Yuva Nidhi Scheme: ಯುವನಿಧಿ ಯೋಜನೆಗೆ ಜಾರಿಗೆ ಮುಹೂರ್ತ ಫಿಕ್ಸ್ ; ಯಾವ ತಿಂಗಳಿನಿಂದ ನಿಮ್ಮ ಅಕೌಂಟ್ ಗೆ ಹಣ ಗೊತ್ತಾ?
ಬೆಂಗಳೂರು, ಡಿಸೆಂಬರ್ 12: ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಕೊಟ್ಟ ಮಾತಿನಿಂತೆ ಕಾಂಗ್ರೆಸ್ ನಾಯಕರು ಐದು ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದು, ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ 'ಯುವನಿಧಿ' ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಹೂರ್ತ ಫಿಕ್ಸ್ ಮಾಡಿದೆ.
ಹೌದು, ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಟಾರ್ಗೆಟ್ ನೀಡಿದ್ದು, ಲೋಕಸಭಾ ದೃಷ್ಟಿಯಿಂದ ಕೊಟ್ಟ ಮಾತಿನಂತೆ ಗ್ಯಾರಂಟಿಗಳ ಜಾರಿಗೆ ಕಾಂಗ್ರೆಸ್ ಮುಂದಾಗಿದೆ.

ಅದರಂತೆ ಇದೇ ಡಿಸೆಂಬರ್ 21 ರಿಂದ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಮುಂದಿನ ವರ್ಷ ಅಂದರೆ 2024ರ ಜನವರಿಯಲ್ಲಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಇನ್ನೂ ಜನವರಿಯಲ್ಲಿ ಎರಡನೇ ವಾರದಂದು ಯುವ ನಿಧಿ ಯೋಜನೆಯನ್ನ ಜಾರಿಗೊಳ್ಳಲಿದ್ದು, ಫೆಬ್ರವರಿಯಲ್ಲಿ ಪಲಾನುಭವಿಗಳ ಖಾತೆಗೆ ಹಣ ಬರಲಿದೆ ಎನ್ನಲಾಗಿದೆ
ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ 'ಯುವನಿಧಿ' ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು.
— Dr. Sharan Prakash Patil (@S_PrakashPatil) December 12, 2023
ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ. pic.twitter.com/4fIGGDemYF
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಶರಣಪ್ರಕಾಶ್ ಪಾಟೀಲ್, ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗ್ಯಾರಂಟಿ 'ಯುವನಿಧಿ' ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು ಜನವರಿಯಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು. ನಾಡಿನ ಯುವಜನತೆಗೆ ಬೆನ್ನೆಲುಬಾಗಲಿರುವ ಈ ಯೋಜನೆಯಿಂದ ಸುಮಾರು 5 ಲಕ್ಷ ಪದವೀಧರರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ಎಕ್ಸ್(ಟ್ವಿಟ್ಟರ್) ಬರೆದುಕೊಂಡಿದ್ದಾರೆ.

ಯುವ ನಿಧಿ ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿದ್ದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83 ಯೋಜನೆಗಳು ಜಾರಿಯಾಗಿವೆ. ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆ ಜಾರಿಯಾಗಿದ್ದು, ರಾಜ್ಯದ ಜನರು ಇದರ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದೀಗ ಐದನೇ ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಇತ್ತೀಚಿಗೆ ತಿಳಿಸಿದ್ದರು.
ಯುವನಿಧಿ ಯೋಜನೆಗೆ ಯಾರು ಅರ್ಹರು..?
ಯುವನಿಧಿ ಯೋಜನೆಯನ್ನು ವಿದ್ಯಾವಂತ ನಿರುದ್ಯೋಗಿಗಳಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 2022- 23ನೇ ಸಾಲಿನಲ್ಲಿಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದ ವೃತ್ತಿಪರ ಕೋರ್ಸ್ ಒಳಗೊಂಡು ಎಲ್ಲಾ ಪದವೀಧರರು ಈ ಯುವನಿಧಿ ಯೋಜನೆ ಪಡೆಯಲು ಅರ್ಹರಾಗಿದ್ದಾರೆ.
ಪದವೀಧರರಿಗೆ 3,000 ರೂಪಾಯಿ ಹಾಗೂ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸರ್ಕಾರದಿಂದ ಸಿಗಲಿದೆ. ಈ ಭತ್ಯೆಯು ಅಭ್ಯರ್ಥಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ವರೆಗೆ ಸರ್ಕಾರ ನೀಡಲಿದೆ.












Click it and Unblock the Notifications