ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಸ್ಲಿಂ ಸಮುದಾಯದ ಶಾಸಕರ ಸಭೆ ಕರೆದ ಜಮೀರ್!

By Gururaj
|
Google Oneindia Kannada News

ಬೆಂಗಳೂರು, ಜೂನ್ 25 : ಸಚಿವ ಜಮೀರ್ ಅಹಮದ್ ಖಾನ್ ಮುಸ್ಲಿಂ ಸಮುದಾಯದ ಶಾಸಕರ ಸಭೆ ಕರೆದಿದ್ದಾರೆ. ಜಮೀರ್ ಅಹಮದ್ ಖಾನ್ ಅವರ ಈ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಸೋಮವಾರ ಸಂಜೆ 7 ಗಂಟೆಗೆ ಮುಸ್ಲಿಂ ಸಮುದಾಯದ ಶಾಸಕರ ಸಭೆ ಕರೆದಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಯು.ಟಿ.ಖಾದರ್, ಜಮೀರ್ ಅಹಮದ್ ಖಾನ್ ಇಬ್ಬರು ಸಚಿವರಾಗಿದ್ದಾರೆ.

ಜಮೀರ್ ಅಹಮದ್ ಸಿದ್ದರಾಮಯ್ಯ ಕಾರಿಗೆ ಬೇಡಿಕೆ ಇಟ್ಟಿದ್ದೇಕೆ?ಜಮೀರ್ ಅಹಮದ್ ಸಿದ್ದರಾಮಯ್ಯ ಕಾರಿಗೆ ಬೇಡಿಕೆ ಇಟ್ಟಿದ್ದೇಕೆ?

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮದ್ ಖಾನ್ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ಕರೆದಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್ ಪಕ್ಷದಲ್ಲಿರುವ ಮುಸ್ಲಿಂ ಸಮುದಾಯದ ಶಾಸಕರು, ಎಂಎಲ್‌ಸಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ.

Zameer Ahmed Khan calls Muslim MLA and MLCs meeting

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ತಯಾರಿ ನಡೆಸುತ್ತಿದ್ದಾರೆ. ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಸಿಗಬೇಕಾದ ಪ್ರಾತಿನಿಧ್ಯದ ಕುರಿತು ಚರ್ಚೆ ನಡೆಸಲು ಈ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.

ಬಜೆಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರ್ಜರಿ ಬಳುವಳಿಬಜೆಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರ್ಜರಿ ಬಳುವಳಿ

ಕಳೆದ ವಾರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಎಂ 01, ಜಿ 5734 ನಂಬರ್‌ನ ಟೊಯೋಟಾ ಫಾರ್ಚೂನರ್ ಕಾರು ಬೇಕು ಎಂದು ಬೇಡಿಕೆ ಇಟ್ಟು ಜಮೀರ್ ಅಹಮದ್ ಖಾನ್ ಚರ್ಚೆ ಹುಟ್ಟುಹಾಕಿದ್ದರು.

English summary
Karnataka food and civil supplies department minister Zameer Ahmed Khan called Muslim MLA and MLC's meeting in Bengaluru on June 25, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X