Yuva Nidhi Scheme: ಯುವನಿಧಿ ಯೋಜನೆಯ ನೋಂದಣಿ ದಿನಾಂಕ ಮುಂದೂಡಿಕೆ-ಮಾಹಿತಿ ತಿಳಿಯಿರಿ

ಬೆಂಗಳೂರು, ಡಿಸೆಂಬರ್‌, 14: ಕಾಂಗ್ರೆಸ್‌ ಸರ್ಕಾರವು ಮಹತ್ವಕಾಂಕ್ಷಿಯ 5 ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಹಾಗೆಯೇ ಈ ಮಹತ್ವಕಾಂಕ್ಷಿಯ ಯೋಜನೆಗಳಲ್ಲಿ ಒಂದಾದ "ಯುವನಿಧಿ"ಗೆ ನೋಂದಣಿ ಪ್ರಕ್ರಿಯೆಯನ್ನು ಸರ್ಕಾರವು ಡಿಸೆಂಬರ್‌ 16ರಂದು ಆರಂಭಿಸುವುದಾಗಿ ಹೇಳಿತ್ತು. ಆದರೆ ಇದೀಗ ಈ ದಿನಾಂಕವನ್ನು ಮುಂದೂಡಿದೆ. ವಿವರ ಇಲ್ಲಿದೆ ಗಮನಿಸಿ.

ಡಿಸೆಂಬರ್‌ 16ರಿಂದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ ಈ ದಿನಾಂಕವನ್ನು ಮುಂದೂಡಿದ್ದು, ಡಿಸೆಂಬರ್‌ 26ರಂದು ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭ ಆಗಲಿದೆ ಎಂದು ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

 Yuva Nidhi Scheme: Registration Date Postponed, know details

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯ ಆಗಲಿದೆ. ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂಪಾಯಿ, ಡಿಪ್ಲೊಮಾ ಹೊಂದಿದವರಿಗೆ 1,500 ಆರ್ಥಿಕ ನೆರವು ನೀಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಮೂಲಕ ಡಿಪ್ಲೋಮಾ, ಪದವೀಧರರಿಗೆ ಶುಭ ಸುದ್ದಿನ್ನು ಅನ್ನು ಸಿಎಂದ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.

4ನೇ ಕಂತಿನ ಹಣ ವರ್ಗಾವಣೆ

ಕಾಂಗ್ರೆಸ್‌ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಹಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ನೀಡಲಾಗುತ್ತಿತ್ತು. ಆದರೆ ಇತ್ತೀಚೆಗಷ್ಟೇ ನಮ್ಮ ಖಾತೆಗೆ ಹಣ ಸಂದಾಯವಾಗಿಲ್ಲ ಎಂದು ಬಹುತೇಕ ಮಹಿಳೆಯರು ಆರೋಪ ಮಾಡಿದ್ದರು. ಬಳಿಕ ತಕ್ಷಣ ಎಚ್ಚೆತ್ತ ಸಚಿವೆ ಲಕ್ಷ್ಮಿ ಕೇಳಿಬಂದಿದ್ದವು. ಇದೀಗ ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾ ಮಾಡಲು ಯೋಜನೆ ಅನುಷ್ಠಾನ ಮಾಡಿದೆ.

ಮನೆ ಯಜಮಾನಿಯ ಹೆಸರು ಮತ್ತು ವಿಳಾಸ, ಆಧಾರ್‌ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳು, ನಿಮ್ಮ ಮೊಬೈಲ್‌ ನಂಬರ್‌ ಹಾಗೂ ಇತರೆ ಮಾಹಿತಿಯನ್ನು ಭರ್ತಿ ಮಾಡಬೇಕಾಗಿದೆ. ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣವು ವರ್ಗಾವಣೆ ಆಗುತ್ತಿದ್ದು, ಮೊದಲ ಹಂತದಲ್ಲಿ 15ಜಿಲ್ಲೆಗಳ ಫಲಾನುಭವಿಗಳು ಪಡೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಇನ್ನು 5,96,268 ಫಲಾನುಭವಿಗಳ ಖಾತೆ ಆಧಾರ್ ಕಾರ್ಡ್​ಗೆ ಲಿಂಕ್ ಆಗಿಲ್ಲ. ಆದರೆ 2,17,536 ಫಲಾನುಭವಿಗಳ ಬ್ಯಾಂಕ್ ಖಾತೆ ಆಧಾರ್‌ನೊಂದಿಗೆ ಲಿಂಕ್ ಆಗಿದ್ದು, ಅವರಿಗೆ ಯೋಜನೆಯ ಹಣ ಜಮಾ ಆಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ ಅಂತಾ ಕನ್ನಡ ನ್ಯೂಸ್‌ ವರದಿ ಮಾಡಿದೆ.
ಈ ಜಿಲ್ಲೆಗಳಲ್ಲಿ 4ನೇ ಕಂತಿನ ಹಣ ಸಂದಾಯವಾಗಿದೆ?

1 ಚಿತ್ರದುರ್ಗ
2 ಬೆಂಗಳೂರು
3 ಕೋಲಾರ
4 ಮಂಡ್ಯ
5 ಬೆಳಗಾವಿ
6. ಬಾಗಲಕೋಟೆ
7. ಧಾರವಾಡ
8. ಹಾಸನ
9. ಬಿಜಾಪುರ
10. ಉತ್ತರ ಕನ್ನಡ
11. ದಾವಣಗೆರೆ
12. ಗದಗ
13. ರಾಯಚೂರು
14. ಕಲಬುರಗಿ
15 ಮೈಸೂರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+