ಟೌನ್ ಶಿಪ್, ವಿಲ್ಲಾ ಯೋಜನೆಗೆ ಜಮೀನು: ಅಧಿಕಾರಿಗಳಿಗೆ ಜಮೀರ್ ಅಹಮದ್ ಕೊಟ್ಟ ಸೂಚನೆ ಏನು?

ಬೆಂಗಳೂರು, ಆಗಸ್ಟ್‌ 31: ಕರ್ನಾಟಕ ಗೃಹ ಮಂಡಳಿ ವತಿಯಿಂದ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿರುವ ಟೌನ್ ಶಿಪ್ ಹಾಗೂ ವಿಲ್ಲಾ ಯೋಜನೆಗೆ ಅಗತ್ಯ ಜಮೀನು ಗುರುತಿಸುವ ಕಾರ್ಯ ತಕ್ಷಣವೇ ಆರಂಭಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಗೃಹಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಧಾನಿಯ ಐದು ಕಡೆ ತಲಾ ಎರಡು ಸಾವಿರ ಎಕರೆ ಯಲ್ಲಿ ಟೌನ್ ಶಿಪ್ ಹಾಗೂ ತಲಾ 500 ಎಕರೆಯಲ್ಲಿ ನಾಲ್ಕು ಕಡೆ ವಿಲ್ಲಾ ಯೋಜನೆಗೆ ಜಮೀನು ಗುರುತಿಸಿ ಪ್ರಕ್ರಿಯೆ ಆರಂಭಿಸಿ. ಅದಕ್ಕಾಗಿ ಅಧಿಕಾರಿಗಳ ವಿಶೇಷ ತಂಡ ರಚಿಸಲು ನಿರ್ದೇಶನ ನೀಡಿದರು.

Zameer Ahmed Instructs To Identify Land For Township, Villa project

ಟೌನ್ ಶಿಪ್ ಹಾಗೂ ವಿಲ್ಲಾ ಯೋಜನೆ ಕಾಲ ಮಿತಿಯಲ್ಲಿ ಪೂರ್ಣಗೊಳ್ಳ ಬೇಕಾಗಿದೆ. ಹೀಗಾಗಿ ರೂಪು ರೇಷೆ ಹಾಕಿಕೊಂಡು ಪ್ರತ್ಯೇಕ ವಿಭಾಗ ರಚನೆ ಮಾಡಿ ಕಾರ್ಯ ಪ್ರವೃತ್ತರಾಗಿ ಎಂದು ಸೂಚನೆ ನೀಡಿದರು. ರಾಜಧಾನಿಯ ನಾಲ್ಕು ಕಡೆ ಮೆಟ್ರೋ ಸೇರಿ ಸಾರಿಗೆ ಹಾಗೂ ಇತರೆ ಮೂಲ ಸೌಕರ್ಯ ವ್ಯವಸ್ಥೆ ಲಭ್ಯ ಇರುವ ಕಡೆ ಜಮೀನು ಗುರುತಿಸಿ 50:50 ಆಧಾರದಲ್ಲಿ ಜಮೀನು ಮಾಲೀಕರ್ ಜತೆ ಒಪ್ಪಂದ ಮಾಡಿಕೊಂಡು ಬಡಾವಣೆ ನಿರ್ಮಾಣ ಕಾರ್ಯಕ್ಕೆ ವೇಗ ನೀಡಬೇಕು ಎಂದು ಸೂಚಿಸಿದರು.

ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರ ಹೊರತುಪಡಿಸಿ ಇತರೆ ಕಡೆ ಬಿಪಿಲ್ ಕುಟುಂಬ ಗಳಿಗೆ ರಿಯಾಯಿತಿ ದರದಲ್ಲಿ ನಿವೇಶನ ಅಥವಾ ಮನೆ ನಿರ್ಮಿಸಿಕೊಡುವ ಯೋಜನೆ ರೂಪಿಸಬೇಕು ಎಂಬ ಚಿಂತನೆ ಇದೆ. ಈ ಬಗ್ಗೆ ಸಾಧಕ ಬಾಧಕ ಅಧ್ಯಯನ ಮಾಡಿ ವರದಿ ಕೊಡಿ ಎಂದು ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿದರು.

ಸರ್ಕಾರದಿಂದ ಜಮೀನು ಪಡೆದು ಬಡಾವಣೆ ಅಭಿವೃದ್ಧಿ ಅಥವಾ ನಾವೇ ಮಾಲೀಕರ ಜತೆ 50:50 ಒಪ್ಪಂದ ದಡಿ ಬಡಾವಣೆ ಅಭಿವೃದ್ಧಿ ಪಡಿಸಿ ಬಡ ಕುಟುಂಬಗಳಿಗೆ ಸೂರು ಕಲ್ಪಿಸಬಹುದೇ ಎಂಬ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಿ. ಮುಖ್ಯಮಂತ್ರಿ ಅವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು. ಇನ್ನೂ ಜಮೀನು ಸ್ವಾಧೀನ ಸೇರಿದಂತೆ ನ್ಯಾಯಲಯದಲ್ಲಿರುವ 122 ವ್ಯಾಜ್ಯ ಇತ್ಯರ್ಥ ಕ್ಕಾಗಿ ಅದಾಲತ್ ಮಾದರಿಯಲ್ಲಿ ಅರ್ಜಿದಾರರ ಜತೆ ಸಂಧಾನ ಸಭೆ ಏರ್ಪಡಿಸಲು ಸಚಿವರು ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಅನುಷ್ಠಾನ ದಲ್ಲಿರುವ ಗೃಹ ಮಂಡಳಿ ಯೋಜನೆ ಗಳು, ಅದರ ಸ್ಥಿತಿಗತಿ, ಲಭ್ಯ ಇರುವ ಜಮೀನು, ನ್ಯಾಯಾಲಯ ದಲ್ಲಿರುವ ಪ್ರಕರಣ ಕುರಿತು ಸಮಗ್ರ ವರದಿ ನೀಡುವಂತೆ ತಿಳಿಸಿದರು.
ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳ ಸ್ಥಿತಿಗತಿ ಕುರಿತು ಇದೇ ವೇಳೆ ಮಾಹಿತಿ ಪಡೆದರು. ಇನ್ನೂ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಗೃಹ ಮಂಡಳಿ ಆಯುಕ್ತರಾದ ಕವಿತಾ ಮನ್ನಿ ಕೇರಿ, ಪ್ರಧಾನ ಅಭಿಯಂತರ ಶರಣಪ್ಪ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+