ್ಕಾರದ ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗಿ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿದ ಮಹತ್ತರ ಯೋಜನೆ ಆಗಿದೆ.

Yuva Nidhi Scheme January 20 is Last Date for Registration

ಈ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು 3,000 ರೂಪಾಯಿ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ 1,500 ರೂಪಾಯಿ ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. 2023-24ನೇ ಸಾಲಿನಲ್ಲಿ ತೇರ್ಗಡೆಯಾದ 5,27,273 ಅಭ್ಯರ್ಥಿಗಳ ದತ್ತಾಂಶವು ನ್ಯಾಡ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಆಗಿದ್ದರೂ ಸಹ ನಿರೀಕ್ಷಿತ ಮಟ್ಟದಲ್ಲಿ ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ನೋಂದಣಿ ಆಗಿರುವುದಿಲ್ಲ.

ಈ ಹಿನ್ನೆಲೆ ಯುವನಿಧಿ ಯೋಜನೆಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋಂದಾಯಿಸಲು ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ಜನವರಿ 6ರಿಂದ 20ರ ವರೆಗೆ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ಈ ಯೋಜನೆಗಗೆ ನೋಂದಾಯಿಸಿಕೊಳ್ಳಲು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕಾಗಿದೆ.

1. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 06 ವರ್ಷಗಳ ವರೆಗೆ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮದವರೆಗೆ ಅಧ್ಯಯನ ಮಾಡಿದವರು)

* ತೇರ್ಗಡೆ ಹೊಂದಿರುವ 180 ದಿನಗಳ ನಂತರವೂ ಉದ್ಯೋಗ ದೊರಕದಿದ್ದರೆ, ಉನ್ನತ ವ್ಯಾಸಂಗಕ್ಕೆ ದಾಖಲಾಗದೆ ಇರುವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ.

1. ಸ್ವಯಂ ಉದ್ಯೋಗ ಹೊಂದಿಲ್ಲದ ಅಭ್ಯರ್ಥಿಗಳು.

2. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅಭ್ಯರ್ಥಿಗಳು.

ಇಲಾಖಾ ವ್ಯಾಪ್ತಿಯ ಎಲ್ಲಾ ಪದವಿ/ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ಡಿಪ್ಲೋಮ ಕಾಲೇಜುಗಳ ಪ್ರಾಂಶುಪಾಲರುಗಳು 2023 ಹಾಗೂ 2024ನೇ ಸಾಲಿನಲ್ಲಿ ತಮ್ಮ ಕಾಲೇಜುಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ನೋಂದಣಿಗಾಗಿ ತಮ್ಮ ಕಾಲೇಜುಗಳಲ್ಲಿ ಯುವನಿಧಿ ವಿಶೇಷ ನೋಂದಣಿ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಕೇಂದ್ರಕ್ಕೆ ಅತ್ಯವಶ್ಯಕವಾಗಿ ಬೇಕಾದ ಗಣಕಯಂತ್ರ ವ್ಯವಸ್ಥೆ ಹಾಗೂ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲು ಸೂಚಿಸಲಾಗಿದೆ.

ಕಾಲೇಜು ಹಾಗೂ ಸ್ಥಳೀಯ ಮಟ್ಟದಲ್ಲಿ ಬ್ಯಾನರ್/ಪೋಸ್ಟರ್‌ಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರವನ್ನ ಕೈಗೊಂಡು ಅರ್ಹ ಅಭ್ಯರ್ಥಿಗಳಿಂದ ಗರಿಷ್ಠ ಮಟ್ಟದ ನೋಂದಣಿ ಮಾಡಿಸುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

ಕಾಲೇಜುಗಳಲ್ಲಿ ಪ್ರಾಂಶುಪಾಲರು ಯುವನಿಧಿ ವಿಶೇಷ ನೋಂದಣಿ ಅಭಿಯಾನಕ್ಕಾಗಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳು ಹಾಗೂ ಐ.ಟಿ ಕೋ-ಆರ್ಡಿನೇಟರ್‌ಗಳಿಗೆ ಉಸ್ತುವರಿಯನ್ನು ವಹಿಸಿ ಅರ್ಹ ಅಭ್ಯರ್ಥಿಗಳಿಂದ ಅತಿ ಹೆಚ್ಚು ನೋಂದಣಿ ಮಾಡಿಕೊಳ್ಳಲು ಅನುಕೂಲ ಕಲ್ಪಿಸುವಂತೆ ಈ ಮೂಲಕ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವನಿಧಿ ಯೋಜನೆಯ https://yuvanidhischeme.in/ ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+